ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾಗಿದ್ದ ಸ್ವಪ್ನಶಿಲ್ಪಿ ಡಾ.ಹೆಚ್. ಶಾಂತಾರಾಮ್ ಅವರ ಹೆಸರಿನಲ್ಲಿ ಕುಂದಾಪುರ ಭಂಡಾಕಾರ್ಸ್ ಕಾಲೇಜು ದತ್ತಿನಿಧಿ ಸ್ಥಾಪಿಸಿ ಪ್ರತಿವರ್ಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ವರ್ಷ ಕಾದಂಬರಿಗಳನ್ನು ಪರಿಗಣಿಸಲಿದ್ದು, ೨೦೨೧ರಿಂದ ೨೦೨೨ರ ಅವಧಿಯಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಕಾದಂಬರಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಪ್ರಕಾಶಕರು ಅಥವಾ ಲೇಖಕರು ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಮೇ ೨೦ರೊಳಗೆ ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾಕಾರ್ಸ್ ಕಾಲೇಜು ಕುಂದಾಪುರ -೫೭೬೨೦೧ ಈ ವಿಳಾಸಕ್ಕೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಈಗಾಗಲೇ ಪ್ರಶಸ್ತಿ ಪಡೆದವರಿಗೆ ಅವಕಾಶವಿರುವುದಿಲ್ಲ.
ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು, ಹದಿನೈದು ಸಾವಿರ ರೂಪಾಯಿಯೊಂದಿಗೆ ಬೆಳ್ಳಿಫಲಕ ನೀಡಲಾಗುವುದೆಂದು ಪ್ರಶಸ್ತಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 9449257263 ಸಂಪರ್ಕಿಸಬಹುದು.






0 Comments