ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ರುಚಿಯಾಗಿತ್ತು ಕಣೆ ಕಾಫಿ, ನಿನ್ನ ಪ್ರೀತಿ ಬೆರೆಸಿದ್ಯಾ..?

-ರವಿ ಅಜ್ಜೀಪುರ
ನದಿಪ್ರೀತಿ

ಇನ್ನು
ಕಾರಣ ಸಾಕು
ಆಚೆ ಹೋಗು
ಎದೆಯಿಂದ
ಅಲ್ಲೀಗ
ಪಟ್ಟಾಭಿಷೇಕ
ನಡೆಯುತ್ತಿದೆ
ಇನ್ನೊಬ್ಬನಿಗೆ
*
ನೆಲ
ಅಗೆದು
ನೀರು ಕೊಡಬಲ್ಲೆ
ಎದೆ ಬಗೆದು
ಹೇಗೆ ಕೊಡಲಿ
ರಕುತ
*
ನೀನು
ಎಲ್ಲಾ ಕೇಳಿದೆ
ನನ್ನ ಬಳಿ
ಪ್ರೀತಿಯೊಂದನ್ನು
ಬಿಟ್ಟು
*
ನನಗೊಂದು
ಆಸೆ ಇದೆ
ನಿನ್ನ
ತೋಳ ತೆಕ್ಕೆಯಲಿ
ಸಾಯಬೇಕೆಂದು
*
ಪ್ರೀತಿ ಅಂದರೆ
ದೇವರ
ಕಾಲ ಕೆಳಗಿನ
ಹೂವಲ್ಲ
ಅದು
ನೀಲಾಂಜನ
*
ನಾವು
ಕಾಮವನ್ನು
ಬಿಡಬಹುದು
ಕಾಮ
ನಮ್ಮನ್ನು
ಬಿಡೋಲ್ಲ
*
ನನಗೆ
ಅಳುವುದಕ್ಕೆ ಬಿಡು
ದೇವರೇ
ಇನ್ನಾದರೂ
ಅವಳ
ನೆನಪು
ಸಾಯಲಿ
*
ಕಷ್ಟ ಬಂದಾಗ
ದೇವರೇ
ನನಗೊಂದು
ದೊಡ್ಡ
ಕಷ್ಟ ಇದೆ
ಏನು ಮಾಡಲಿ
ಅನ್ನಬೇಡಿ
ಕಷ್ಟವೇ
ನನ್ನಲ್ಲಿ
ದೊಡ್ಡ ದೇವರಿದ್ದಾನೆ ಎನ್ನಿ
*
ಗೊತ್ತಾಗುತ್ತೆ ಬಿಡು
ನಿನಗೂ
ಒಡೆದ ಹೃದಯದ
ನೋವು
ಏನೆಂದು!
*
ಸೋಲುವುದು
ಸುಲಭ
ಗೆಲ್ಲುವುದು ಕಷ್ಟ
ಅದಕ್ಕೆ
ನಾನು ನಿನಗೆ
ಸೋತಿದ್ದು
*
ತುಂಬಾ ಜನ
ಪ್ರಪೋಸ್ ಮಾಡಿದ್ರು
ನಂಗೆ ಇಷ್ಟ ಇಲ್ಲ ಅಂದೆ
ಈಗ
ಅವರೆಲ್ಲ
ಸುಖವಾಗಿದಾರೆ
*
ನೀನು ಕೊಟ್ಟ
ಗುಲಾಬಿ
ಬಣ್ಣ
ಕಳಕೊಂಡಿದೆ
*
ಎಂದಿಗಿಂತ
ಇಂದು
ರುಚಿಯಾಗಿತ್ತು ಕಣೆ
ಕಾಫಿ
ನಿನ್ನ
ಪ್ರೀತಿ
ಬೆರೆಸಿದ್ಯಾ?
*
ನಿನಗೊಂದು
ಮಾತೂ ಹೇಳದೆ
ಸತ್ತು ಹೋಗಬಹುದು
ನಾನು
ಡೋಂಟ್ ವರಿ
ಸತ್ತ ಮೇಲೂ
ನಿನ್ನ
ಪ್ರೀತಿಸುವುದಿದ್ದರೆ
ಅದು
ನಾನು ಮಾತ್ರ
*
ಪ್ರತಿ ಕಣ್ಣೀರೂ
ದುಃಖದ್ದಲ್ಲ
ಪ್ರತಿ ನಗುವೂ
ಸುಖದ್ದಲ್ಲ
ಪ್ರತಿ ಮೌನವೂ
ಏಕಾಂತದ್ದಲ್ಲ
ಮುಖ
ಮುಖವಾಡಕ್ಕೆ
ಬಲಿಯಾಗಿದೆ
*
ದೇವರು
ಒಂದು ಹೂ ಮಾಡಿ
ಜೇನಿನಲ್ಲಿ ಅದ್ದಿ
ಇಟ್ಕೋ ಅಂತ ಕೊಟ್ಟ
ಅದು
ನೀನೇ ಕಣೆ
*
ಒದ್ದೆಯಾದ
ಮಣ್ಣ ಮೇಲೆ ನಿಂತು
ಆಚೆ ಬಂದಾಗಲೂ
ಉಳಿದುಬಿಡುತ್ತದಲ್ಲ
ಗುರುತು
ಹಾಗೇ ಪ್ರೀತಿ
*
ಪುಟ್ಟ ಕಥೆ ಹೇಳ್ತೀನಿ
ಅವನು ನಕ್ಕ
ಇವಳೂ ನಕ್ಕಳು
ಮಗು ಮಾತ್ರ
ಅಳ್ತಿತ್ತು
*
ಮಳೆ ಅಂದ್ರೆ
ಇಷ್ಟ ಅಂದವರೆ
ಬಂದಾಗ
ಛತ್ರಿ ಹುಡುಕ್ತಾರೆ
ಸೂರ್ಯ ಅಂದ್ರೆ
ಇಷ್ಟ ಅಂದವರೆ
ನೆರಳು ಹುಡುಕ್ತಾರೆ
ತಂಗಾಳಿ ಬೀಸಲಿ
ಅಂದವರೆ
ಬಂದಾಗ ಕಿಟಕಿ ಹಾಕ್ತಾರೆ
ಅದಕ್ಕೇ ಗೆಳೆಯ
ಯಾರಾದ್ರೂ
ಐ ಲವ್ ಯೂ
ಅಂದಾಗೆಲ್ಲ
ನನಗೆ ಭಯ
*
ಏನೂ
ಕೊಡಬೇಡ
ಕೇವಲ
ಪ್ರೀತಿಯ
ಹೊರತು
*
ಪ್ರೀತಿ
ಸುಲಭವೂ ಅಲ್ಲ
ಕಷ್ಟವೂ ಅಲ್ಲ
ಅದು ಹಗ್ಗದ
ಮೇಲಿನ ನಡಿಗೆ
*
ನಿಜ ಹೇಳ್ತೀನಿ
ನಾನು ಬಡವನಾಗಲು
ನಿನ್ನ ಬ್ಯೂಟಿಯೇ ಕಾರಣ
ನಿನಗೆ
ಕಾಸ್ಮೆಟಿಕ್ಸ್ ಕೊಡಿಸಲಿಲ್ಲ ಅಂದ್ರೆ
ಬೆಂಗಳೂರಲ್ಲೊಂದು
ಸೈಟ್ ಮಾಡ್ತಿದ್ದೆ
*
ಮೊನ್ನೆ ಕೇಳಬೇಕು ಅಂತಿದ್ದೆ
ಆಗಲಿಲ್ಲ
ನಿನ್ನೆ ಕೇಳಬೇಕು ಅಂತಿದ್ದೆ
ಆಗಲಿಲ್ಲ
ಇವತ್ತು ಕೇಳ್ತಿದೀನಿ ಕಣೋ
ನನ್ನ ಮರೆತು ಬಿಡು
ನನಗೆ ಪ್ರೀತಿಯೆಂದರೆ
ಕೇವಲ ಶೋಕಿಯಲ್ಲ
*
ಕೆಲವರು
ಬದುಕು
ಬಿಸಾಕಿ ಎದ್ದು ಹೋಗಿದ್ದು
ಬಾಳಲಿಕ್ಕಾಗಲ್ಲ ಅಂತಲ್ಲ
ನಾವೇ
ಬಿಡಲಿಲ್ಲ ಅಂತ

‍ಲೇಖಕರು avadhi

8 December, 2009

5 Comments

  1. Vijaylaxmi

    ರವಿ ಅಜ್ಜಿಪುರ ಅವರ ಕವನಗಳೆಲ್ಲವೂ ತುಂಬಾ ಚೆನ್ನಾಗಿವೆ…. Superb!

  2. usharani

    ನಿರವಾಗಿಯೂ ನೀವು ಬರೆದಿರುವ ಕವನಗಳೆಲ್ಲ್ಲವೂ ತುಂಬಾ ಚೆನ್ನಾಗಿವೆ.ಅದರಲ್ಲೂ ‘ದೇವರು ಒಂದು ಹೂ ಮಾಡಿ ಜೇನಿನಲ್ಲಲಿ ಅದ್ದಿ ಕೊಟ್ಟ ಅದು ನೀನೇ’ ಕಲ್ಲನೆಗೂ ಮೀರಿದ್ದು. ಹೀಗೆ ಮುಂದುವರೆಸಿ.

  3. hneshakumar@gmail.com

    ಸೊಗಸಾಗಿವೆ ಪದಗಳಲಿ ರವಿಯವರು ಬೆರೆಸಿರುವ ನವಿರುತನ…

  4. sharadabooks

    ಚೆನ್ನಾಗಿದೆ.
    ಮನಸಿಗೆ ತಟ್ಟುತ್ತೆ.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading