ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ…

ಕಲಬುರಗಿ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ೨೧ ನೇ ವರ್ಷದ ಅಮ್ಮ ಪ್ರಶಸ್ತಿ’ಗಾಗಿ ೨೦೨೦-೨೧ ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.

ಕಳೆದ ೨೦ ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈಗ ‘ಅಮ್ಮ ಪ್ರಶಸ್ತಿ’ಗೆ ೨೧ ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ.

ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿರುತ್ತದೆ. ಆಯ್ಕೆಯಾದ ಐದು ಕೃತಿಗಳಿಗೆ ತಲಾ ಐದು ಸಾವಿರ ರೂ ನಗದು ಪುರಸ್ಕಾರ, ಪ್ರಮಾಣ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು.

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ :
ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರು,
ಸಂಚಾಲಕಿ, ‘ಅಮ್ಮ ನಿಲಯ’,
ರಾಮಚಂದ್ರ ಲೇಔಟ್, ಪಿ.ಡಬ್ಲೂ.ಡಿ. ಕಚೇರಿ ಹತ್ತಿರ,
ಸೇಡಂ-೫೮೫ ೨೨೨.
ಕಲಬುರಗಿ ಜಿಲ್ಲೆ.

ಹೆಚ್ಚಿನ ವಿವರಗಳಿಗಾಗಿ, ಮೊಬೈಲ್: 97316 66052 ಕ್ಕೆ ಸಂಪರ್ಕಿಸಬಹುದು.

‍ಲೇಖಕರು Admin

4 October, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading