ಪಟ್ಟಣದ ನೆಲೆ ಪ್ರಕಾಶನ ಸಂಸ್ಥೆಯ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನವು ಜಾನಪದ ವಿದ್ವಾಂಸರಿಗೆ ನೀಡುವ ರಾಜ್ಯಮಟ್ಟದ ‘ದೇಸಿ ಸನ್ಮಾನ’ ಪ್ರಶಸ್ತಿ ಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು 11 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಜೊತೆಗೆ ಪ್ರಶಸ್ತಿ ಪುರಸ್ಕೃತರ ಸಾಹಿತ್ಯ ಸಾಧನೆ ಕುರಿತು ಕಿರು ಗ್ರಂಥ ಪ್ರಕಟಿಸಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕ ಚನ್ನಪ್ಪ ಕಟ್ಟಿ ತಿಳಿಸಿದ್ದಾರೆ.






0 Comments