ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಅಪರ್ಣಾ ಇನ್ನಿಲ್ಲ..

ಕಳೆದ ಎರಡು ವರ್ಷಗಳಿಂದ ಶ್ವಾಸಕೋಶದ ಕ್ಯಾನ್ಸರ್ ನಿಂದ ನರಳುತ್ತಿದ್ದ ಖ್ಯಾತ ನಟಿ, ನಿರೂಪಾಕಿ ಅಪರ್ಣಯ ವಸ್ತಾ ರೆ ಇನ್ನಿಲ್ಲ.

ಇಂದು ರಾತ್ರಿ ಅವರು ನಿಧನ ಹೊಂದಿದರು. ಅವರಿಗೆ 58 ವರ್ಷ ವಯಸ್ಸಾಗಿತ್ತು.

ಖ್ಯಾತ ಸಾಹಿತಿ ನಾಗರಾಜ ವಸ್ತಾರೆ ಅವರು ಬರೆದ ನೋವಿನ ಅಂತಿಮ ನಮನದ ಕವಿತೆ ಇಲ್ಲಿದೆ-

ಬೆಳಗಿಕೊಂಡಿರೆಂದು
ಕಿಡಿ ತಾಕಿಸಿ ಹೊರಟಿತು
ಹೆಣ್ಣು

ಚಿತ್ತು ತೆಗೆದು
ಬತ್ತಿಯ ನೆತ್ತಿ ಚೆನ್ನಾಗಿಸಿ
ತಿರುಪಿ ತಿದ್ದಿ

ಇರು
ತುಸುವಿರೆಂದು ಕರೆದರೂ
ನಿಲ್ಲದೆಯೇ
ಬೇರಾವುದೋ ಕರೆಗೆ
ತಣ್ಣಗೆ ಓಗೊಟ್ಟ ಮೇರೆ
ಯಲ್ಲಿ

ಒಂದೇ ಒಂದು
ನಿಮಿಷ
ಬಂದೇನೆಂದು ಕಡೆಗಳಿಗೆ
ಯ ಸೆರಗಿನ ಬೆನ್ನಿನಲ್ಲಿ
ಅಂದು.

ಕಾದಿದ್ದೇನೆ
ಈಗ ಬಂದಾಳೆಂದು
ಆಗ ಬಂದಾಳೆಂದು
ಮರಳಿ
ಜೀವ ತಂದಾಳೆಂದು
ಇದು
ಮೂರನೇ ದಿವಸ

ಇಷ್ಟಾಗಿ
ಬೆಳಗಲಿಟ್ಟ ಕಿರಿಸೊಡರ
ಬೆಳಕು ನಾನು
ಉರಿವುದಷ್ಟೇ ಕೆಲಸ
ಇರುವ ತನಕ.

‍ಲೇಖಕರು avadhi

11 July, 2024

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading