ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪಂಜು ಗಂಗೊಳ್ಳಿಗೆ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರ

ನಿಘಂಟು ಬ್ರಹ್ಮ, ಭಾಷಾ ತಜ್ಞ ಜಿ. ವೆಂಕಟಸುಬ್ಬಯ್ಯ ಅವರ ಸ್ಮರಣಾರ್ಥ, ಅವರ ಹೆಸರಿನಲ್ಲಿ ‘ಕಥೆಕೂಟ’ ಪ್ರಶಸ್ತಿಯೊಂದನ್ನು ಆರಂಭಿಸಿದ್ದು ಮೊದಲ ಪ್ರಶಸ್ತಿಯನ್ನು `ಕುಂದಾಪ್ರ ಕನ್ನಡ’ ನಿಘಂಟು ಸಂಪಾದಕ ಶ್ರೀ ಪಂಜು ಗಂಗೊಳ್ಳಿ ಅವರಿಗೆ ಘೋಷಿಸಲಾಗಿದೆ.

ಭಾಷೆಯಲ್ಲಿ ವಿಶಿಷ್ಟ ಪ್ರಯೋಗಗಳನ್ನು ಮಾಡಿದ, ಭಾಷೆಗೆ ಸೃಜನಶೀಲ ಕೊಡುಗೆ ನೀಡಿದ ಮತ್ತು ಭಾಷೆಯ ಸಾಧ್ಯತೆಗಳನ್ನು ವಿಸ್ತರಿಸುವ ಕೆಲಸದಲ್ಲಿ ನಿರತರಾಗಿರುವ ಪ್ರತಿಭಾವಂತರಿಗೆ ಪ್ರತಿವರ್ಷ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರ ನೀಡಿ ಗೌರವಿಸಲು ಕಥೆಕೂಟ ನಿರ್ಧರಿಸಿದೆ. ಈ ಪ್ರಶಸ್ತಿಯು ರೂ.10,000 ನಗದು ಮತ್ತು ಫಲಕವನ್ನು ಒಳಗೊಂಡಿರುತ್ತದೆ ಎಂದು ಕಥೆ ಕೂಟದ ಅಡ್ಮಿನ್ ಗೋಪಾಲಕೃಷ್ಣ ಕುಂಟಿನಿ ತಿಳಿಸಿದ್ದಾರೆ.

ಜಿ ವಿ ಅವರ 111ನೇ ಹುಟ್ಟುಹಬ್ಬವಾದ ಆಗಸ್ಟ್ 23 ರಂದು ಸಂಜೆ 6 ಗಂಟೆಗೆ ಪ್ರೊ. ಜಿವಿ ಜನ್ಮಶತಾಬ್ದಿ ಕಲಾ ಭವನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಸುಮಾರು 20 ವರ್ಷಗಳ ಅವಿರತ ಶ್ರಮ, ಅಧ್ಯಯನ, ಸಂಶೋಧನೆ ಮತ್ತು ಸಂಘಟನೆಯಿಂದ ಸಿದ್ಧವಾಗಿರುವ ಕುಂದಾಪ್ರ ಕನ್ನಡ ನಿಘಂಟು, ಕನ್ನಡ ಭಾಷೆಗೆ ಅತ್ಯುತ್ತಮ ಕೊಡುಗೆ. ಲಂಕೇಶ್ ಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿದ್ದ ಪಂಜು ಗಂಗೊಳ್ಳಿ ಪತ್ರಕರ್ತರು ಮತ್ತು ಲೇಖಕರು. ಸದ್ಯಕ್ಕೆ ಅವರು ಮುಂಬಯಿಯಲ್ಲಿ ವಾಸವಾಗಿದ್ದಾರೆ.

ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ, ಗಿರೀಶ್ ರಾವ್ ಹತ್ವಾರ್ (ಜೋಗಿ), ಗೋಪಾಲಕೃಷ್ಣ ಕುಂಟಿನಿ, ಜಿ ವಿ. ಅರುಣ ಇದ್ದರು.

                                   

ಗೋಪಾಲಕೃಷ್ಣ ಕುಂಟಿನಿ

ಅಡ್ಮಿನ್

ಕಥೆಕೂಟ

‍ಲೇಖಕರು avadhi

17 August, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading