
ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ 2009ನೇ ಸಾಲಿನ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.
ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ/ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು ಕಳುಹಿಸಬೇಕು. ಹಸ್ತಪ್ರತಿ ಹಿಂತಿರುಗಿಸಲಾಗುವದಿಲ್ಲ.

ಆಯ್ಕೆಯಾದ ಕತೆಗಾರರಿಗೆ 10000 ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಈ ಪುಸ್ತಕವನ್ನು 2009ರ ಮೇ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು.
ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿಧರ್ಾರ. ಕತೆಗಳನ್ನು ಕಳಿಸಬೇಕಾದ ವಿಳಾಸ: ಛಂದ ಪುಸ್ತಕ, c/o ವಸುಧೇಂದ್ರ, -004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು – 76 (ದೂ. 98444 22782)
ಕೊನೆಯ ದಿನಾಂಕ: ಏಪ್ರಿಲ್ 15, 2009
ಛಂದ ಪುಸ್ತಕ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ
ನಿಮಗೆ ಇವೂ ಇಷ್ಟವಾಗಬಹುದು…





0 Comments