ಪ್ರತಿಷ್ಠಿತ `ಅಮ್ಮ ಗೌರವ ಪುರಸ್ಕಾರ’ಕ್ಕೆ ಈ ಬಾರಿಯೂ ನಾಡು-ನುಡಿಗೆ ನೀಡಿದ ಕೊಡುಗೆಯನ್ನು ನೀಡಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಯನ್ನು ಮಾಡಿದ ಐವರನ್ನು ಆಯ್ಕೆ ಮಾಡಲಾಗಿದೆ.
ಈ ಬಾರಿಯ `ಅಮ್ಮ ಗೌರವ ಪುರಸ್ಕಾರ’ಕ್ಕೆ ಹಿರಿಯ ಸಂಶೋಧಕ, ಸಾಹಿತಿ ಪ್ರೊ. ದೇವರಕೊಂಡಾರೆಡ್ಡಿ, ಕಲಬುರಗಿಯ ವಿಲಾಸವತಿ ಖೂಬಾ, ಹಿರಿಯ ಮಕ್ಕಳ ಸಾಹಿತಿ ಎ.ಕೆ. ರಾಮೇಶ್ವರ, ಹಿರಿಯ ಲೇಖಕ ಲಿಂಗಾರೆಡ್ಡಿ ಶೇರಿ ಸೇಡಂ ಹಾಗೂ ರಂಗತಜ್ಞ ಜೀವನರಾಂ ಸುಳ್ಯ ಮೂಡಬಿದಿರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.



ಅಮ್ಮ ಪ್ರಶಸ್ತಿಗೆ ೧೯ನೇ ವರ್ಷದ ಸಂಭ್ರಮ :
ಪತ್ರಕರ್ತ-ಲೇಖಕ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ಅಮ್ಮನ ನೆನಪಿನಲ್ಲಿ ಸ್ಥಾಪಿಸಿದ `ಅಮ್ಮ ಪ್ರಶಸ್ತಿ’ಗೆ ಈಗ ೧೯ ನೇ ವರ್ಷದ ಸಂಭ್ರಮ. ಕನ್ನಡದ ಪ್ರತಿಭಾವಂತ ಬರಹಗಾರರು `ಅಮ್ಮ ಪ್ರಶಸ್ತಿ’ಗಾಗಿ ತಮ್ಮ ಕೃತಿಗಳನ್ನು ಕಳುಹಿಸುವ ಮೂಲಕ ಪ್ರಶಸ್ತಿಯನ್ನು ಗುರುತಿಸಿದ್ದಾರೆ ಹಾಗೂ ಗೌರವಿಸಿದ್ದಾರೆ. ಈ ಬಾರಿ ೪೯೬ ಕೃತಿಗಳು ಬಂದಿದ್ದವು.
ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ `ಅಮ್ಮ ಪ್ರಶಸ್ತಿ’ ರಾಜ್ಯದ ಗಣನೀಯ ಪ್ರಶಸ್ತಿಗಳಲ್ಲಿ ಒಂದಾಗಬೇಕು ಎಂಬ ಪ್ರತಿಷ್ಠಾನದ ಆಶಯಕ್ಕೆ ಅನುಗುಣವಾಗಿ ನಾಡಿನ ಖ್ಯಾತ ಲೇಖಕರು, ಕವಿಗಳು, ಪ್ರಕಾಶಕರು ಮತ್ತು ಲೇಖಕರ ಅಭಿಮಾನಿ ಓದುಗರು ಸ್ಪಂದಿಸಿದ್ದೇ ಇದೊಂದು ಗೌರವಾನ್ವಿತ ಪ್ರಶಸ್ತಿಯಾಗಿ ರೂಪುಗೊಂಡಿದೆ ಎಂಬುದಕ್ಕೆ ಸಾಕ್ಷಿ.
ದಶಮಾನೋತ್ಸವ ವರ್ಷದಿಂದ ಆರಂಭಗೊAಡ ಅಮ್ಮ ಗೌರವ ಪುರಸ್ಕಾರವನ್ನು ಸಹ ಮುಂದುವರಿಸಲಾಗಿದೆ. ಪ್ರತಿ ವರ್ಷ ಐವರಿಗೆ ಅಮ್ಮ ಪ್ರಶಸ್ತಿ ಹಾಗೂ ಅಮ್ಮ ಗೌರವ ಪುರಸ್ಕಾರ ನೀಡಲಾಗುತ್ತಿತ್ತು. ಈ ಬಾರಿ ಆರು ಜನರಿಗೆ ಅಮ್ಮ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಶಸ್ತಿ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.






0 Comments