ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಪ್ರಶಸ್ತಿ ಪ್ರದಾನ ಫೋಟೋ ಆಲ್ಬಂ…

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಗಾಂಧಿ ಶಾಂತಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಸಹಯೋಗದಲ್ಲಿ ಕೃತಿಗಳ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.

ಬೆಂಗಳೂರಿನ ಬಾಪೂ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಜಾವಾಣಿ ಪ್ರಧಾನ ಸಂಪಾದಕ ರವೀಂದ್ರ ಭಟ್ ಕೃತಿಗಳ ಬಿಡುಗಡೆ ಮಾಡಿದರು. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ವೂಡೇ ಪಿ. ಕೃಷ್ಣ ಮುಖ್ಯ ಅತಿಥಿಗಳಾಗಿದ್ದರು.

ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ಗಾಂಧಿ ಶಾಂತಿ ಪ್ರತಿಷ್ಠಾನ ಅಧ್ಯಕ್ಷ ಜೀರಿಗೆ ಲೋಕೇಶ್ ಇದ್ದರು.

ಸಪ್ನ ಬುಕ್ ಹೌಸ್ ನ ಆರ್ ದೊಡ್ಡೇಗೌಡ ಅವರು ಸ್ವಾಗತಿಸಿದರು.

ಸ್ನೇಹ ಬುಕ್ ಹೌಸ್ ನ ಪರಮಶಿವಪ್ಪ ವಂದಿಸಿದರು. ವತ್ಸಲಾ ಮೋಹನ್ ಕಾರ್ಯಕ್ರಮ ನಿರ್ವಹಿಸಿದರು.

ಡಾ. ಗಜಾನನ ಶರ್ಮ, ಡಾ. ಶರಣು ಹುಲ್ಲೂರು, ಜಮೀಲ್ ಸಾವಣ್ಣ, ಡಾ. ವಿಜಯಾ ಪ್ರಶಸ್ತಿ ಸ್ವೀಕರಿಸಿದರು.

‍ಲೇಖಕರು Admin

30 July, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading