ಸಾಹಿತ್ಯ ಪರಿಷತ್ ಗೆ ಏನಾಗಿದೆ??- ಇನ್ನಷ್ಟು..

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ಈಗ ವಿವಾದಮಯವಾಗಿದೆ.
‘ಮಂಗನ ಬ್ಯಾಟೆ’ ಖ್ಯಾತಿಯ ಪ್ರಗತಿಪರ ಚಿಂತಕ ಕಲ್ಕುಳಿ ವಿಠ್ಠಲ ಹೆಗಡೆ ಅವರು ಅಧ್ಯಕ್ಷತೆ ವಹಿಸುವುದನ್ನು ವಿರೋಧಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಹಾಗೂ ಸಂಸ್ಕೃತಿ ಸಚಿವರ ಹೇಳಿಕೆಗಳ ಬಗ್ಗೆ ಡಾ ವಿಜಯಾ ಅವರು ಬರೆದ ಅಭಿಪ್ರಾಯಕ್ಕೆ ಇನ್ನಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.

ಇದೇ ಜನವರಿ 10ಮತ್ತು 11ರಂದು ಶೃಂಗೇರಿಯಲ್ಲಿ ಹತ್ತನೇ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಜನಪರ ಹೋರಾಟಗಾರ ಮತ್ತು ಸಾಹಿತಿ ಕಲ್ಕುಳಿ ವಿಠಲ ಹೆಗಡೆಯವರನ್ನು ಸಮ್ಮೇಳನಾದ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಈಗಾಗಲೆ ಎಲ್ಲರಿಗು ತಿಳಿದ ವಿಷಯ.
ಹೆಗಡೆಯವರ ಆಯ್ಕೆಯೀಗ ಜಿಲ್ಲೆಯಲ್ಲಿ ವಿವಾದದ ಕಿಡಿಯನ್ನು ಹೊತ್ತಿಸಿದೆ. ಅವರ ಆಯ್ಕೆಯಾದಾಗ ಆರಂಭದಲ್ಲಿ ಕೇಳಿ ಬಂದಿದ್ದು ಪರಿಷತ್ತಿನ ಒಂದು ಗುಂಪು ಯಾರನ್ನೂ ಕೇಳದೆ ಏಕಮುಖಿಯಾಗಿ ತೀರ್ಮಾನ ತೆಗೆದುಕೊಂಡಿದೆಯೆಂಬುದಾಗಿತ್ತು. ಮತ್ತು ಈಬಗ್ಗೆ ಒಂದಷ್ಟು ವಾದ ಪ್ರತಿವಾದಗಳು ನಡೆದವು.ಮೊದಲಿನಿಂದಲೂ ಹೆಗಡೆಯವರ ಜನಪರ ಹೋರಾಟಗಳನ್ನು ವಿರೋಧಿಸುತ್ತ ಅಸಹನೆ ತೋರಿಸುತ್ತ ಬಂದಿದ್ದ ಬಲಪಂಥೀಯ ವಿಚಾರಧಾರೆಯ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳು ಅಖಾಡಕ್ಕಿಳಿದು ಹೆಗಡೆಯವರ ಅದ್ಯಕ್ಷತೆಯನ್ನು ವಿರೋಧಿಸಿ ಹೇಳಿಕೆ ನೀಡ ತೊಡಗಿದವು.
ಇದೀಗ ಈ ವಿರೋಧ ಸಂಘಟನಾತ್ಮಕ ರೂಪ ಪಡೆದುಕೊಂಡು ಬಿ.ಜೆ.ಪಿ. ಭಜರಂಗದಳ, ಎ.ಬಿ.ವಿ.ಪಿ.ಗಳು ‘ಕಸಾಪ ಉಳಿಸಿ’ ಹಾಗು ‘ನಕ್ಸಲ್ ವಿರೋದಿ ಹೋರಾಟ ಸಮಿತಿ’ ಎಂಬ ಬ್ಯಾನರಿನ ಅಡಿಯಲ್ಲಿ ಶೃಂಗೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ, ಸಮಾವೇಶ ನಡೆಸಿವೆ. ಜೊತೆಗೆಸಮ್ಮೇಳನವನ್ನು ನಡೆಸಿದರೆ ರೌದ್ರಾವತಾರಕ್ಕೆ ಅವಕಾಶ ನೀಡಿದಂತಾಗುತ್ತದೆಯೆಂಬ ಎಚ್ಚರಿಕೆಯನ್ನೂ ನೀಡಿವೆ

ಜಿಲ್ಲೆಯ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡದಿಂದ ಮತ್ತು ಪರಿಷತ್ತಿನ ಒಳರಾಜಕಾರಣಗಳಿಂದ ಇದುವರೆಗು ಹೆಗಡೆಯವರ ಕೈತಪ್ಪುತ್ತಿದ್ದ ಅದ್ಯಕ್ಷತೆಯ ಮನ್ನಣೆ ಈ ಬಾರಿ ಅವರಿಗೆ ದೊರಕಿದ್ದರಲ್ಲಿ ಅಚ್ಚರಿ ಪಡುವಂತಹುದೇನೂ ಇರಲಿಲ್ಲ. ಯಾಕೆಂದರೆ ಈಗ ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ಹೆಗಡೆಯವರ ಆಯ್ಕೆ ಅವರ ಅರ್ಹತೆಗೆ ಸಂದದ್ದಾಗಿತ್ತು.ಅಕಾಡೆಮಿ ಪ್ರಶಸ್ತಿ ಮಾತ್ರವಲ್ಲದೆ ಚದುರಂಗ ಪ್ರಶಸ್ತಿ ಸಹ ಹೆಗಡೆಯವರಿಗೆದೊರಕಿದೆ. ಇಷ್ಟೆಲ್ಲ ಅರ್ಹತೆಗಳ ನಡುವೆಯೂ ಯಾಕೆ ಹೆಗಡೆಯವರನ್ನು ವಿರೋಧಿಸಲಾಗುತ್ತಿದೆ ಎನ್ನುವುದನ್ನು ನೋಡಿದರೆ ಚಿಕ್ಕಮಗಳೂರು ಜಿಲ್ಲೆಯನ್ನು ಕಾಡುತ್ತಿರುವ ಮೂಲಭೂತವಾದ ಶಕ್ತಿಗಳ ವಿರಾಟ್ ಸ್ವರೂಪ ಪರಿಚಯವಾಗುತ್ತದೆ.
ಮೊದಲಿನಿಂದಲೂಹೆಗಡೆಯವರು ದಲಿತರ,ಬಡವರ, ಆದಿವಾಸಿಗಳ ಪರ ಹೋರಾಟ ಮಾಡಿಕೊಂಡೆ ಬದವರು. ಈ ಹೋರಾಟಗಳ ಕಾರಣದಿಂದ ಅವರಿಗೆ ಲಭ್ಯವಾಗುತ್ತಿದ್ದ ಜನಪ್ರಿಯತೆಯನ್ನು ಸಹಿಸದ ಮೇಲ್ವರ್ಗಗಳ ಭೂಮಾಲೀಕರು, ಬಂಡವಾಳಶಾಹಿ, ಕೋಮುವಾದಿ ಶಕ್ತಿಗಳು ಹಿಂದಿನಿಂದಲೂ ಹೆಗಡೆಯವರ ವಿರುದ್ದ ಕಿಡಿಕಾರುತ್ತಲೇ ಬಂದಿದ್ದಾರೆ. ಈ ಹಿಂದೆ ಇವರ ವಿರುದ್ದ ಅಟ್ರಾಸಿಟಿ ಸೇರಿದಂತೆ ಹತ್ತಾರು ಸುಳ್ಳು ಕೇಸುಗಳನ್ನು ಹಾಕಿಸಿ, ನಕ್ಸಲ್ ಎಂಬ ಹಣೆಪಟ್ಟಿಯನ್ನೂ ಕಟ್ಟಿ ಹೆಗಡೆಯವರನ್ನುಹಣಿಯಲು ಯತ್ನಿಸುತ್ತಲೇ ಬಂದಿದ್ದಾರೆ.
ಹೆಗಡೆಯವರ ಆಯ್ಕೆಯನ್ನು ವಿರೋಧಿಸುವ ಮತ್ತು ಅವರ ಸಿದ್ದಾಂತಗಳನ್ನು ಧಿಕ್ಕರಿಸಿ ಪ್ರತಿಭಟಿಸುವ ಎಲ್ಲ ಹಕ್ಕುಗಳು ಜನರಿಗೆ ಮತ್ತು ಸಂಘಟನೆಗಳಿಗೆ ಇವೆ. ಆದರೆ ಸಮಾವೇಶ ನಡೆಸಿ ಸಮ್ಮೇಳನ ನಡೆದರೆ ಉಗ್ರವಿರೋಧವನ್ನು ಎದುರಿಸಬೇಕಾಗುತ್ತದೆ, ಸಮ್ಮೇಳನರದ್ದು ಪಡಿಸಿ ಎಂದು ಪರೋಕ್ಷವಾಗಿ ಬೆದರಿಕೆ ಹಾಕುವ ಮೂಲಕ ಕೆಲವು ಸಂಘಟನೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೆ ಅಣಕಿಸಲು ಹೊರಟು ನಿಂತಿವೆ.
ಇಂತಹ ಸಂದರ್ಭದಲ್ಲಿ ನಾಡಿನಸಾಹಿತಿಗಳು, ಪ್ರಗತಿಪರ ಚಿಂತಕರು ಕಲ್ಕುಳಿಯವರ ಪರ ಅಂದರೆ ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳ ವಿರುದ್ದ ನಿಲ್ಲಬೇಕಾಗಿದೆ.
-ಕು.ಸ.ಮಧುಸೂದನ

ಈ ಮನು ಮಹಾಶಯರು ಕಸಾಪ ಚುನಾವಣೆ ಗೆ ನಿಂತಾಗಲೇ ಇದನ್ನು ನಿರೀಕ್ಷಿಸಿದ್ದೆವು. ಜಾತಿವಾದ ಮತ್ತು ಅವರು ಒಳ್ಳೆಯ ಆಡಳಿತಗಾರ ಎಂಬ ಕೆಲವರ ಭ್ರಮೆ ಅವರನ್ನು ಪೀಠಕ್ಕೇರಿಸಿತು. ಈಗಲ್ಲ ಕೆಲವೇ ತಿಂಗಳಲ್ಲಿ ಅವರ ನಿಜ ಬಣ್ಣ ಬಯಲಾಗಿತ್ತು
-ಪ್ರಸಾದ್ ರಕ್ಷಿದಿ 
ಮನು ಬಳಿಗಾರ್ ಸರ್ಕಾರದ ಹಂಗು ತೊರೆದು ಬೀದಿಗೆ ಬರಬೇಕು.
-ಎಲ್ ಎನ್ ಮುಕುಂದರಾಜ್ 
ರಂಗ ಕಲಾವಿದರ ಪ್ರಶಸ್ತಿಗಳನ್ನು ಕಸಿದುಕೊಂಡವರೀಗ ಸಾಹಿತ್ಯ ರಂಗಕ್ಕೂ ಲಗ್ಗೆ ಇಟ್ಟಿದ್ದಾರೆ. ಮನು ಬಳೆಗಾರರ ಮನೋಸ್ಥಿತಿಗೆ ಶ್ರದ್ಧಾಂಜಲಿ
-ಬಿ ಎಲ್ ವೇಣು 

‍ಲೇಖಕರು avadhi

January 7, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: