ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಅಮ್ಮ ಪ್ರಶಸ್ತಿಗೆ ೧೨ ರ ಸಂಭ್ರಮ!

12ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

 

ಗುಲ್ಬರ್ಗ, ಅ. 10- ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 12ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ 2011-12ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.

ಕಳೆದ 11 ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಈ ಪ್ರಶಸ್ತಿಗೆ 12 ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ. ಕೃತಿಗಳನ್ನು ಸ್ವೀಕರಿಸಲು ನವೆಂಬರ್ 5 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ರತ್ನಕಲಾ ಮುನ್ನೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ಮುನ್ನೂರ್ ಪ್ರತಿಷ್ಠಾನ ” ಅಮ್ಮ ನಿಲಯ”, ರಾಮಚಂದ್ರ

ಲೇಔಟ್, ಜಿ.ಕೆ.ಕ್ರಾಸ್,ಊಡಗಿ ರಸ್ತೆ, ಸೇಡಂ-585 222. ಗುಲಬರ್ಗ ಜಿಲ್ಲೆ. ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 9731666052, 8746826004 ಸಂಪಕರ್ಿಸಬಹುದು.

– ಮಹಿಪಾಲರೆಡ್ಡಿ ಮುನ್ನೂರು

‍ಲೇಖಕರು G

11 October, 2012

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading