ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಹೊಸ 'ಮೀಡಿಯಾ ಮಿರ್ಚಿ' ಬಂದಿದೆ

‘ಓ ಬಿ ವ್ಯಾನ್ ಬೇಕು’ ಅಂದೆ. ರಾಮೋಜಿ ಫಿಲಂ ಸಿಟಿಯ ಮೀಟಿಂಗ್ ಹಾಲ್ ನಲ್ಲಿದ್ದವರು ಏನೋ ಟೆರರಿಸ್ಟ್ ಅಟ್ಯಾಕ್ ಆಗಿದೆ ಅಂತ ಗಾಬರಿಯಾದರು. ಅಂತದ್ದೇನೂ ಇಲ್ಲ ಅಂದೆ. ಹಾಗಿದ್ರೆ ಸೋನಿಯಾ ಗಾಂಧಿ ಬರ್ತಾ ಇದ್ದಾರಾ ಅಂದ್ರು. ‘ ನೋ’  ಅಂತ ತಲೆ ಆಡಿಸಿದೆ. ಮತ್ತೆ ಓ ಬಿ ವ್ಯಾನ್ ಯಾಕೆ ಅಂತ ಪ್ರಶ್ನಿಸಿದರು. ಶಿವಮೊಗ್ಗದಲ್ಲಿ ಸಾಹಿತ್ಯ ಸಮ್ಮೇಳನ ಕವರೇಜ್ ಗೆ ಅಂದೆ. ಒಂದು ಕ್ಷಣ ಎಲ್ಲರೂ ಮುಖ ಮುಖ ನೋಡಿಕೊಂಡರು. ಓ ಬಿ ವ್ಯಾನ್ ಗೂ ಸಾಹಿತ್ಯಕ್ಕೂ ಎಲ್ಲಿಂದೆಲ್ಲಿಯ ಸಂಬಂಧ? ಬೆಟ್ಟದ ಮೇಲಿನ ನೆಲ್ಲೀಕಾಯಿ, ಸಮುದ್ರದೊಳಗಣ ಉಪ್ಪು ಎತ್ತಣಿಂದೆತ್ತ  ಸಂಬಂಧವಯ್ಯ..?
ಇಂತದ್ದೇ ಗಾಬರಿ ನೇರಾ ನೇರಾ ರಾಮೋಜಿರಾಯರಿಗೇ ಆಗಿತ್ತು. ತೇಜಸ್ವಿ ಇಲ್ಲವಾದಾಗ ಈಟಿವಿಯ ಬುಲೆಟಿನ್ ಗಳೆಲ್ಲವೂ ಶೋಕ ಹೊದ್ದು ಕೂತಿತು. ಗಂಟೆಗೊಮ್ಮೆ  ಪ್ರಸಾರವಾಗುವ ಬುಲೆಟಿನ್ ಗಳು ಹಾಂ, ಹ್ಞೂ ಎನ್ನುವುದರೊಳಗೆ ಮುಗಿದು ಹೋಗಿರುತ್ತವೆ. ಹಾಗಾಗಿ ಇದರ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ಪ್ರೈಮ್ ಬುಲೆಟಿನ್ ಮಾತ್ರ ಎಲ್ಲರ ಗರುಡಗಣ್ಣನ್ನೂ ದಾಟಿಯೇ ಬರಬೇಕು. ಸಂಸ್ಥೆಯ ಮುಖ್ಯಸ್ಥರಿಂದ ಹಿಡಿದು ಮ್ಯಾನೇಜರ್ ವರೆಗೆ ಎಲ್ಲರೂ ‘ನೈಟ್ ವಾಚ್ ಮನ್’ ಗಳೇ..ಹಾಗಿರುವಾಗ ತೇಜಸ್ವಿ ಇಲ್ಲವಾದ ದಿನ ಇಡೀ ಬುಲೆಟಿನ್ ಅನ್ನು ತೇಜಸ್ವಿಗೆ ಮೀಸಲಿಟ್ಟಿದ್ದು ಎಲ್ಲರಿಗೂ ಷಾಕ್ ನೀಡಿತ್ತು. ತೇಜಸ್ವಿ ಇಲ್ಲ ಎನ್ನುವ ಸುದ್ದಿಯ ಮುಂದೆ ಇನ್ನೊಂದು ಸುದ್ದಿಯಾದರೂ ಎಲ್ಲಿ ಅನ್ನೋದು ನನ್ನ ನಿಲುವು. ಚೇರ್ಮನ್ ರಿಂದ ಬುಲಾವ್ ಬಂತು. ಅಲ್ಲ, ಇಡೀ ಬುಲೆಟಿನ್ ಅನ್ನು ಒಬ್ಬರಿಗೇ ಮೀಸಲಿಡೋದು ಎಷ್ಟು ಸರಿ? ಜಗತ್ತಿನ ಎಲ್ಲೂ ಇವತ್ತು ಏನೂ ಘಟಿಸಿಲ್ವ? ಅದೂ ಪ್ರೈಮ್ ಬುಲೆಟಿನ್ ನಲ್ಲಿ’ ಅಂದ್ರು. ನನಗಂತೂ ಅವತ್ತಿನ ಮೆಗಾ ನ್ಯೂಸ್ ತೇಜಸ್ವಿಯೇ ಅನ್ನೋದು ಖಚಿತವಾಗಿ ಹೋಗಿತ್ತು. ‘ತೇಜಸ್ವಿ ವಿನಾ ಬುಲೆಟಿನ್ ನ ಚಲತಿ’ ಅಂತ ನಿರ್ಧರಿಸಿಬಿಟ್ಟಿದ್ದೆ.
ಪೂರ್ಣ ಓದಿಗೆ: ಮೀಡಿಯಾ ಮೈಂಡ್

‍ಲೇಖಕರು avadhi

23 February, 2010

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading