ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

19ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರ್ಗಿ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 19 ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ 2018-19 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.

ಕಳೆದ 18 ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಈಗ ಅಮ್ಮ ಪ್ರಶಸ್ತಿಗೆ 19 ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ.

ಕೃತಿಗಳನ್ನು ಸ್ವೀಕರಿಸಲು ಅಕ್ಟೊಬರ್ 30 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ :

ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರು,

ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ಮುನ್ನೂರು ಪ್ರತಿಷ್ಠಾನ

“ಅಮ್ಮ ನಿಲಯ”, ರಾಮಚಂದ್ರ ಲೇಔಟ್,

ಜಿ. ಕೆ. ಕ್ರಾಸ್, ಊಡಗಿ ರಸ್ತೆ,

ಸೇಡಂ-585 222  ಕಲಬುರಗಿ ಜಿಲ್ಲೆ.

ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 97316 66052 ಸಂಪರ್ಕಿಸಬಹುದು.

‍ಲೇಖಕರು avadhi

5 October, 2019

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading