ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಶಸ್ತಿ ಪ್ರಕಟ: ಸಾಹಿತ್ಯ ಪ್ರಕಾಶನ, ವೆಂಕಟಾಚಲ ಶಾಸ್ತ್ರಿ, ಸಯ್ಯದ್ ಇಸಾಕ್, ಸುಧೀಂದ್ರ ಹಾಲ್ದೊಡ್ಡೇರಿಗೆ ಪ್ರಶಸ್ತಿ

ಹಿರಿಯ ಸಾಹಿತಿ, ಚಿಂತಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ಅವರನ್ನು ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಆಯ್ಕೆ ಮಾಡಿದೆ.

ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಹುಬ್ಬಳ್ಳಿಯ ಸಾಹಿತ್ಯ  ಪ್ರಕಾಶನ ಕ್ಕೆ ನೀಡಲಾಗಿದೆ.

ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಮೈಸೂರಿನ ಸಯ್ಯದ್ ಇಸಾಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಡಾ. ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ. ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ನೀಡಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ.

ಪುಸ್ತಕ ಬಹುಮಾನಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಕೆಲವು ದಿನಗಳಲ್ಲೇ ಪ್ರಕಟ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ರೂ.1ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ ರೂ.75 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ರೂ.50 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ. ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ ರೂ.25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

‍ಲೇಖಕರು Admin

2 July, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading