ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಮಂಡ್ಯ ರಮೇಶ್, ಬಸವರಾಜ ಸಬರದ ಸೇರಿದಂತೆ ಐವರಿಗೆ `’ಅಮ್ಮ ಗೌರವ’

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ‘ಅಮ್ಮ ಗೌರವ’ ಪುರಸ್ಕಾರಕ್ಕೆ ನಾಲ್ವರನ್ನು ಆಯ್ಕೆ ಮಾಡಲಾಗಿದೆ.

ಈ ಬಾರಿಯ ‘ಅಮ್ಮ ಗೌರವ' ಪುರಸ್ಕಾರಕ್ಕೆ, ರಂಗಭೂಮಿ ಕ್ಷೇತ್ರದ ಹಿರಿಯ ನಟ ಮಂಡ್ಯ ರಮೇಶ್, ಹಿರಿಯ ಪತ್ರಕರ್ತ ಶಿವರಾಯ ದೊಡ್ಡಮನಿ, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ನಿರ್ಮಲಾ ಪಾಟೀಲ ಬೊಮ್ನಳ್ಳಿ ಹಾಗೂ ಸಮಾಜ ಸೇವೆ ಕ್ಷೇತ್ರದಲ್ಲಿ ಜಯಶ್ರೀ ಐನಾಪುರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

ಕಳೆದ ಹನ್ನೆರಡು ವರ್ಷಗಳಿಂದ ನೀಡಲಾಗುತ್ತಿರುವ 'ಅಮ್ಮ ಗೌರವ ಪುರಸ್ಕಾರ’ಕ್ಕೆ ಈ ಬಾರಿಯೂ ನಾಡು-ನುಡಿಗೆ ನೀಡಿದ ಕೊಡುಗೆಯನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ಅಮ್ಮ ಗೌರವ ಪುರಸ್ಕಾರ ನೀಡಿ ಸತ್ಕರಿಸಲಾಗುತ್ತದೆ.

ಹೊಲಿಗೆ ಮಷಿನ್ ವಿತರಣೆ :

ಕಳೆದ ಹನ್ನೆರಡು ವರ್ಷಗಳಿಂದ ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಮಾಡಿಕೊಡುವ ಹಿನ್ನೆಲೆಯಲ್ಲಿ ಹೆಣ್ಣುಮಕ್ಕಳಿಗೆ ನೀಡುತ್ತಿರುವ ಹೊಲಿಗೆ ಮಷಿನ್‌ಗಳನ್ನು ಈ ಬಾರಿಯೂ ನಿವೃತ್ತ ಮೇಷ್ಟ್ರು ನಾಗಪ್ಪ ಮುನ್ನೂರ್ ಸ್ಮರಣಾರ್ಥ ನೀಡಲಾಗುವುದು.

ಪಟ್ಟಣದ ಐತಿಹಾಸಿಕ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಜರುಗುವ ೨೧ ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವು ನ.೨೬ ರಂದು ಸಂಜೆ ೫.೩೦ ಕ್ಕೆ ಆಯೋಜಿಸಲಾಗಿದೆ ಎಂದು `ಅಮ್ಮ ಪ್ರಶಸ್ತಿ’ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‍ಲೇಖಕರು avadhi

13 November, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading