ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪ್ರಕಾಶಕರ ಸಂಘದ ಪ್ರಶಸ್ತಿ ಪ್ರದಾನ ಫೋಟೋ ಆಲ್ಬಂ…

ಚೇತನ್ ಕಣಬೂರು ಕಂಡಂತೆ

ವಿಶ್ವ ಪುಸ್ತಕ ಮತ್ತು ಕೃತಿ ಸ್ವಾಮ್ಯ ದಿನಾಚರಣೆ ಹಾಗೂ ಪುಸ್ತಕ ಪರಿಚಾರಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು
ನಾಣಿ ಅಂಗಳದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ಪ್ರಕಾಶಕರ ಸಂಘದ ಕಾರ್ಯಕ್ರಮದಲ್ಲಿ ಪುಸ್ತಕ ಸಂಸ್ಕೃತಿ ಬೆಳೆಸಬೇಕಾದ ಅಗತ್ಯವನ್ನು ಎಲ್ಲರೂ ಪ್ರತಿಪಾದಿಸಿದರು.

ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾ ಎನ್.‌ ಸಂತೋಷ್‌ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ರವೀಂದ್ರ ಪುಸ್ತಕಾಲಯದ ಪ್ರಕಾಶಕರಾದ ವೈ.ಎ. ದಂತಿ ಅವರಿಗೆ ಎಂ. ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾರಕ ಪ್ರಶಸ್ತಿ ಹಾಗೂ ಭೂಮಿ ಬುಕ್ಸ್‌ ಪ್ರಕಾಶನದ ವಿಶಾಲಾಕ್ಷಿ ಶರ್ಮ ಅವರಿಗೆ ನಂಜನಗೂಡು ತಿರುಮಲಾಂಬ ಪ್ರಕಾಶನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಿರ್ದೇಶಕರಾದ ಟಿ.ಎಸ್.‌ ನಾಗಾಭರಣ, ಸಾಹಿತಿ ಡಾ. ವಸುಂಧರಾ ಭೂಪತಿ ಮುಖ್ಯ ಅತಿಥಿಗಳಾಗಿದ್ದರು.

ಪ್ರಕಾಶಕರ ಸಂಘದ ಅಧ್ಯಕ್ಷರಾದ ಪ್ರಕಾಶ್‌ ಕಂಬತ್ತಳ್ಳಿ, ಪ್ರಧಾನ ಕಾರ್ಯದರ್ಶಿಗಳಾದ ನ. ರವಿಕುಮಾರ್‌, ಜಂಟಿ ಕಾರ್ಯದರ್ಶಿ ಸೃಷ್ಟಿ ನಾಗೇಶ್‌, ಖಜಾಂಚಿ ಬಿ.ಎಸ್.‌ ವಿದ್ಯಾರಣ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

‍ಲೇಖಕರು avadhi

23 April, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading