ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ವಿಭಾ ಸಾಹಿತ್ಯ ಪ್ರಶಸ್ತಿಗೆ ಕಾವ್ಯ ಹಸ್ತಪ್ರತಿ ಆಹ್ವಾನ

೨೦೨೩ ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಕಾವ್ಯ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-೨೦೨೩’ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. ೧೦,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ.

ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ ೧೦.

ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ;

ಸುನಂದಾ & ಪ್ರಕಾಶ ಕಡಮೆ
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-೨೦೨೩
ನಂ. ೯೦, ‘ನಾಗಸುಧೆ ಜಗಲಿ’
೬/ಬಿ ಕ್ರಾಸ್, ಕಾಳಿದಾಸನಗರ,
ವಿದ್ಯಾನಗರ ವಿಸ್ತೀರ್ಣ
ಹುಬ್ಬಳ್ಳಿ- ೫೮೦೦೩೧
ದೂರವಾಣಿ; ೯೩೮೦೬೧೩೬೮೩, ೯೮೪೫೭೭೯೩೮೭.

‍ಲೇಖಕರು avadhi

8 June, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading