ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ʻರವೀಂದ್ರ ಪುಸ್ತಕಾಲಯʼ ʻಛಂದʼ ಕ್ಕೆ ʻಅಂಕಿತ ಪುರಸ್ಕಾರ

ಕನ್ನಡ ಸಾಹಿತ್ಯ ಪರಿಷತ್ತು ಪ್ರಕಾಶನ ಸಂಸ್ಥೆಗಳಿಗೆ ಕೊಡಮಾಡುವ ೨೦೨೨ ಹಾಗೂ ೨೦೨೩ನೇ ಸಾಲಿನ ʻಅಂಕಿತ ಪುಸ್ತಕ ಪುರಸ್ಕಾರʼದತ್ತಿ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿದೆ.

ಪ್ರಶಸ್ತಿಯು ೩೫,೦೦೦(ಮೂವತೈದು ಸಾವಿರ)ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಬೆಂಗಳೂರಿನ ಅಂಕಿತ ಪುಸ್ತಕ ಪ್ರಕಾಶನದವರು ಕನ್ನಡ ಪ್ರಕಾಶಕರಿಗಾಗಿ ಈ ದತ್ತಿ ನಿಧಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿದ್ದಾರೆ.

೨೦೨೨ನೆಯ ಸಾಲಿನ ಅಂಕಿತ ಪುಸ್ತಕ ಪುರಸ್ಕಾರ ದತ್ತಿ ಪ್ರಶಸ್ತಿʼಯನ್ನು ಶಿವಮೊಗ್ಗ ಜಿಲ್ಲೆಯ ಸಾಗರದ “ರವೀಂದ್ರ ಪುಸ್ತಕಾಲಯ” ಹಾಗೂ ೨೦೨೩ನೆಯ ಸಾಲಿನ ಪುರಸ್ಕಾರಕ್ಕೆ ಬೆಂಗಳೂರಿನ “ಛಂದ ಪುಸ್ತಕ” ಸಂಸ್ಥೆಯನ್ನು ಆಯ್ಕೆ ಸಮಿತಿ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಮಾಧ್ಯಮ ಕಾರ್ಯದರ್ಶಿ ಜೆ ಶ್ರೀನಾಥ್ ತಿಳಿಸಿದ್ದಾರೆ

‍ಲೇಖಕರು avadhi

1 June, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading