ಅಮನ ಕುಮಾರ್ ಹೊಸ ಕೃತಿ ಬಿಡುಗಡೆ

ಅಮನ ಜೆ. ಕುಮಾರ್ ಅವರ ನಾಲ್ಕನೆ ಪುಸ್ತಕ Galore of Mysteries ಅನ್ನು ಸುಪ್ರೀಂ ಕೋರ್ಟ್ ನ ವಿಶ್ರಾಂತ ನ್ಯಾಯಾಧೀಶರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಲೋಕಾಯುಕ್ತರಾದ ಎನ್. ಸಂತೋಷ್ ಹೆಗ್ಡೆ ಅವರು ಇತ್ತೀಚೆಗೆ ಬಿಡುಗಡೆ ಮಾಡಿದರು.

ಈ ಪುಸ್ತಕ ಅಮನಳ 4 ನೆಯ ಪುಸ್ತಕ ಹಾಗೂ ಮೊದಲ fiction writing ಪುಸ್ತಕವಾಗಿದೆ. ಅಮನ ಬೆಂಗಳೂರಿನ ಬಿಷಪ್ ಕಾಟನ್ ಗರ್ಲ್ ಸ್ಕೂಲ್ ನಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಹಾರ್ವಡ್ ವಿಶ್ವ ವಿದ್ಯಾಲಯದಿಂದ “Masterpieces of World Literature” ಕೋರ್ಸ್ ಮಾಡಿದ್ದಾರೆ.

“ಅಮಾನಾಳ Galore of Mysteries” ಪುಸ್ತಕವು, ಕವನ ಹಾಗೂ ಕಿರು ಕಥೆಗಳ ಸಂಗ್ರಹವಾಗಿದ್ದು ರಹಸ್ಯಗಳ ಕೌತುಕವನ್ನು ಒಳಗೊಂಡಿರುತ್ತದೆ. ಇದು ಸಾಹಸಮಯವಾಗಿದ್ದು ಭಯಾನಕ ಹಾಗೂ ಹಾಸ್ಯದಿಂದ ಕೂಡಿ ಓದುಗರನ್ನು ಪ್ರತಿಪುಟದಲ್ಲಿಯೂ ಕಲ್ಪನೆಯ ಲೋಕಕ್ಕೆ ಕರೆದೊಯ್ಯುವ ಆಕರ್ಷಣೆಯನ್ನು ಹೊಂದಿದೆ.

ಡಾ. ಲತಾ ಟಿ.ಎಸ್, ಹಾಗೂ ಜೈವಂತ್ ಕುಮಾರ್ ಅವರ ಮಗಳಾದ ಅಮನ 6ನೇ ತರಗತಿಯಲ್ಲಿದ್ದಾಗ ಇಂಗ್ಲೀಷ್ ಕವನಗಳನ್ನು ಬರೆಯಲು ಪ್ರಾರಂಭಿಸಿದ್ದು, ಅವಳ ಪ್ರಥಮ ಕವನ “Echoes of Soulful Poems” ಎರಡನೇ “World Amidst the Words” ಹಾಗೂ “Lafzon ki Mhfil “ ಮೂರನೇ ಹಿಂದಿ ಕವನ ಸಂಕಲನವು ಈಗಾಗಲೇ ಅಮೇಜಾನ್, ಪ್ಲಿಪ್ ಕಾರ್ಟ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಲಭ್ಯವಿರುತ್ತವೆ.

ಅಮನಳ ದಾಖಲೆಗಳು:

  • ಭಾರತದ ಕಿರಿಯ ಕವಯಿತ್ರಿ ಇಂಡಿಯಾ ಬುಕ್ ಆಪ್ ರೆಕಾಡ್ಸ್ -2021
  • ಏಷ್ಯಾ ಬುಕ್ ಆಪ್ ರೆಕಾಡ್ಸ್-2021 ಕಿರಿಯ ವಯಸ್ಸಿನಲ್ಲಿ ಕವಿತೆಗಳನ್ನು ಬರೆದಿರುವುದು.
    *ಕೌಟಿಲ್ಯ ವರ್ಷದ ಕಿರಿಯ ಕವಿ ಪ್ರಶಸ್ತಿ – 2021 ಗೋವಾದ ಗೌರವಾನ್ವಿತ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
    *ನೋಬಲ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ
    ಕಿರಿಯ ಕವಯಿತ್ರಿ
    *ವರ್ಲ್ಡ್ ರೆಕಾರ್ಡ್ ವಿಶ್ವವಿದ್ಯಾಲಯ ಪ್ರವೇಶ 2022, ಸತತ ವರ್ಷಗಳಲ್ಲಿ ಕವನ ಸಂಕಲನ ಪುಸ್ತಕಗಳನ್ನು ಪ್ರಕಟಿಸಿದ ಕಿರಿಯ ಕವಿಯಿತ್ರಿ
    *ಗೋಲ್ಡನ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ಸ್ 2022 ನಲ್ಲಿ ದಾಖಲೆ ಬರೆದಿದ್ದಾರೆ.
  • ವಂಡರ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ಸ್ ಕಿರಿಯ ಕವಯತ್ರಿ
  • ಇಂಟರ್ನ್ಯಾಷನಲ್ ಬುಕ್ಅಪ್ ರೆಕಾರ್ಡ್ಸ್ ಕಿರಿಯ ಕವಿಯತ್ರಿ. ಇಲ್ಲಿಯವರೆಗೂ ಅಮನ ಇಂಗ್ಲಿಷ್ ಮತ್ತು ಹಿಂದಿಯಲ್ಲಿ 500 ಕ್ಕೂ ಹೆಚ್ಚು ಕವನಗಳನ್ನು ಬರೆದಿರುತ್ತಾರೆ.

‍ಲೇಖಕರು avadhi

January 1, 2024

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: