ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ನಾನು ನಂಬಿಕೆಯ ದೋಣಿಯನ್ನೇರಿ ಪಾರಾಗಿಬಿಟ್ಟೆ..

ಗುಲ್ಜಾರ್ 

chadambara narendra

ಕನ್ನಡಕ್ಕೆ : ಚಿದಂಬರ ನರೇಂದ್ರ 

ಇಡೀ ಆಕಾಶ ಸುತ್ತಿ
ನೀನು ರಚಿಸಿರುವ ವ್ಯೂಹವನ್ನೊಮ್ಮೆ
ಜಾಗರೂಕತೆಯಿಂದ ಗಮನಿಸಿದೆ.

ಕಪ್ಪು ಮನೆಯಲ್ಲಿ
ಸೂರ್ಯನನ್ನು ಇಟ್ಟು
ನನ್ನ ಸೈನ್ಯವನ್ನು ಕಂಗೆಡಿಸಬೇಕೆಂದು
ಲೆಕ್ಕ ಹಾಕಿದ್ದಿಯಲ್ಲವೆ?
ನಾನು, ಒಂದು ಸಣ್ಣ ದೀಪ ಹಚ್ಚಿ
ನನ್ನ ದಾರಿ ಹುಡುಕಿಕೊಂಡೆ.

hair boatsನೀನು, ಸಮುದ್ರವನ್ನೆತ್ತಿ
ನನ್ನ ಮುಖದ ಮೇಲೆ ಅಪ್ಪಳಿಸಿದೆ.
ನಾನು ನಂಬಿಕೆಯ
ದೋಣಿಯನ್ನೇರಿ ಪಾರಾಗಿಬಿಟ್ಟೆ.

ನೀನು, ಕಾಲವನ್ನು
ಆಟದ ಅಂಗಳಕ್ಕಿಳಿಸಿ
ತೋಳು ಮೇಲಿರಿಸಿದೆ.
ನಾನು ಕಾಲವನ್ನು
ತುಂಡು ತುಂಡು ಮಾಡಿ
ಘಳಿಗೆಗಳಲ್ಲಿ ಬದುಕುವುದನ್ನು
ರೂಢಿ ಮಾಡಿಕೊಂಡೆ.

ಕೆಲ ಚಮತ್ಕಾರಗಳನ್ನು ಮಾಡಿ
ನನ್ನ ಅಭಿಮಾನವನ್ನು ಕೊಲ್ಲಲು
ನೀನು ಶತ ಪ್ರಯತ್ನ ಮಾಡಿದೆ.
ನನ್ನ ಒಬ್ಬ ಸಣ್ಣ ಸೈನಿಕ ಮುಂದೆ ಬಂದು
ನಿನ್ನ ಅಸ್ತಿತ್ವಕ್ಕೇ ಸವಾಲು ಹಾಕಿದ.

ಸಾವನ್ನು ಎದುರು ನಿಲ್ಲಿಸಿ
ನನ್ನ ಆಟ ಮುಗಿಸಲು
ನೀನು ಹೊಂಚು ಹಾಕಿದೆ.
ದೇಹವನ್ನು ಪಣಕ್ಕಿಟ್ಟು
ನಾನು ಆತ್ಮ ಉಳಿಸಿಕೊಂಡೆ.

ಇಡೀ ಆಕಾಶ ಸುತ್ತಿ
ಮತ್ತೊಂದಿಷ್ಟು ಸಂಚು ಕಲಿತು ಬಾ
ನನ್ನ ಸೋಲಿಸುವುದು
ಅಷ್ಟು ಸುಲಭವಲ್ಲ ಭಗವಂತ.

– Gulzar

‍ಲೇಖಕರು Admin

23 July, 2016

3 Comments

  1. lalitha sid

    ವಾಹ್ ! ಬ್ಯೂಟಿಫುಲ್. ಹೌದು, ಹೀಗೆ ದೇವರೂ ಊಹಿಸದಂತ ದಾರಿಗಳನ್ನು ಹುಡುಕಿಕೊಂಡು ಬಿಡಬೇಕು . ಆಗ ಏನ್ಮಾಡಬಹುದು ಅವನು ?
    :):):)

  2. kusuma patel

    beautiful.

  3. Anonymous

    Sandhya madam idu naanu anuvaada maaDida kavite .

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading