
ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ನೀಡುವ ಬೆಸಗರಹಳ್ಳಿ ರಾಮಣ್ಣ ವಾರ್ಷಿಕ ಕಥಾ ಸಂಕಲನ ಪ್ರಶಸ್ತಿಗೆ ಕಥಾ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ರೂ.25 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಪತ್ರವನ್ನು ಒಳಗೊಂಡಿದೆ.
2012ನೇ ಸಾಲಿನಲ್ಲಿ ಪ್ರಕಟವಾದ ಮೊದಲ ಮುದ್ರಣದ ಕಥಾ ಸಂಕಲನಗಳ ಪ್ರಕಾಶಕರು ಅಥವಾ ಲೇಖಕರು ಕೃತಿಯ 3 ಪ್ರತಿಗಳನ್ನು ಅಧ್ಯಕ್ಷರು, ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ, ನಂ. 90, 16ನೇ ಅಡ್ಡರಸ್ತೆ, 4ನೇ ಹಂತ, ಜೆ.ಪಿ. ನಗರ, ಬೆಂಗಳೂರು-560078 ಇಲ್ಲಿಗೆ ಮಾರ್ಚ್ 25ರ ಒಳಗೆ ಕಳುಹಿಸಬೇಕು ಎಂದು ಪ್ರತಿಷ್ಠಾನದ ಕೆ ಪುಟ್ಟಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಸಗರಹಳ್ಳಿ ಪ್ರಶಸ್ತಿಗೆ ಕೃತಿಗಳ ಆಹ್ವಾನ
ನಿಮಗೆ ಇವೂ ಇಷ್ಟವಾಗಬಹುದು…





0 Comments