ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಇಬ್ಬರು ಪಂಜಾಬಿ ಸಾಹಿತಿಗಳಿಗೆ ಕುವೆಂಪು ರಾಷ್ಟ್ರೀಯ ಪ್ರಶಸ್ತಿ ಘೋಷಣೆ

ಪಂಜಾಬಿ ಸಾಹಿತ್ಯದ ಶ್ರೀಮಂತಿಕೆ ಹಾಗೂ ಸತ್ವವನ್ನು ತಮ್ಮ ಕಥೆ, ಕಾದಂಬರಿ, ಅನುವಾದಗಳನ್ನೊಳಗೊಂಡ ವಿಶಿಷ್ಟ ಕೃತಿಗಳ ಮೂಲಕ ಹೆಚ್ಚಿಸಿದ ಬಹು ಮಹತ್ವದ ಹಿರಿಯ ಲೇಖಕರಾ ಶ್ರೀಮತಿ ಅಜೀತ್‌ ಕೌರ್ ಹಾಗೂ ಶ್ರೀ ಗುರುಬಚನ್‌ ಸಿಂಗ್‌ ಭುಲ್ಲರ್ – ಈ ಇಬ್ಬರನ್ನು 2019ರ “ಕುವೆಂಪು ರಾಷ್ಟ್ರೀಯ ಪುರಸ್ಕಾರ”ಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ರಾಷ್ಟ್ರಕವಿ ಕುವೆಂಪುರವರ ಜನ್ಮೋತ್ಸವ ದಿನದಂದು (29-12-2019 ಭಾನುವಾರ) ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕುಪ್ಪಳಿಯಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಪ್ರಶಸ್ತಿಯು ಐದು ಲಕ್ಷ ರೂಪಾಯಿ ಮತ್ತು ಬೆಳ್ಳಿ ಪದಕಗಳನ್ನು ಒಳಗೊಂಡಿರುತ್ತದೆ.

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾದ ನಾಡೋಜ ಪ್ರೊ. ಹಂಪ. ನಾಗರಾಜಯ್ಯನವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ‌ ಚಿರಂಜೀವಿ ಸಿಂಗ್, ಜೆ.ಎನ್.ಯು. ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಪಕ, ಪಂಜಾಬಿ ಲೇಖಕರೂ ಆದ ಪಟಿಯಾಲದ ಪ್ರೊ. ಚಮನಲಾಲ್‌ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿಯ ನಿವೃತ್ತ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿಯವರು ಆಯ್ಕೆ ಸಮಿತಿಯ ಸದಸ್ಯರಾಗಿದ್ದರು. ಪ್ರತಿಷ್ಠಾನದ ಸಮಕಾರ್ಯದರ್ಶಿ ಶ್ರೀ ಕಡಿದಾಳ್‌ ಪ್ರಕಾಶ್‌ ಸಂಚಾಲಕರಾಗಿದ್ದರು.

 

 

 

 

‍ಲೇಖಕರು avadhi

18 November, 2019

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading