ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪುಸ್ತಕ ಹರೀಬೇಕು, ಕಳೆದು ಹೋಗಬೇಕು…


ಕನ್ನಡದಲ್ಲಿ ಮಕ್ಕಳ ಸಾಹಿತ್ಯ ಏರ ಬೇಕಾದ ಮಟ್ಟವನ್ನ ಏರಿಲ್ಲ. ಒಂದು ಕಾಲದಲ್ಲಿ ನಾಡಿನ ಎಲ್ಲ ಹಿರಿಯ ಲೇಖಕರೂ ಮಕ್ಕಳಿಗಾಗಿ ಬರೆಯುವುದನ್ನ ಒಂದು ಪವಿತ್ರ ಕೆಲಸ ಅಂತ ತಿಳಿದರು. ಕುವೆಂಪು, ರಾಜರತ್ನಂ, ಕಾರಂತ ಕಸ್ತೂರಿ, ಹೊಯ್ಸಳ ಇವರೆಲ್ಲ ಮಕ್ಕಳಿಗಾಗಿ ಬರೆದರು. ಆದರೆ ಯಾಕೋ ಇವತ್ತಿನ ಅಕ್ಯಾಡೆಮಿಶೀಯನ್ಗಳು ಮಕ್ಕಳಿಗಾಗಿ ಬರೆಯುವುದು ಅವಮಾನ ಅಂತ ತಿಳಿದಿದ್ದಾರೆ. ಆದರೂ ಕೆಲ ಲೇಖಕರು ಬರೆಯುತ್ತಿರುವುದು ಸಂತೋಷ. ಆದರೆ ಈ ಕ್ಷೇತ್ರ ಇನ್ನೂ ವಿಸ್ತಾರವಾಗ ಬೇಕು. ಹೊಸ ಪ್ರಯೋಗ ಆಗ ಬೇಕು.
ಪೋಷಕರು ಮಕ್ಕಳಿಗೆ ಮೊಬೈಲ ಟ್ಯಾಬ್ ಕೊಡಿಸುವುದರ ಬದಲು ಪುಸ್ತಕ ಕೊಡಿಸಬೇಕು. ಜೊತೆಗೆ ಆ ಪುಸ್ತಕದ ಬಗ್ಗೆ ಒಂದು ಸಣ್ಣ ವಿವರವನ್ನ ಮಗುವಿಗೆ ನೀಡಿ ಪುಸ್ತಕ ಕೊಟ್ಟರೆ ತುಂಬಾ ಉಪಯೋಗ. ಹಿಂದೆ ಮನೆಗೆ ಬರುತ್ತಿದ್ದ ಚಂದಾಮಾಮವನ್ನ ಮೊದಲು ನಮ್ಮ ಅಜ್ಜ ಓದಿ ನಂತರ ಆತ ಮಕ್ಕಳಿಗೆ ಅದನ್ನ ಕೊಡುತ್ತಿದ್ದ. ಈ ಕ್ರಮವನ್ನ ನಾವು ಅನುಸರಿಸಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಪುಸ್ತಕಗಳನ್ನ ನೀಡುವ ಪದ್ದತಿ ನಿಂತು ಹೋಗಿದೆ. ಸರಕಾರ ಶಾಲಾ ಲೈಬ್ರರಿಗಳನ್ನ ಸಜ್ಜು ಗೊಳಿಸಿದರೂ ಪುಸ್ತಕ ಕಳೆದು ಹೋಗುತ್ತೆ, ಹರಿಯುತ್ತದೆ ಅನ್ನುವ ಕಾರಣಕ್ಕೆ ಪುಸ್ತಕಗಳನ್ನ ಬೀರುವಿನಲ್ಲಿ ಇರಿಸಿ ಬೀಗ ಹಾಕಲಾಗುತ್ತದೆ ಅನ್ನುವ ಮಾತು ಕೇಳಿ ಬಂದಿದೆ. ಇದು ತಪ್ಪು. ಪುಸ್ತಕ ಹರೀಬೇಕು, ಕಳೆದು ಹೋಗ ಬೇಕು. ನಮ್ಮ ಮಕ್ಕಳು ಪುಸ್ತಕಗಳೊಡನೆ ತಮ್ಮ ಸಂಬಂಧವನ್ನ ಗಟ್ಟಿಗೊಳಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗ ಬೇಕು.
 

‍ಲೇಖಕರು G

7 January, 2014

ನಿಮಗೆ ಇವೂ ಇಷ್ಟವಾಗಬಹುದು…

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading