ದಿನೇಶ್ ಅಮೀನ್ ಮಟ್ಟುಗೆ ಬಿ ರಾಚಯ್ಯ ಪ್ರಶಸ್ತಿ

ಕರ್ನಾಟಕ ರಾಜ್ಯ ಎಸ್ಸಿ/ ಎಸ್ಟಿ ಪತ್ರಿಕಾ ಸಂಪಾದಕರ ಸಂಘದ 2022-23 ನೇ ಸಾಲಿನ ರಾಜ್ಯಮಟ್ಟದ ‘ ಬಿ. ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿ’ ಗೆ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್ ಮಟ್ಟು ಅವರನ್ನು ಆಯ್ಕೆ ಮಾಡಲಾಗಿದೆ.

ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ದಲಿತ,ದಮನಿತರ ಪರವಾಗಿ ವೃತ್ತಿಪರತೆಯಿಂದ ದುಡಿದಂತಹ ಸಾರ್ವತ್ರಿಕವಾಗಿ ಹಿರಿಯ ಪತ್ರಕರ್ತರೊಬ್ಬರನ್ನು ಗುರುತಿಸಿ ಪ್ರತಿವರ್ಷ ಹಿರಿಯ ಮುತ್ಸದ್ದಿ ರಾಜಕಾರಣಿ ಬಿ.ರಾಚಯ್ಯ ಅವರ ಹೆಸರಿನಲ್ಲಿ ಸಂಘದಲ್ಲಿ ಸ್ಥಾಪಿಸಿರುವ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

2022-23 ನೇ ಸಾಲಿನ ಬಿ.ರಾಚಯ್ಯ ದತ್ತಿನಿಧಿ ರಾಜ್ಯ ಪ್ರಶಸ್ತಿ ಗೆ ಸುದ್ದಿ ಮಾಧ್ಯಮ‌ಕ್ಷೇತ್ರದಲ್ಲಿ ದಲಿತರು- ದಮನಿತರ ಪರವಾಗಿ ಅಹರ್ನಿಶಿ ದುಡಿಯುತ್ತಿರುವ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್ ಮಟ್ಟು ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು 10.000 ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನು ಹೊಂದಿದೆ.

ಅದೇ ರೀತಿ ಸುದ್ದಿ ಮಾಧ್ಯಮ‌ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಎಸ್ಸಿ/ಎಸ್ಟಿ ಸಮುದಾಯದ ಮೂವ್ವರು ಹಿರಿಯ ಸಂಪಾದಕರಿಗೆ ನೀಡಲಾಗುವ “ವಾರ್ಷಿಕ ಪ್ರಶಸ್ತಿ” ಗಳಿಗೆ ಕೋಲಾರದ ಸಿ .ಮುನಿಯಪ್ಪ, ಚಿತ್ರದುರ್ಗದ ಮೈಲಾರಪ್ಪ ಮತ್ತು ಬೀದರ್ ನ ಮಾಳಪ್ಪ ಅಡಸಾರೆ ಅವರಗಳು ಭಾಜನರಾಗಿದ್ದಾರೆ.

ಪ್ರಶಸ್ತಿಯು ತಲಾ 5000 ರೂ. ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ.

ಇದೇ ಜುಲೈ ಕೊನೆ ವಾರದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಯ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷರಾದ ಚೆಲುವರಾಜು ಮತ್ತು ಪ್ರಧಾನ ಕಾರ್ಯದರ್ಶಿ ಸೋಮಶೇಖರ ಕೆರಗೋಡು ತಿಳಿಸಿದ್ದಾರೆ.

‍ಲೇಖಕರು avadhi

July 11, 2023

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: