ಭಾರತೀಯ ನಕ್ಸಲ್ ಇತಿಹಾಸ ಕಥನ- ‘ಎಂದೂ ಮುಗಿಯದ ಯುದ್ಧ’ ಕೃತಿಯ ಕೊನೆಯ ಭಾಗ ಇಲ್ಲಿದೆ
ಜಗದೀಶ್ ಕೊಪ್ಪ
Give Me a Voice of Thunder
That I may hurl Imprecation on this cannibal
Whose Gruesome Hunger Spares Neither Mother Nor Child
– Ravindranath Tagore
ಅಧಿಕೃತವಾಗಿ 45 ವರ್ಷಗಳನ್ನು, ಅನಧಿಕೃತವಾಗಿ 50ವರ್ಷಗಳನ್ನು ಪೂರೈಸಿರುವ ಭಾರತದ ನಕ್ಸಲ್ ಹೋರಾಟವನ್ನು 2013 ರ ಹೊಸ್ತಿಲಲ್ಲಿ ನಿಂತು ಪರಾಮಶರ್ಿಸಿದರೆ, ಸಂಭ್ರಮ ಪಡುವ ವಿಷಯಕ್ಕಿಂತ ಸಂಕಟ ಪಡುವ ಸಂಗತಿಗಳೇ ಹೆಚ್ಚಾಗಿವೆ.
2010 ರಲ್ಲಿ ಅಜಾದ್ ಅಲಿಯಾಸ್ ಚುರುಕುರಿ ರಾಜ್ ಕುಮಾರ್ ಮತ್ತು 2011 ನವಂಬರ್ ತಿಂಗಳಿನಲ್ಲಿ ಕಿಶನ್ಜಿ ರವರ ಹತ್ಯೆಯಿಂದಾಗಿ ತೀವ್ರ ಹಿನ್ನಡೆ ಅನುಭವಿಸಬೇಕಾದ ನಕ್ಸಲ್ ಹೋರಾಟಕ್ಕೆ 2012 ರಲ್ಲಿೆ ಆರ್.ಕೆ. ಎಂದು ಜನಪ್ರಿಯವಾಗಿದ್ದ ರಾಮಕೃಷ್ಣ ಅವರ ಬಂಧನದಿಂದ ಚೇತರಿಸಿಕೊಳ್ಳಲಾಗದ ಪೆಟ್ಟು ಬಿದ್ದಿತ್ತು. ಮಾವೋವಾದಿ ನಕ್ಸಲ್ ಚಳವಳಿಗೆ ಬೇಕಾದ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ತಯಾರಿಕೆಯಲ್ಲಿ ನಿಪುಣರಾಗಿದ್ದ ರಾಮಕೃಷ್ಣರವರನ್ನು ಕೊಲ್ಕತ್ತ ಪೊಲೀಸರು, ಆಂಧ್ರ ಪೊಲೀಸರ ನೆರವಿನಿಂದ ಕೊಲ್ಕತ್ತ ನಗರದಲ್ಲಿ ರಾಕೆಟ್ ಲಾಂಚರ್ಗಳಿಗೆ ಬೇಕಾದ ಬಿಡಿಭಾಗಗಳನ್ನು ವಕರ್್ಶಾಪ್ ಒಂದರಲ್ಲಿ ತಯಾರಿಸುತ್ತಿದ್ದ ವೇಳೆ ಬಂಧಿಸುವಲ್ಲಿ ಯಶಸ್ವಿಯಾದರು.

ಆಂಧ್ರದ ಕರೀಂನಗರ ಜಿಲ್ಲೆಯ ಹಳ್ಳಿಯಿಂದ ಬಂದಿದ್ದ ರಾಮಕೃಷ್ಣರು 1976 ರಲ್ಲಿ ವಾರಂಗಲ್ನ ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪದವಿ ಪಡೆದು 1978 ರಲ್ಲಿ ಭೂಗತರಾಗುವ ಮೂಲಕ ನಕ್ಸಲ್ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದರು. ಬೆಂಗಳೂರು, ಕೊಲ್ಕತ್ತ. ಚೆನ್ನೈ ನಗರಗಳಲ್ಲಿ ಶಸ್ತ್ರಾಸ್ತ್ರಗಳ ತಯಾರಿಕೆಗೆ ಬೇಕಾದ ಬಿಡಿಭಾಗಗಳನ್ನು ಸಣ್ಣ ಕೈಗಾರಿಕೆಗಳಿಗೆ ಆದೇಶ ನೀಡಿ ತಮಗೆ ಬೇಕಾದ ರೀತಿಯಲ್ಲಿ ತಯಾರಿಸಿಕೊಳ್ಳುತ್ತಿದ್ದರು. ಹೀಗೆ ಬಿಡಿಭಾಗ ಸಂಗ್ರಹಿಸಲು ಕೊಲ್ಕತ್ತ ನಗರಕ್ಕೆ ತೆರಳಿದಾಗ, ಪೊಲೀಸರಿಂದ ಬಂಧಿತರಾದರು. ಸಧ್ಯಕ್ಕೆ ಆಂಧ್ರ ಮೂಲದ ವೇಣು ಮತ್ತು ಗಣಪತಿಯವರನ್ನು ಹೊರತು ಪಡಿಸಿದರೆ ಸೈದ್ಧಾಂತಿಕ ಹಿನ್ನಲೆಯುಳ್ಳ ಒಬ್ಬ ಹಿರಿಯನಾಯಕರನ್ನು ನಕ್ಸಲ್ ಹೋರಾಟದಲ್ಲಿ ಹುಡುಕುವುದು ಕಷ್ಟವಾಗಿದೆ. ಕಳೆದ ಒಂದು ದಶಕದಿಂದ ನಗರಗಳಿಂದ ಹೋರಾಟದತ್ತ ಆಕಷರ್ಿತರಾಗಿ ಬರುತ್ತಿದ್ದ ವಿದ್ಯಾವಂತರ ಸಂಖ್ಯೆ ಸಂಪೂರ್ಣ ಸ್ಥಗಿತಗೊಂಡಿದೆ. ವ್ಯವಸ್ಥೆಯ ವಿರುದ್ಧದ ಹೋರಾಟಕ್ಕೆ ಅರಣ್ಯಕ್ಕೆ ಹೋಗಿ ಬಂದೂಕು ಹಿಡಿಯಬೇಕೆಂಬ ಚಿಂತನೆ ಈಗಿನ ಯುವಜನತೆಗೆ ಸವಕಲು ಮಾದರಿಯಾಗಿದೆ. ಇದೇ ವೇಳೆಗೆ 2010 ರ ಮಾಚರ್್ 23 ರಂದು ನಕ್ಸಲ್ ಚಳವಳಿಯ ಸಂಸ್ಥಾಪಕರಲ್ಲಿ ಒಬ್ಬರಾದ ಹಾಗೂ ಚಾರು ಮುಜುಂದಾರ್ ಸಂಗಾತಿಯಾಗಿದ್ದ ಕನುಸನ್ಯಾಲ್ ತಮ್ಮ ವೃದ್ಧಾಪ್ಯದಲ್ಲಿ ತೀವ್ರ ಬಡತನ ಮತ್ತು ಹದಗೆಟ್ಟ ಆರೋಗ್ಯಕ್ಕೆ ಔಷಧಕೊಳ್ಳಲು ಹಣವಿಲ್ಲದ ಸ್ಥಿತಿಯಲ್ಲಿ ತಮ್ಮ ಮಗಳ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಈಗಿನ ತಲೆಮಾರಿಗೆ ನಕ್ಸಲ್ ಹೋರಾಟ ಕುರಿತಂತೆ ಮರುಚಿಂತನೆಗೆ ಪ್ರೇರೇಪಿಸಿದೆ..
1980 ಮತ್ತು 1990 ದಶಕದಲ್ಲಿ ನಕ್ಸಲ್ ಹೋರಾಟಕ್ಕೆ ಸೇರ್ಪಡೆಯಾದ ಅನಕ್ಷರಸ್ಥ ಆದಿವಾಸಿ ಯುವಕರು ಇತ್ತೀಚೆಗೆ ಚಳವಳಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಇವರಿಗೆ ಮಾವೋ ಆಗಲಿ, ಲೆನಿನ್ ಆಗಲಿ ಅಥವಾ ಕಾಲ್ಸರ್್ ಮಾಕ್ಸರ್್ರವರ ಸಿದ್ಧಾಂತಗಳ ಗಂಧ ಗಾಳಿ ತಿಳಿದಿಲ್ಲ. ಇಂತಹ ಕಾರಣಗಳಿಂದಾಗಿ ಮೃತಪಟ್ಟ ಯೋಧನ ಹೊಟ್ಟೆಯೊಳಗೆ ಸಿಡಿಮದ್ದನ್ನು ತುಂಬಿಸಿ ಇಡುವಂತಹ ಪೈಶಾಚಿಕ ಕೃತ್ಯಗಳಿಗೆ ಅವರು ಮುಂದಾಗುತ್ತಿದ್ದಾರೆ.
ಒಂದು ನೆಮ್ಮದಿಯ ಸಂಗತಿಯೆಂದರೆ, ಇಡೀ ರಾಷ್ಟ್ರಾದ್ಯಂತ ನಕ್ಸಲರು ಮತ್ತು ಸಕರ್ಾರಗಳ ನಡುವೆ ನಡೆಯುತ್ತಿದ್ದ ಸಂಘರ್ಷದಲ್ಲಿ ಹಿಂಸೆಯ ಪ್ರಮಾಣ ಕ್ರಮೇಣ ಇಳಿಮುಖವಾಗುತ್ತಿದೆ. (2012 ರ ಸಮೀಕ್ಷೆಯ ವರದಿ) ಜಾರ್ಖಂಡ್ ಮತ್ತು ಛತ್ತೀಸ್ಗಡ್ ರಾಜ್ಯಗಳನ್ನು ಹೊರತುಪಡಿಸಿದರೆ, ಉಳಿದ ರಾಜ್ಯಗಳಲ್ಲಿ ಆಶಾಭಾವನೆ ಮೂಡುವಂತಿದೆ. ನಕ್ಸಲ್ ಚಳವಳಿಯನ್ನು ಹುಟ್ಟುಹಾಕಿದ ಆಂಧ್ರಪ್ರದೇಶದಲ್ಲಿ ಕೇವಲ 13 ಸಾವುಗಳು ಸಂಭವಿಸಿವೆ. ಜಾರ್ಖಂಡ್ನಲ್ಲಿ 160 ಸಾವು ( 2011 ರಲ್ಲಿ 182 ) ಛತ್ತೀಸ್ಗಡದಲ್ಲಿ 107 ( 2011 ರಲ್ಲಿ 204 ) ಬಿಹಾರದಲ್ಲಿ 43ಸಾವು (2011 ರಲ್ಲಿ 63) ಪಶ್ಚಿಮ ಬಂಗಾಳದಲ್ಲಿ 6 ಸಾವು( 2011 ರಲ್ಲಿ 45) ಹೀಗೆ ಭಾರತದಲ್ಲಿ 2011ರಲ್ಲಿ 1760 ಪ್ರಕರಣಗಳು ನಡೆದು, 611 ನಾಗರೀಕರು ಮತ್ತು 99 ನಕ್ಸಲರು ಮೃತಪಟ್ಟಿದ್ದರೆ, 2012 ರ ಅವಧಿಯಲ್ಲಿ 1365 ಪ್ರಕರಣಗಳು ದಾಖಲಾಗಿ 409 ನಾಗರೀಕರು ಮತ್ತು 74 ನಕ್ಸಲರು ಮೃತಪಟ್ಟಿದ್ದಾರೆ. ಒಟ್ಟಾರೆ ಸಕರ್ಾರ ಮತ್ತು ನಕ್ಸಲ್ ಸಂಘಟನೆಗಳಿಗೆ ಸಂಘರ್ಷ ಮತ್ತು ಹಿಂಸೆಯಿಂದ ಯಾವುದೇ ಪ್ರಯೋಜನವಿಲ್ಲ ಎಂಬ ಅರಿವು ಮೂಡತೊಡಗಿದೆ.
ಭಾರತದ ನಕ್ಸಲ್ ಇತಿಹಾಸದಲ್ಲಿ ಪೊಲೀಸರತ್ತ, ಅಥವಾ ಸಕರ್ಾರಗಳತ್ತ ಇಲ್ಲವೇ, ನಕ್ಸಲ್ ಸಂಘಟನೆಗಳತ್ತ ಬೆರಳು ತೋರಿಸಿ ಆರೋಪ ಹೊರಿಸುವ ಮುನ್ನ ಉಭಯ ಬಣಗಳು ಎಲ್ಲಿ ಎಡವಿದವು ಎಂಬುದರತ್ತ ಗಮನಹರಿಸಿ ಹಿಂಸೆ ಮತ್ತು ಹೋರಾಟವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಸಾಂಘಿಕ ಪ್ರಯತ್ನ ನಡೆಯಬೇಕಿದೆ. ಇದಕ್ಕಾಗಿ ದೇಶದ ಎಲ್ಲಾ ಪ್ರಗತಿಪರರು, ಬುದ್ಧಿಜೀವಿಗಳು, ಪತ್ರಕರ್ತರು, ಲೇಖಕರು ಮುಕ್ತ ಮನಸ್ಸಿನಿಂದ ಕೈ ಜೋಡಿಸಬೇಕಿದೆ. ಇತಿಹಾಸದ ಘಟನೆಗಳನ್ನು ಕೆದಕುತ್ತಾ ಪರಸ್ಪರ ಆರೋಪ ಮಾಡಿ ಕಾಲ ಕಳೆಯುವ ಬದಲು, ಹಿಂಸೆಯಿಂದ ಮುಕ್ತವಾದ ಜಗತ್ತಿನತ್ತ ನಾವು ಹೆಜ್ಜೆ ಹಾಕಬೇಕಿದೆ. ನಾವು ಸೃಷ್ಟಿಸಬೇಕಾದ ಸಮಾಜದಲ್ಲಿ ಹಿಂಸೆ, ಬಡತನ, ಅಪಮಾನ, ಶéೋಷಣೆಗಳಿಲ್ಲದೆ ದಲಿತರು, ಆದಿವಾಸಿಗಳು, ಮತ್ತು ಅಲ್ಪಸಂಖ್ಯಾತರು ಇವರೆಲ್ಲಾ ಭಯಮುಕ್ತರಾಗಿ ಸಮಾನ ಗೌರವದಿಂದ ಬದುಕುವಂತಹ ವಾತಾವರಣವನ್ನು ನಿಮರ್ಾಣ ಮಾಡುವ ನೈತಿಕ ಹೊಣೆ ಅಕ್ಷರ ಬಲ್ಲ ನಮ್ಮೆಲ್ಲರ ಮೇಲಿದೆ. ವೈದ್ಯನೊಬ್ಬ ಖಾಯಿಲೆಯ ಮೂಲಕ್ಕೆ ಕೈ ಹಾಕುವಂತೆ ನಾವುಗಳು ಕೂಡ ಸಮಸ್ಯೆಗಳ ಬುಡಕ್ಕೆ ಕೈ ಹಾಕಬೇಕಿದೆ. ಸಮಾಜದಲ್ಲಿ ಅನೇಕ ರೂಪದಲ್ಲಿ ತಾಂಡವಾಡುತ್ತಿರುವ ಹಿಂಸೆಗೆ ಪರಿಹಾರವನ್ನು ಕಂಡುಕೊಳ್ಳಬೇಕಿದೆ.
ಭಾರತದ ನಕ್ಸಲ್ ಹೋರಾಟದ ಇತಿಹಾಸ ಅಥವಾ ಅದು ಹಿಡಿದ ಹಿಂಸೆಯ ಮಾರ್ಗ ಕುರಿತಂತೆ ನಮ್ಮಗಳ ಅಸಮಾಧಾನ ಏನೇ ಇರಲಿ, ಅವರುಗಳ ಹೋರಾಟದಲ್ಲಿ ಎಲ್ಲಿಯೂ ಸ್ವಾರ್ಥವೆಂಬುದು ಇರಲಿಲ್ಲ ಎಂಬುದನ್ನು ನಾವು ನೆನಪಿಡಬೇಕು. ಸ್ವಾತಂತ್ರ್ಯಾನಂತರದ ಭಾರತದಲ್ಲಿ ಇಂದಿಗೂ ಮೂಕ ಪ್ರಾಣಿಗಳಂತೆ ಬದುಕುತ್ತಿರುವ ಆದಿವಾಸಿಗಳು, ಹಿಂದುಳಿದ ಬುಡಕಟ್ಟು ಜನಾಂಗಗಳ ನೆಮ್ಮದಿಯ ಬದುಕಿಗಾಗಿ ನಕ್ಸಲಿಸಂ ಹೆಸರಿನಲ್ಲಿ ಸಾವಿರಾರು ವಿದ್ಯಾವಂತ ಯುವಕರು ಪ್ರಾಣತೆತ್ತಿದ್ದಾರೆ. ಇವರ ಹೋರಾಟದ ಹಿಂದಿನ ಕಾಳಜಿಯನ್ನು ನಮ್ಮನ್ನಾಳುವ ಸಕರ್ಾರಗಳು ಅರಿಯುವ ಮನಸ್ಸು ಮಾಡಿದ್ದರೆ, ನಕ್ಸಲ್ ಸಂಘಟನೆಗಳು ಮತ್ತು ಸಕರ್ಾರಗಳ ನಡುವಿನ ಸಂಘರ್ಷಕ್ಕೆ ರಕ್ತದ ಕಲೆಗಳು ಅಂಟಿಕೊಳ್ಳುತ್ತಿರಲಿಲ್ಲ. ಸಂಘರ್ಷಕ್ಕೆ ಮೂಲ ಕಾರಣರಾದ ಭಾರತದ ಅರಣ್ಯವಾಸಿ ಆದಿವಾಸಿಗಳ ಬದುಕು ಭಾರತ ಸ್ವಾತಂತ್ರ್ಯಾನಂತರದ 65 ವರ್ಷಗಳಲ್ಲಿ ಹಸನಾಗಿದೆಯಾ? ಅದೂ ಇಲ್ಲ.
ನಮ್ಮ ನಡುವಿನ ಇತಿಹಾಸಕಾರ ಮತ್ತು ಅಂಕಣಕಾರ ರಾಮಚಂದ್ರಗುಹಾ 2011 ರಲ್ಲಿ ಆಗಸ್ಟ್ ಹದಿನೈದರೆಂದು ದೆಹಲಿಯ ಹಿಂದೂಸ್ತಾನ್ ಟೈಮ್ಸ್ ದಿನ ಪತ್ರಿಕೆಗೆ ಟ್ರೈಬಲ್ ಟ್ರ್ಯಾಜಿಡಿಸ್ ( ಆದಿವಾಸಿಗಳ ದುರಂತ) ಎಂಬ ವಿಶೇಷ ಲೇಖನವನ್ನು ಬರೆದಿದ್ದರು. ಭಾರತದ ಆದಿವಾಸಿಗಳ ಸಮಸ್ಯೆಯನ್ನು ನಿಖರವಾಗಿ ಗುರುತಿಸಿರುವ ಗುಹಾ ಅವರು, ರಾಜಕಾರಣಿಗಳ ಕಪಟ ನಾಟಕವನ್ನೂ ಸಹ ಲೇಖನದಲ್ಲಿ ಅನಾವರಣಗೊಳಿಸಿದ್ದಾರೆ.
2010 ರ ಆಗಸ್ಟ್ ತಿಂಗಳಿನಲ್ಲಿ ಒರಿಸ್ಸಾದಲ್ಲಿ ಆದಿವಾಸಿಗಳನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿದ್ದ ರಾಹುಲ್ ಗಾಂಧಿ ಇನ್ನು ಮುಂದೆ ದೆಹಲಿಯಲ್ಲಿ ನಿಮ್ಮ ಪರವಾಗಿ ಸೈನಿಕನಂತೆ ಕೆಲಸ ಮಾಡುತ್ತೇನೆ ಎಂದು ಆಶ್ವಾಸನೆ ನೀಡಿ ಮರೆತು ಹೋದ ಪ್ರಸಂಗವನ್ನು ಪ್ರಸ್ತಾಪಿಸುತ್ತಾ ಭಾರತದ ಬುಡಕಟ್ಟು ಅಥವಾ ಆದಿವಾಸಿಗಳ ಸಮಸ್ಯೆಯನ್ನು ಏಳು ಬಗೆಯಲ್ಲಿ ರಾಮಚಂದ್ರ ಗುಹಾ ಗುರುತಿಸಿದ್ದಾರೆ.
ಒಂದು,… ದಟ್ಟವಾದ ಅರಣ್ಯದಲ್ಲಿ ತಮ್ಮದೇ ಆದ ಸಂಸ್ಕೃತಿಯ ನೆರಳಿನಲ್ಲಿ ಮತ್ತು ಸಮೃದ್ಧ ಖನಿಜ ಸಂಪತ್ತಿರುವ ಗುಡ್ಡಗಾಡು ಪ್ರದೇಶದಲ್ಲಿ ಬದುಕಿರುವ ಆದಿವಾಸಿಗಳು ಇಂದು ಅಭಿವೃದ್ಧಿಯ ನೆಪದಲ್ಲಿ ನೆಲೆ ಕಳೆದುಕೊಳ್ಳುತ್ತಿದ್ದಾರೆ. ಗಣಿಗಾರಿಕೆ, ಅಣೆಕಟ್ಟುಗಳ ನಿಮರ್ಾಣ, ಅರಣ್ಯದಲ್ಲಿ ನಿರಂತವಾಗಿ ನಡೆದಿರುವ ಮರಗಳ ಮಾರಣಹೋಮ ಇವೆಲ್ಲವೂ ಅವರನ್ನು ಆದುನಿಕ ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ಅತಂತ್ರರನ್ನಾಗಿ ಮಾಡಿವೆ.
ಎರಡು:- ಭಾರತದಲ್ಲಿ ದಲಿತರಿಗೆ ದಿಕ್ಕುದೆಸೆಯಾಗಿ ಡಾ. ಬಿ.ಆರ್.ಅಂಬೇಡ್ಕರ್ ಜನ್ಮತಾಳಿದ ಹಾಗೆ ಆದಿವಾಸಿಗಳಿಗೆ ಒಬ್ಬ ಅಂಬೇಡ್ಕರ್ ದೊರೆಯದಿರುವುದು ಅವರ ಈ ಶೋಚನೀಯ ಬದುಕಿಗೆ ಕಾರಣವಾಗಿದೆ.
ಮೂರು:- ಭಾರತಾದ್ಯಂತ ಗುಡ್ಡಗಾಡು ಪ್ರದೇಶದಲ್ಲಿ ಹರಿದು ಹಂಚಿಹೋಗಿರುವ ಆದಿವಾಸಿಗಳು ಇಲ್ಲಿಯವರೆಗೆ ಯಾವುದೇ ರಾಜಕೀಯ ಪಕ್ಷಗಳಿಗೆ ದಲಿತರು ಅಥವಾ ಅಲ್ಪಸಂಖ್ಯಾತರ ಹಾಗೆ ಮತಬ್ಯಾಂಕ್ಗಳಾಗಿ ಗೋಚರಿಸಲಿಲ್ಲ.
ನಾಲ್ಕು:- ಕೇಂದ್ರ ಮತ್ತು ರಾಜ್ಯ ಸಕರ್ಾರಗಳು ಬುಡಕಟ್ಟು ಜನಾಂಗಕ್ಕಾಗಿ ಮೀಸಲಿಟ್ಟ ಉದ್ಯೋಗಗಳು ಈಶಾನ್ಯ ರಾಜ್ಯಗಳ ಬುಡಕಟ್ಟು ಜನಾಂಗದ ವಿದ್ಯಾವಂತರ ಪಾಲಾದವು.
ಐದು:- ಆದಿವಾಸಿಗಳ ಆಶೋತ್ತರಗಳನ್ನು ಈಡೇರಿಸಲು ಉನ್ನತ ಹುದ್ದೆಯಲ್ಲಿ ಆದಿವಾಸಿ ಜನಾಂಗದ ಮೇಲ್ಮಟ್ಟದ ಅಧಿಕಾರಿಯಾಗಲಿ, ಅಥವಾ ಒಬ್ಬ ಜನಪ್ರತಿನಿಧಿಯಾಗಲಿ ಇಲ್ಲದಿರುವುದರಿಂದ ಆದಿವಾಸಿಗಳ ಸಮಸ್ಯೆಗಳು ಈವರೆಗೆ ಸಕರ್ಾರಗಳ ಕಣ್ಣಿಗೆ ಗೋಚರವಾಗಿಲ್ಲ.
ಆರು;- ಆದಿವಾಸಿಗಳ ಬದುಕು ಪರಿಸರಕ್ಕೆ ಮಾರಕವಾಗದಂತೆ, ದೇಶಿ ಜ್ಞಾನಪರಂಪರೆಯಿಂದ ಕೂಡಿದ್ದು ಅವರುಗಳು ಕಾಪಾಡಿಕೊಂಡು ಬಂದಿರುವ ಜ್ಞಾನ ಶಿಸ್ತುಗಳನ್ನು ಸುಲಭವಾಗಿ ಆಧುನಿಕ ಬದುಕಿಗಾಗಲಿ ಅಥವಾ ತಂತ್ರಜ್ಞಾನಕ್ಕಾಗಲಿ ಅಳವಡಿಸಲು ಸಾಧ್ಯವಾಗಿಲ್ಲ.
ಏಳು:-ಪಶ್ಚಿಮ ಬಂಗಾಳದ ಸಂತಾಲ್ ಭಾಷೆಯೊಂದನ್ನು ಹೊರತು ಪಡಿಸಿದರೆ ಆದಿವಾಸಿ ಜನಾಂಗಗಳ ಉಳಿದ ಮಾತೃಭಾಷೆಗಳಿಗೆ ಅಧಿಕೃತ ಮಾನ್ಯತೆ ದೊರೆತಿಲ್ಲ. ಈ ಕಾರಣದಿಂದಾಗಿ ಆದಿವಾಸಿ ಮಕ್ಕಳು ಮಾತೃ ಭಾಷೆಯ ಶಿಕ್ಷಣದಿಂದ ವಂಚಿತರಾಗಿದ್ದಾರೆ.
ಸ್ವಾತಂತ್ರ್ಯ ಲಭಿಸಿ ಆರೂವರೆ ದಶಕಗಳ ನಂತರವೂ ಯಾವ ಪಕ್ಷಗಳಾಗಲಿ, ಸಕರ್ಾರಗಳಾಗಲಿ ಇವರ ಅಭಿವೃದ್ಧಿಯ ಕುರಿತಂತೆ ಮಾತನಾಡಿದ್ದು ಅಥವಾ ಯೋಜನೆಗಳನ್ನು ರೂಪಿಸಿದ್ದನ್ನು ನಾವುಗಳು ಈವರೆಗೆ ಕಾಣಲು ಸಾಧ್ಯವಾಗಿಲ್ಲ. ಮಾವೋವಾದಿ ನಕ್ಸಲರು ಇವರ ಸಮಸ್ಯೆಯನ್ನು ಕೈಗೆತ್ತಿಕೊಳ್ಳದಿದ್ದರೆ ಈ ನತದೃಷ್ಟರು ಸಮಾಜದ ಮುಖ್ಯವಾಹಿನಿಯ ಗಮನಕ್ಕೆ ಬಾರದೆ ಶೋಷಣೆಯ ಸುಳಿಯಲ್ಲಿ ಸಿಲುಕಿ ನಲುಗಿ ಹೋಗುತ್ತಿದ್ದರು ಎಂಬುದು ನಾವು ಅರಗಿಸಿಕೊಳ್ಳಲೇ ಬೇಕಾಗಿರುವ ಸತ್ಯ.
ಸಮಾಧಾನದ ಸಂಗತಿಯೆಂದರೆ, ಇತ್ತೀಚೆಗಿನ ದಿನಗಳಲ್ಲಿ ನಕ್ಸಲ್ ಸಮಸ್ಯೆ ತೀವ್ರವಾಗುತ್ತಿದ್ದಂತೆ ಕೇಂದ್ರ ಸಕರ್ಾರಕ್ಕೆ ಜ್ಞಾನೋದಯವಾದಂತಿದೆ. ಹಾಗಾಗಿ ನಕ್ಸಲ್ ಪೀಡಿತ ಪ್ರದೇಶಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ನಿರ್ಧರಿಸಿದೆ.
2003 ರಲ್ಲಿ ಪ್ರಥಮ ಬಾರಿಗೆ ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದ ಕೇಂದ್ರ ಸಕರ್ಾರ, ನಕ್ಸಲರ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ಹಿಂದುಳಿದ ಮತ್ತು ನಕ್ಸಲ್ ಹಾವಳಿಗೆ ಸಿಲುಕಿರುವ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ಆಥರ್ಿಕ ನೆರವನ್ನು ಘೋಷಿಸಿತು. ಅಭಿವೃದ್ಧಿಯಲ್ಲಿನ ತಾರತಮ್ಯ ಮತ್ತು ಆದಿವಾಸಿಗಳ ಕಲ್ಯಾಣದ ಬಗ್ಗೆ ತಾಳಿದ್ದ ನಿರ್ಲಕ್ಷ್ಯ ಧೋರಣೆಗಳಿಂದಾಗಿ ನಕ್ಸಲ್ ಹೋರಾಟಕ್ಕೆ ಹಿಂದುಳಿದ ಬುಡಕಟ್ಟು ಜನಾಂಗಗಳ ಬೆಂಬಲ ದೊರಕುತ್ತಿದೆ ಎಂಬ ವಾಸ್ತವವನ್ನು ಕೇಂದ್ರ ಸಕರ್ಾರ ಗ್ರಹಿಸಿದೆ. ಇದರಿಂದಾಗಿ ನಕ್ಸಲ್ ಪೀಡಿತ ಹತ್ತು ರಾಜ್ಯಗಳಲ್ಲಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರು, ಆರೋಗ್ಯ, ಶಿಕ್ಷಣ ಮುಂತಾದ ವಿಷಯಗಳಿಗೆ ವಿಶೇಷ ಒತ್ತು ನೀಡಲಾಗಿದೆ. 2007 ರಲ್ಲಿ ಹತ್ತು ರಾಜ್ಯಗಳ 180 ಜಿಲ್ಲೆಗಳನ್ನು ನಕ್ಸಲ್ ಪೀಡಿತ ಜಿಲ್ಲೆಗಳೆಂದು ಗುರುತಿಸಲಾಗಿತ್ತು. 2012 ರ ವೇಳೆಗೆ ಕನರ್ಾಟಕ ರಾಜ್ಯವನ್ನು ನಕ್ಸಲ್ ಪೀಡಿತ ರಾಜ್ಯವೆಂಬ ಪಟ್ಟಿಯಿಂದ ಕೈ ಬಿಡಲಾಗಿದೆ. ಜೊತೆಗೆ 2012ರ ವೇಳೆಗೆ ದೇಶಾದ್ಯಂತ 60 ಜಿಲ್ಲೆಗಳನ್ನು ಮಾತ್ರ ನಕ್ಸಲ್ ಪೀಡಿತ ಜಿಲ್ಲೆಗಳೆಂದು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಅಭಿವೃದ್ಧಿಯ ಜೊತೆ ಜೊತೆಗೆ ನಕ್ಸಲ್ ಸಂಘಟನೆಗಳ ಜೊತೆ ಸಂಧಾನದ ಮಾತುಕತೆಗಳನ್ನು ಮಧ್ಯವತರ್ಿಗಳ ಮೂಲಕ ಮುಂದುವರಿಸಲು ಕೇಂದ್ರ ಸಕರ್ಾರ ನಿರ್ಧರಿಸಿದೆ. ಇದರ ಮೊದಲ ಹಂತವಾಗಿ ನಿವೃತ್ತ ಐ.ಎ.ಎಸ್. ಅಧಿಕಾರಿ ಶರ್ಮ ಮಧ್ಯಸ್ತಿಕೆಯಲ್ಲಿ ಜಾರ್ಖಂಡ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕದನ ವಿರಾಮ ಏರ್ಪಟ್ಟಿದೆ.
ಉದ್ಭವಿಸುವ ಸಮಸ್ಯೆಗಳಿಗೆ ಬಂದೂಕು ಮಾತ್ರ ಪರಿಹಾರವಲ್ಲ ಎಂಬುದು ನಮ್ಮನ್ನಾಳುವ ಸಕರ್ಾರಗಳಿಗೆ ಮನದಟ್ಟಾಗಿರುವುದು ನೆಮ್ಮದಿಯ ಸಂಗತಿ. ಜಗತ್ತಿನಲ್ಲಿ ಜನ ಸಮುದಾಯದ ಬೆಂಬಲವಿಲ್ಲದೆ ಯಾವುದೇ ಹೋರಾಟಗಳು ಯಶಸ್ವಿಯಾಗುವ ಸಂಭವ ತೀರಾ ಕಡಿಮೆ. ನಕ್ಸಲ್ ಚಳವಳಿಯನ್ನು ಕುಗ್ಗಿಸಬೇಕಾದರೆ, ಆದಿವಾಸಿಗಳು ನಕ್ಸಲ್ ಹೋರಾಟದ ತೆಕ್ಕೆಗೆ ಬೀಳದಂತೆ ತಡೆಯಬೇಕು. ಇದಕ್ಕಿರುವ ಏಕೈಕ ಪರಿಹಾರವೆಂದರೆ, ಭಾರತದ ಆದಿವಾಸಿಗಳ ಹಲವಾರು ದಶಕಗಳ ಕನಸಾದ ಜಲ್, ಜಂಗಲ್, ಜಮೀನ್ ಎಂಬ ಬೇಡಿಕೆಗಳನ್ನು ಈಡೇರಿಸುವುದು.
ಅರಣ್ಯದಲ್ಲ್ರಿ ಅತಂತ್ರರಾಗಿರುವ ಆದಿವಾಸಿಗಳ ನಿಸರ್ಗಮಯ ಸಹಜ ಬದುಕಿಗೆ ಅಡ್ಡಿಯಾಗದಂತೆ ಸಕರ್ಾರಗಳು ಕಾಳಜಿ ವಹಿಸಬೇಕು. ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಅವರಿಗೆ ವಗರ್ಾಹಿಸಬೇಕು. (ಈಗಾಗಲೇ ಸುಪ್ರೀಂಕೋಟರ್್ ರಾಜ್ಯ ಸಕರ್ಾರಗಳಿಗೆ ಈ ಕುರಿತು ಸ್ಪಷ್ಟ ನಿದರ್ೇಶನ ನೀಡಿದೆ) ದಲ್ಲಾಳಿಗಳು ಮತ್ತು ಏಜೆಂಟರಿಂದ ಆದಿವಾಸಿಗಳು ಮೋಸಹೋಗದಂತೆ ಪ್ರತ್ಯೇಕ ನಿಗಮವೊಂದನ್ನು ಸ್ಥಾಪಿಸಿ, ಆ ಮೂಲಕ ಅರಣ್ಯ ಕಿರು ಉತ್ಪನ್ನಗಳಾದ ತೆಂಡು ಎಲೆ, ಜೇನುತುಪ್ಪ, ಗಿಡಮೂಲಿಕೆ ಔಷಧಿಯ ಬೇರು ಮತ್ತು ಕಾಂಡಗಳು, ಬಿದರಿನ ಬೊಂಬು, ಸಂಗ್ರಹಿಸಿದ ಹಣ್ಣು ಹಂಪಲು, ಮಸಾಲೆ ಪದಾರ್ಥಗಳು ಇವುಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಿಕೊಡಬೇಕು.
ಆರೋಗ್ಯ ಮತ್ತು ಶಿಕ್ಷಣದಿಂದ ವಂಚಿತವಾಗಿರುವ ಆದಿವಾಸಿಗಳ ಹಳ್ಳಿಗಳಿಗಲ್ಲಿ ಶಾಲೆ, ಆಸ್ಪತ್ರೆ ಇವುಗಳನ್ನು ತೆರೆಯುವುದರ ಮೂಲಕ ಎಲ್ಲಾ ಮಕ್ಕಳಿಗೆ ಈ ಸೌಲಭ್ಯ ದೊರೆಯುವಂತಾಗಬೇಕು. ಆದಿವಾಸಿ ಹಳ್ಳಿಗಳಲ್ಲಿ ಕುಡಿಯುವ ಶುದ್ಧ ನೀರು ದೊರಕುವಂತಾಗಬೇಕು. ಯುವಕರಿಗೆ ವೃತ್ತಿ ಕೋಸರ್ುಗಳ ತರಬೇತಿ ನೀಡುವುದರ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ಆರಣ್ಯದಲ್ಲಿ ಆದಿವಾಸಿಗಳು ಬೇಸಾಯ ಮಾಡುತ್ತಿರುವ ಜಮೀನಿನ ಹಕ್ಕನ್ನು ಅವರಿಗೆ ವಗರ್ಾಯಿಸಬೇಕು. ವಗರ್ಾಯಿಸುವ ಸಂದರ್ಭದಲ್ಲಿ ಅಂತಹ ಜಮೀನುಗಳ ಮರು ಮಾರಾಟ ಅಥವಾ ಭೋಗ್ಯಕ್ಕೆ ಅವಕಾಶ ಇಲ್ಲದಂತೆ ನಿಬಂಧನೆಗಳನ್ನು ಹೇರಬೇಕು. ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆ ನಡೆಸಲು ಖಾಸಗಿ ಕಂಪನಿಗಳಿಗೆ ಪರವಾನಗಿ ನೀಡುವ ಮೊದಲು ಈ ಪ್ರದೇಶದಲ್ಲಿ ವಾಸಿಸುತ್ತಿರುವ ಆದಿವಾಸಿಗಳ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು.
ಇಂತಹ ಮಾನವೀಯ ಮುಖವುಳ್ಳ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಮಾತ್ರ ಸಕರ್ಾರಗಳಿಗೆ ನಕ್ಸಲ್ ಚಟುವಟಿಕೆಯನ್ನು ಹತ್ತಿಕ್ಕಲು ಸಾಧ್ಯ. ನಕ್ಸಲ್ ಹಿಂಸಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ನೆಲದ ಬುದ್ಧಿಜೀವಿಗಳು ವಿಶೇಷವಾಗಿ ಎಡಪಂಥೀಯ ಪಕ್ಷಗಳ ಚಿಂತಕರ ಹೊಣೆಗಾರಿಕೆ ಪ್ರಮುಖ ಪಾತ್ರ ವಹಿಸಲಿದೆ. ಈ ಹಿಂದೆ ಎಡಪಂಥೀಯ ಚಿಂತನೆಗಳಿಂದ ಪ್ರೇರಿತರಾಗಿದ್ದರೂ, ಭಾರತದ ಬಡವರು, ಬಡತನ, ಇಲ್ಲಿನ ವ್ಯವಸ್ಥೆಗಳ ವೈರುಧ್ಯ, ಚಳವಳಿ ಮತ್ತು ಕಾಮರ್ಿಕರ ಬವಣೆ ಇವುಗಳ ಬಗ್ಗೆ ಅಪಾರ ಕಾಳಜಿ ಮತ್ತು ಒಳನೋಟಗಳನ್ನು ಹೊಂದಿದ್ದ ನಂಬೂದರಿಪಾಡ್, ಸುಜರ್ಿತ್ಸಿಂಗ್, ಸುಂದರಯ್ಯ, ಜ್ಯೋತಿಬಸು, ಸೋಮನಾಥಚಟಜರ್ಿ ಇಂತಹ ನಾಯಕರು ಮತ್ತು ಅವರ ಚಿಂತನೆಯ ಮಾದರಿಗಳು ಬೇಕಾಗಿವೆ. ಕಮ್ಯೂನಿಷ್ಟ್ ಪಕ್ಷದ ವೈಫಲ್ಯಕ್ಕೆ ಪಶ್ಚಿಮ ಬಂಗಾಳದಲ್ಲಿ ಬುದ್ಧದೇವ್ ಭಟ್ಟಾಚಾರ್ಯ ನಡೆಸಿದ ಆಡಳಿತ ಮಾದರಿ ನಮ್ಮೆದುರು ಸಾಕ್ಷಿಯಾಗಿದೆ. ರೈತರು, ಕಾಮರ್ಿಕರ ಏಳಿಗೆಯ ಮಂತ್ರ ಜಪಿಸುತ್ತಾ ಬಂಡವಾಳಶಾಹಿಗಳಿಗೆ ಭೂಮಿ ಒದಗಿಸಿಕೊಡಲು ಸಿಂಗೂರ್ ಮತ್ತು ನಂದಿಗ್ರಾಮಗಳಲ್ಲಿ ರೈತರಮೇಲೆ ನಡೆಸಿದ ದೌರ್ಜನ್ಯಗಳು ನಮ್ಮ ಕಣ್ಣೆದುರು ಜೀವಂತವಾಗಿವೆ. ಈಗಿನ ಕಮ್ಯೂನಿಷ್ಟ್ ಪಾಲಿಟ್ ಬ್ಯೂರೊದಲ್ಲಿ ಪ್ರಕಾಶ್ ಕಾರಟ್, ಸೀತಾರಾಮ್ ಯಚೂರಿ, ಬೃಂದಾಕಾರಟ್, ರಾಜಾ, ದಾಸ್ಗುಪ್ತಾ ಮುಂತಾದ ಬದ್ಧತೆಯುಳ್ಳ ಪ್ರಜ್ಞಾವಂತ ನಾಯಕರಿದ್ದರೂ ಸಹ ಕಮ್ಯೂನಿಷ್ಟ್ ಕೇಂದ್ರ ಸಮಿತಿಯ ಸದಸ್ಯರು ಎಲೈಟ್ ಸಂಸ್ಕೃತಿಯ ಜನರಂತೆ ಚಿಂತಿಸುತ್ತಿರುವುದು ವರ್ತಮಾನದ ದುರಂತ. ಉಳ್ಳವರ ಈ ಭಾರತದಲ್ಲಿ ನರಳುವವರ ಭಾರತವೂ ಕೂಡ ಇದೆ ಎಂಬುದನ್ನು ಇವರು ಮನಗಾಣಬೇಕಿದೆ.
ಒಂದು ಸಮಸ್ಯೆಯ ಪರಿಹಾರಕ್ಕೆ ಉಭಯ ಬಣಗಳ ನಡುವೆ ಸೌಹಾರ್ದಯುತ ಮಾತುಕತೆಗೆ ಸಿದ್ದಗೊಳ್ಳುವ ಉಧಾರ ಮನಸ್ಸುಗಳು ಬೇಕಾಗಿವೆ. ಸಮಸ್ಯೆಗಳನ್ನು ಬಗೆಹರಿಸಲು ಉಭಯಬಣಗಳ ನಡುವೆ ರಾಯಭಾರಿಯಾಗಿ ಕಾರ್ಯನಿರ್ವಹಿಸಲು ಅನೇಕ ನಿವೃತ್ತ ಸರ್ಕಾರಿ ಅಧಿಕಾರಿಗಳು, ಸ್ವಯಂ ಸೇವಾ ಸಂಘಟನೆಗಳ ಮುಖಸ್ಥರು ಮತ್ತು ಸಮಾಜದ ವಿವಿಧ ವಲಯದ ಗಣ್ಯರು ನಮ್ಮ ನಡುವೆ ಇದ್ದಾರೆ. ಇಲ್ಲಿ ತುತರ್ಾಗಿ ಆಗಬೇಕಾಗಿರುವುದು ಎರಡೂ ಕಡೆಯಿಂದ ಶಾಂತಿ ಮತ್ತು ನೆಮ್ಮದಿಗಾಗಿ ತುಡಿಯುವ ಮುಕ್ತ ಮನಸ್ಸುಗಳು ಮಾತ್ರ. ಹಿಂಸಾತ್ಮಕ ನಕ್ಸಲ್ ಹೋರಾಟದ ಜ್ವಲಂತ ಸಮಸ್ಯೆಯನ್ನು ಹೀಗೆ ಬೆಳೆಯಲು ಬಿಟ್ಟರೆ ಈಗಾಗಲೆ ಅರ್ಧ ಶತಮಾನ ಕಳೆದಿರುವ ರಕ್ತ ಇತಿಹಾಸ ಕಥನ ಎಂದೆಂದೂ ಮುಗಿಯದ ಯುದ್ಧವಾಗಿ ಮುಂದುವರಿಯುವ ಸಾಧ್ಯತೆಗಳಿವೆ. ಇಂತಹ ನೋವಿನ ಗಳಿಗೆಯಲ್ಲಿ ನಾವುಗಳು ಮೌನ ಸಾಕ್ಷಿಯಾಗಬೇಕಾಗುತ್ತದೆ. ಮಾನವೀಯತೆಗಾಗಿ ಹಂಬಲಿಸುವ ಮನಸ್ಸುಗಳ ಪಾಲಿಗೆ ಹಿಂಸಾತ್ಮಕವಾದ ಮತ್ತು ನರಕ ಸದೃಶ್ಯವಾದ ಅಂತಹ ಜಗತ್ತು ಎಂದೂ ಬಾರದಿರಲಿ. ಈ ನೆಲದ ಮೆಲೆ ಪ್ರತಿ ಜೀವಿಗೂ ನೆಮ್ಮದಿಯಿಂದ ಬದುಕುವ ಹಕ್ಕಿದೆ ಎಂಬುದನ್ನು ಸಾಭೀತು ಪಡಿಸುವ ದೃಷ್ಟಿಯಲ್ಲಾದರೂ ಈ ಯುದ್ಧ ಕೊನೆಗಾಣಬೇಕಾಗಿದೆ.






0 Comments