ಬ್ಲಾಗ್ ಲೋಕದ ಸಮೀಕ್ಷೆ ನಡೆಯುತ್ತಿದೆ. ಇದು ಶೈಕ್ಷಣಿಕ ಉದ್ಧೆಶಕ್ಕಾಗಿ ಎಂದು ಬ್ಲಾಗಿಗ ಶೆಟ್ಟರು ತಿಳಿಸಿದ್ದಾರೆ. ಇದರ ಬಗ್ಗೆ ಇನ್ನಷ್ಟು ವಿವರ ನೀಡಿದ್ದಾರೆ ಚೆನ್ನಾಗಿತ್ತು. ಈಗಾಗಲೇ ಸಮೀಕ್ಷೆ ಆರಂಭವಾಗಿದೆ. ಆದರೆ ಹೆಚ್ಚು ಬ್ಲಾಗಿಗರು ಭಾಗವಹಿಸಿಲ್ಲ ಎನ್ನುತ್ತಿದ್ದಾರೆ. ನೀವೂ ಒಂದು ಕೈ ನೋಡಿ-

ಆತ್ಮೀಯರೆ,
ಅತ್ಯಂತ ಶೀಘ್ರವಾಗಿ ಹಾಗೂ ಗುಣಾತ್ಮಕವಾಗಿ ಬೆಳೆಯುತ್ತಿರುವ ಒಂದು ಪ್ರಬಲ ಮಾದ್ಯಮ “ಬ್ಲಾಗಿಂಗ್”, ಇದಕ್ಕೆ ಕನ್ನಡಿಗರು ಮತ್ತು ಕನ್ನಡ ಬ್ಲಾಗಿಂಗ ಹೋರತಲ್ಲ. ಇವತ್ತಿಗೆ ಕನ್ನಡದಲ್ಲು ಸುಮಾರು ೮೦೦ಕ್ಕೂ ಹೆಚ್ಚು ಬ್ಲಾಗಗಳಿವೆ. ಭಾರತಿಯ ಭಾಷೆಗಳ ಬ್ಲಾಗಿಂಗ ಸಂಭ್ರಮದಲ್ಲಿ ಕನ್ನಡವಿಗ ಪ್ರಖರ ಪ್ರಕಾಶ, ಸುಂದರ ಅಕ್ಷರಗಳ ಉದ್ಯಾನ.
ಬಹಳಷ್ಟು ಬ್ಲಾಗ್ಗಳಲ್ಲಿ ಒಂದು, ಎರಡು ಪೋಸ್ಟುಗಳಿವೆ. ಕೆಲವೆಡೆ ಒಬ್ಬರೇ ಐದಾರು ಬ್ಲಾಗ್ ಮಾಡಿಕೊಂಡಿದ್ದಾರೆ. ಏನೇ ಆದರೂ ಉತ್ಸಾಹ-ಆಕಾಶಕ್ಕೆ ಏಣಿ ಹಾಕುವಷ್ಟಿದೆ. ಹೀಗಾಗಿ ಕನ್ನಡ ಬ್ಲಾಗುಗಳ ಮತ್ತು ಬ್ಲಾಗಿಗರ ಈ ಸಮೀಕ್ಷೆ ನಮ್ಮ ಮನದಲ್ಲಿ ಹುಟ್ಟಿದ್ದು, ಈ ಸಮೀಕ್ಷೆ ಕನ್ನಡ ಬ್ಲಾಗುಗಳ ಮತ್ತು ಬ್ಲಾಗಿಗರ ವಿಶೇಷಗುಣ, ಅಪೂರ್ವಲಕ್ಷಣ, ವೈಶಿಷ್ಟ್ಯಗಳನ್ನು ಅರ್ಥೈಸಿಕೊಳ್ಳುವ ಒಂದು ಸಣ್ಣ ಪ್ರಯತ್ನ.
ಆತ್ಮೀಯ ಬ್ಲಾಗ ಬಂಧುಗಳೇ, ಈ ಸಮೀಕ್ಷೆಯ ಸಫಲತೆ ನಿಮ್ಮ ಸಹಯೋಗದಿಂದ ಮಾತ್ರ ಸಾಧ್ಯ. ಹೀಗಾಗಿ ದಯವಿಟ್ಟು ಈ ಕೆಳಗೆ ನೀಡಿದ ಸಂಪರ್ಕ ಕೊಂಡಿ (Link) ಚಿಟುಕಿಸಿ ಅಲ್ಲಿ ನೀಡಲಾಗಿರುವ ಕೆಲವು ಪ್ರಶ್ನೆಗಳಿಗೆ ಉತ್ತರಿಸಿ. ನೀವು ನಿಡಿದ ಎಲ್ಲ ಮಾಹೀತಿಗಳನ್ನು ರಹಸ್ಯವಾಗಿರಿಸುವುದಾಗಿಯೂ ಮತ್ತು ಸಮೀಕ್ಷೆಯ ಫಲಿತಾಂಶವನ್ನು ಕೇವಲ ಶೈಕ್ಷಣಿಕ ಕಾರ್ಯಗಳಿಗೆ ಮಾತ್ರ ಉಪಯೋಗಿಸಿಕೊಳ್ಳಲಾಗುವುದಾಗಿ ಈ ಮೂಲಕ ಪ್ರಮಾಣಿಸುತ್ತೆವೆ.
http://spreadsheets.google.com/viewform?formkey=dF90eEtaNDlnNkRQQmVPZlBRSE02OGc6MA..
ತಮ್ಮ ಸಲಹೆ ಮತ್ತು ಸಂದೇಹಗಳಿಗಾಗಿ shettaru@gmail.com ಗೆ ಮಿಂಚಂಚೆ ಕಳುಹಿಸಿ.
ಧನ್ಯವಾದಗಳೊಂದಿಗೆ
ಗ್ರಂಥಪಾಲಕ ಗೆಳೆಯರು
ಬ್ಲಾಗ್ ಬಗ್ಗೆ ನಿಮ್ಮಅಭಿಪ್ರಾಯ ಬೇಕು
ನಿಮಗೆ ಇವೂ ಇಷ್ಟವಾಗಬಹುದು…





ಧನ್ಯವಾದಗಳು ಅವಧಿ.
-ಶೆಟ್ಟರು
good effort
Is it possible to have list of Kannada blogs. Is so please let me know the source
vasanthrz@gmail.com