ಓಂ ಶಿವಪ್ರಕಾಶ್
ಕನ್ನಡ ಸಂಚಯದ ಹೊಸ ಯೋಜನೆ – ಸಮೂಹ ಸಂಚಯ ಸಮುದಾಯದ ಒಗ್ಗಟ್ಟಿನ ಮೂಲಕ ಕನ್ನಡದ ತಾಂತ್ರಿಕ ಬೆಳವಣಿಗೆಗೆ ಆಗಬೇಕಿರುವ ಅನೇಕ ಕೆಲಸಗಳನ್ನು ‘ಕ್ರೌಡ್ ಸೋರ್ಸಿಂಗ್’ ಮೂಲಕ ಸಾಧ್ಯವಾಗಿಸುವ ವೇದಿಕೆಯಾಗಿದೆ. ಮೊದಲಿಗೆ, ಓಸ್ಮಾನಿಯ ಯುನಿವರ್ಸಿಟಿಯ ಡಿಜಿಟಲ್ ಲೈಬ್ರರಿಯಲ್ಲಿರುವ (http://oudl.osmania.ac.in) ೨೦೦೦ಕ್ಕೂ ಹೆಚ್ಚು ಪುಸ್ತಕಗಳ ಹೆಸರು ಇಂಗ್ಲೀಷ್ ನಲ್ಲಿದ್ದು, ಇವುಗಳನ್ನು ಕನ್ನಡೀಕರಿಸುವುದರ ಜೊತೆಗೆ ಯುನಿಕೋಡ್ ಸರ್ಚ್ ಸೌಲಭ್ಯದ ಮೂಲಕ ಈ ಪುಸ್ತಕಗಳನ್ನು ಕನ್ನಡಿಗರಿಗೆ ಸುಲಭವಾಗಿ ಸಿಗುವಂತೆ ಮಾಡುವ ಆಲೋಚನೆ ಈ ಯೋಜನೆಗಿದೆ. ಕೇವಲ ಸರ್ಚ್ ಸೌಲಭ್ಯ ಕೊಡುವುದಷ್ಟೇ ಅಲ್ಲದೇ ಈ ಎಲ್ಲ ಪುಸ್ತಕಗಳಿಗೆ ಅವುಗಳದ್ದೇ ಆದ ವಿಕಿ ಪುಟಗಳನ್ನು ಕೂಡ ಕನ್ನಡ ವಿಕಿಪೀಡಿಯದಲ್ಲಿ ಎಣೆಯುವಂತೆ ಮಾಡುವುದು, ವಿಕಿಪೀಡಿಯದಲ್ಲಿ ಈಗಾಗಲೇ ಲಭ್ಯವಿಲ್ಲದ ಲೇಖಕ/ಲೇಖಕಿಯರ ಪುಟಗಳು, ಕನ್ನಡ ಪುಸ್ತಕ ಪ್ರಕಾಶಕರ ಪುಟಗಳನ್ನೂ ಸೃಷ್ಟಿ ಮಾಡುವುದು ಇದರಿಂದ ಸಾಧ್ಯವಾಗಲಿದೆ.







Good effort
ಯೂನಿಕೋಡ್ ಬಗ್ಗೆ ಅರಿವಿರದ ನನಗೆ ಇದು ಒಂದು ಸುಂದರ ಪಾಠ. ಕನ್ನಡ ಇತರ ಭಾಷೆಗಳಿಗೆ ಹೊಯ್ಗೈಯಾಗಿ ನಿಲ್ಲುವಂತೆ
ನಮ್ಮ ತರುಣ ತಂತ್ರಜ್ಞಾನಿಗಳು ಮಾಡಬಲ್ಲರೇ ವಿನಃ ಶಿವಪ್ರಕಾಶರು ಹೇಳುವಂತೆ ಸರ್ಕಾರದಿಂದ ಕಷ್ಟಸಾಧ್ಯ.