-ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ಒಂದೂವರೆ ಕೋಟಿ ರೂಪಾಯಿಗಳ ದತ್ತಿ ನಿಧಿಯಿಂದ ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ಅರಳು ಪ್ರಶಸ್ತಿಗಳನ್ನು ನೀಡುತ್ತಿದೆ. ಇದಕ್ಕಾಗಿ ಕನ್ನಡದ ಯುವ ಬರಹಗಾರರಿಂದ ವಿವಿಧ ಸಾಹಿತ್ಯ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದೆ. 2011ರ ಆ.15ಕ್ಕೆ 35 ವರ್ಷ ಮೀರಿರದ ಕನ್ನಡ ಯುವ ಬರಹಗಾರರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕವನ, ಸಣ್ಣಕಥೆ, ಕಾದಂಬರಿ, ನಾಟಕ, ಲಲಿತ ಪ್ರಬಂಧ, ಪರಿಸರ, ವಿನೋದ ಸಾಹಿತ್ಯ, ಅನುವಾದ, ಮಕ್ಕಳ ಸಾಹಿತ್ಯ, ವಿಮರ್ಶೆ/ಸಂಶೋಧನೆ-ಈ ಹತ್ತು ಸಾಹಿತ್ಯ ಪ್ರಕಾರಗಳಲ್ಲಿ ಕನ್ನಡದಲ್ಲಿ ರಚಿಸಿದ ಪುಸ್ತಕಗಳನ್ನು ಸ್ಪರ್ಧೆಗೆ ಕಳುಹಿಸಬಹುದು.2010ರ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಥಮ ಮುದ್ರಣವಾಗಿ ಪ್ರಕಟವಾಗಿರುವ ಪುಸ್ತಕಗಳನ್ನು ಮಾತ್ರ ಸ್ಪರ್ಧೆಗೆ ಪರಿಗಣಿಸಲಾಗುವುದು. ಪ್ರತಿ ಪ್ರಕಾರಕ್ಕೂ ಪುಸ್ತಕದ ಮೂರು ಪ್ರತಿಗಳನ್ನು ಕಳುಹಿಸಬೇಕು. ಆಯ್ಕೆಯಾದ ಪುಸ್ತಕ ಕೃತಿಗಳಿಗೆ ತಲಾ 10,000 ರೂ. ನಗದು ಹಾಗೂ ಪ್ರಶಸ್ತಿಗಳಿರುತ್ತವೆ.
ಸ್ಪರ್ಧೆಗೆ ಪುಸ್ತಕಗಳನ್ನು ಕಳುಹಿಸುವ ವಿಳಾಸ: ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು- 18. ಸ್ಪರ್ಧೆಗೆ ಪುಸ್ತಕಗಳನ್ನು ಕಳುಹಿಸಲು ಸೆ.30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 (ದೂರವಾಣಿ ಸಂಖ್ಯೆ: 080-26623584) ಸಂಪರ್ಕಿಸಬಹುದಾಗಿದೆ ಎಂದು ಗೌರವ ಕಾರ್ಯದರ್ಶಿ ಎಚ್.ಕೆ.ಮಳಲಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






0 Comments