ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

`ಅಮ್ಮ ಪ್ರಶಸ್ತಿ'ಗೆ ಕೃತಿಗಳ ಆಹ್ವಾನ

13ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ


ಗುಲ್ಬರ್ಗ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 13ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ 2012-13ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಳೆದ 12 ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಈಗ ಪ್ರಶಸ್ತಿಗೆ 13 ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ :
ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರು,
ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ಮುನ್ನೂರು ಪ್ರತಿಷ್ಠಾನ
“ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಜಿ. ಕೆ. ಕ್ರಾಸ್, ಊಡಗಿ ರಸ್ತೆ, ಸೇಡಂ-585 222. ಗುಲಬರ್ಗ ಜಿಲ್ಲೆ.
ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ:
9731666052, 8746826004 ಸಂಪಕರ್ಿಸಬಹುದು.
 
 

‍ಲೇಖಕರು G

29 September, 2013

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading