ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ೨೩ ನೇ ವರ್ಷದ
ಅಮ್ಮ ಪ್ರಶಸ್ತಿ’ಗಾಗಿ ೨೦೨೩ ಮತ್ತು ೨೦೨೪ ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ೨೩ ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬAಧಪಟ್ಟAತೆ ನೀಡಲಾಗುತ್ತಿರುವ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ಈಗ ೨೪ ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದು. ಆಯ್ಕೆಯಾದ ೫ ಕೃತಿಗಳಿಗೆ ತಲಾ ೫ ಸಾವಿರ ನಗದು ಪುರಸ್ಕಾರ ಮತ್ತು ಸನ್ಮಾನ, ಗೌರವದ ಕಾಣಿಕೆ ನೀಡಿ ಸತ್ಕರಿಸಲಾಗುವುದು.
ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ ೩೦ ಕೊನೆಯ ದಿನಾಂಕವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ :
ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್, ಸಂಚಾಲಕಿ,
ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ
“ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಪಿಡಬ್ಲೂö್ಯಡಿ ಕಚೇರಿ ಹತ್ತಿರ, ಸೇಡಂ – ೫೮೫ ೨೨೨. ಕಲಬುರಗಿ ಜಿಲ್ಲೆ.
ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 97316 66052 ಸಂಪರ್ಕಿಸಬಹುದು.
0 ಪ್ರತಿಕ್ರಿಯೆಗಳು