
ಆಗಿನ್ನೂ ಲೋಕಸಭಾ ಚುನಾವಣೆಗಳು ನಡೆಯುತ್ತಿದ್ದವು.ಡೆಲ್ಲಿ ಅನ್ನೊ ನಗರಿ ಚುನಾವಣಾ ಬಿಸಿಯಿಂದ ಕೊತ, ಕೊತ ಅಂತ ಕುದಿಯುತ್ತಿತ್ತು. ಅಧಿಕಾರ ಹಿಡಿಯುವ ಹಪಹಪಿಯಿಂದ ರಾಜಕೀಯ ನಾಯಕರು ಕೆಸರೆರಚಾಟ, ಮಾತಿನ ಧಾಳಿ (ಬೈಟ್ ದಾಳಿ) ಮಾಡುತ್ತಿದ್ದರು. ನಾರ್ಥ್ ಇಂಡಿಯಾದ (ನ್ಯಾಷನಲ್ ಮೀಡಿಯಾದವರು) ಮಾಧ್ಯಮಗಳು ರಾಜಕೀಯ ನಾಯಕರ ಹೇಳಿಕೆಗಳನ್ನ ರಾಷ್ಟ್ರೀಯ ಸುದ್ದಿಮಾಡುತ್ತಿದ್ದರು. ತಮಗೆ ಸಿಕ್ಕಿದ್ದೆಲ್ಲವನ್ನು ಎಕ್ಸ್ಲೂಸಿವ್ ಅಂತ ತೋರಿಸೊರು. ನ್ಯಾಷನಲ್ ಮೀಡಿಯಾಗಳಲ್ಲಿ ಫಸ್ಟ್ ಇನ್ ಸಿಎನ್ಎನ್ ಐಬಿಎನ್, ಫಸ್ಟ್ ಇನ್ ಟೈಮ್ಸ್ ನೌ, ಫಸ್ಟ್ ಇನ್ ಆಜ್ ತಕ್ ಅಂತ ಪ್ರೋಮೋ ಹಾಕಿಕೊಂಡು ರಾಜಕೀಯ ನಾಯಕರ ಸಂದರ್ಶನಗಳು, ಸುದ್ದಿಗಳು ಬರುತ್ತಿದ್ದವು.
ರಾಜಕೀಯ ನಾಯಕರ ಸಂದರ್ಶನ ಸಿಕ್ಕಿದ್ದೆ ಜೀವಮಾನದ ಸಾಧನೆ ಅಂಥ ಟೆಲಿವಿಷನ್ ಪತ್ರಕರ್ತರು ರೋಮಾಂಚನಕ್ಕೆ ಒಳಗಾಗಿದ್ದರು. ದಿನ ಬೆಳಾಗಾದರೆ ‘ಲಾಲೂ ಹೀಗೆ ಅಂದವ್ರೆ ನೀವು ಏನ್ ಹೇಳ್ತಿರಿ’, ‘ಅಮರ್ ಸಿಂಗ್ ಹಿಂಗೆ ಹೇಳವ್ರಲ್ಲಾ ನೀವು ಏನಂತೀರಿ’, ‘ವರುಣ್ ಗಾಂಧಿ ಹೇಳಿಕೆಗೆ ನಿಮ್ಮ ರಿಯಾಕ್ಷನ್ ಏನು’, ‘ಮಾಯಾವತಿ ಹಿಂಗೆ ಹೇಳವ್ರಲ್ಲಾ ಅದಕ್ಕೆ ನೀವೆಂಗೆ ಹೇಳ್ತೀರಿ’, ಅಂತ ಬೈಟ್ ತೆಗೆದುಕೊಳ್ಳೊದು ಆಯಾ ಬೀಟ್ ನಲ್ಲಿರೋ ಕೆಲಸ. ಇದಕ್ಕೆ ರಾಜಕೀಯ ಪಕ್ಷಗಳ ಸಹಕಾರ ಹೇಗಿದೆಯಪ್ಪಾ ಅಂದರೆ, ದಿನಾ ಸಾಯಂಕಾಲ ಎಲ್ಲಾ ಪಕ್ಷಗಳ ಕಚೇರಿಯಲ್ಲೂ ಪ್ರೆಸ್ ಕಾನ್ಫರೆನ್ಸ್ ಕರೆಯುತ್ತಾರೆ. ಅವರು ಹೇಳಿದ್ದಕ್ಕೆ ಇವರು, ಇವರು ಹೇಳಿದ್ದಕ್ಕೆ ಅವರು ಉತ್ತರ ಕೊಡುತ್ತಾರೆ.
ಪೂರ್ಣ ಓದಿಗೆ: ಮೀಡಿಯಾ ಮೈಂಡ್





0 Comments