ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕ ಸಾ ಪ ಚುನಾವಣಾ ಸ್ಪರ್ದಿಗಳಿಗೆ ಪ್ರಶ್ನೆಗಳು

ku sa madhusudhan

 

 

 

 

 

ಕು ಸ ಮಧುಸೂಧನ ನಾಯರ್ 

ಸಾಹಿತ್ಯ ಪರಿಷತ್ತಿನ ಅದ್ಯಕ್ಷ ಚುನಾವಣಾ ಸ್ಪರ್ದಿಗಳಿಗೊಂದಿಷ್ಟು ಪ್ರಶ್ನೆಗಳು

1.ಸಾಹಿತ್ಯ ಪರಿಷತ್ತಿನ ಚುನಾವಣೆಗೆ ನಿಂತಿರೊಸ್ಪರ್ದಿಗಳಿಗೆ ವೆಚ್ಚ ಮಾಡುವ ಹಣದ ಮಿತಿಯೇನಾದರು ಇದೆಯೇ?

2.ಹೋಗಲಿ ನಾಮಪತ್ರ ಹಾಕುವ ಮುಂಚೆ ರಾಜಕಾರಣಿಗಳಂತೆ ತಮ್ಮ ಸ್ಥಿರ-ಚರಾಸ್ತಿಗಳನ್ನು ಗೋಷಿಸಿಕೊಳ್ಲೇಳಬೇಕೆ?

29-1422527268-sahitya3. ಗೆದ್ದಮೇಲೆ ಲೋಕಾಯುಕ್ತಕ್ಕೂ ಆಸ್ತಿವಿವರ ಸಲ್ಲಿಸಬೇಕೇ?

4.ಇವ್ಯಾವು ಇಲ್ಲವೆಂದಾದರೆ ತಾವುಗಳು ಈ ವಿಚಾರದಲ್ಲಿ ಯಾರಿಗೆ ಹೊಣೆಗಾರರಾಗಿರುತ್ತೀರಿ?

5.ಇನ್ನು ಮತದಾರರಸಂಖ್ಯೆ ಕನಿಷ್ಠ ಒಂದು ಲಕ್ಷವಿದ್ದರೆ,ನೀವು ಅವರಿಗೆ ಪತ್ರ ಬರೆಯಲೇ ಸುಮಾರು 5 ಲಕ್ಷ ರೂಪಾಯಿ ಬೇಕಾಗುತ್ತದೆ. ಅಷ್ಟು ದುಡ್ಡನ್ನು ಎಲ್ಲಿಂದ ತರುತ್ತೀರಿ?

6. ಪ್ರತಿತಾಲೂಕಿಗೂ ನಿಮ್ಮ ಕಾರಲ್ಲಿ ಬೇಟಿಕೊಡುವುದೇ ಆದಲ್ಲಿ ಕನಿಷ್ಠ 5 ಲಕ್ಷ ರೂಪಾಯಿ ಖರ್ಚಾಗುತ್ತದೆ. ಈ ದುಡ್ಡಿಗೇನು ಮಾಡುತ್ತೀರಿ?

7.ಹೋಗಲಿ ಚುನಾವಣೆ ಖರ್ಚಿಗೆಂದು ನೀವುಗಳೇನಾದರು ಪಾರ್ಟಿಫಂಡ್ ತರಾ ಹಣ ಸಂಗ್ರಹಿಸುತ್ತೀರಾ?
ಹಾಗೆ ಸಂಗ್ರಹಿಸಿದರೆ ಕೊಟ್ಟವರ ಹೆಸರುಗಳನ್ನು ಸಾರ್ವಜನಿಕವಾಗಿ ಪ್ರಕಟಿಸುತ್ತೀರಾ?

8.ಯಾವುದಾದರು ರಾಜಕೀಯ ಪಕ್ಷಗಳ ಬೆಂಬಲ ನಿಮಗೆ ಇದೆಯಾ? ಇದ್ದರೆ ಯಾವ ಪಕ್ಷ ಯಾವ ಕಾರಣ ವಿವರಿಸುತ್ತೀರಾ?

9. ಇಷ್ಟೆಲ್ಲಾ ಖರ್ಚುಮಾಡಿ ಗೆದ್ದ ಮೇಲೆ ಕಳೆದುಕೊಂಡ ಹಣವನ್ನು ಮರಳಿ ಗಳಿಸಲು ಏನೆಲ್ಲಾ ಮಾಡುತ್ತೀರಿ
ಕೊನೆಯ ಪ್ರಶ್ನೆಗೆ ಕ್ಷಮೆಯಿರಲಿ: ಯಾಕೆಂದರೆ ನೀವು ಚುನಾವಣೆಗೆ ಖರ್ಚು ಮಾಡುತ್ತಿರುವು ಕಡಲೆಬೀಜಗಳಲ್ಲ ಲಕ್ಷಲಕ್ಷ ರೂಪಾಯಿಗಳು!

ಉತ್ತರ ಕೊಡಲೇ ಬೇಕೆಂಬ ಕಡ್ಡಾಯವೇನಿಲ್ಲ. ಇಂತಹ ಪ್ರಶ್ನೆಗಳನ್ನು ರಾಜಕಾರಣಿಗಳಿಗೆ ಕೇಳಿಕೇಳಿ ನಮಗೆ ಅಭ್ಯಾಸವಾಗಿ ಹೋಗಿದೆ…

‍ಲೇಖಕರು Admin

8 February, 2016

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading