ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ 2022ನೇ ಸಾಲಿನ ‘ಬಸವರಾಜ ಕಟ್ಟೀಮನಿ ಯುವ ಸಾಹಿತ್ಯ ಪುರಸ್ಕಾರ’ಕ್ಕೆ ಕತೆಗಾರ ದಯಾನಂದ ಅವರ ‘ಬುದ್ಧನ ಕಿವಿ’ ಕಥಾ ಸಂಕಲನ ಆಯ್ಕೆಯಾಗಿದೆ.

ವಿಜಯಪುರದ ಬಿ.ಎಲ್.ಡಿ.ಈ ವಿಶ್ವವಿದ್ಯಾಲಯದ ಡಾ. ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಎಪ್ರಿಲ್ 8ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಡಾ. ಗುರುಪಾದ ಮರಿಗುದ್ದಿ, ಡಾ. ವಿ.ಎನ್.ಮಾಳಿ ಹಾಗೂ ಪ್ರೊ. ಸಿ.ಎಸ್.ಭೀಮರಾಯ ನಿರ್ಣಾಯಕರಾಗಿದ್ದರು ಎಂದು ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ತಿಳಿಸಿದ್ದಾರೆ.
0 ಪ್ರತಿಕ್ರಿಯೆಗಳು