ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಅವಳನ್ನೇಕೆ ನಿಂದಿಸುವೆ ಸುಖಾಸುಮ್ಮನೆ..

ಕಠೋರ ಮೌನ

Sangmesh Diggi

ಸಂಗಮೇಶ ಡಿಗ್ಗಿ

ಅಧರಗಳಿಗೆ ಹೆಣೆದ ಕಸೂತಿ ಬಿಚ್ಚು ಹೆಪ್ಪುಗಟ್ಟಿದೆ ನಿನ್ನದು ಕಠೋರ ಮೌನ
ನಿನ್ನ ಧನಿಗಾಗಿ ನಿಶಬ್ಧರಾಗಿ ಮಲಗಿದ್ದಾರೆ ಸ್ಮಶಾನದಲಿ ನಿನ್ನದು ಕಠೋರ ಮೌನ.

ಹಾಡು ಕುಣಿತ ಮೋಜಿನ ಮಧುಶಾಲೆಯ ಮಂಚದಲಿ
ರತಿಸುಖದ ಉನ್ಮಾದಕತೆ ಕೊಳಕು ಶರಾಬಿನ ಬಟ್ಟಲಲಿ ಕೆನೆಗಟ್ಟಿದೆ ನಿನ್ನದು ಕಠೋರ ಮೌನ.

ಎಳಸು ಹೃದಯದಲಿ ಬಂಧಿಯಾಗಿದೆ ಮರಿಮೀನು ಹೊರಬರಲಾಗದೆ
ನಿನ್ನೆದೆಯ ಸದ್ದಿಗೆ ಕಿವಿ ನಿಮಿರಿಸಿ ಬರಗೆಟ್ಟಿದೆ ನಿನ್ನದು ಕಠೋರ ಮೌನ.

ಜಾತ್ರೆಯಲಿ ತೂರಿಬರುವ ಬೆಂಡು ಬತಾಸಿಗಿಂತಲೂ ಹರಿತ
ಕಹಳೆ ಜಾಂಗಟೆ ಕಣ್ಣೀರು ಸುರಿಸಿ ಪಾಚಿಗಟ್ಟಿದೆ ನಿನ್ನದು ಕಠೋರ ಮೌನ.

ಮಾದಕ ನೀಳಕೂದಲಗಳ ಪಿಸುಗುಟ್ಟುವ ಮಾತಿಗೆ
ಹಾಡಹಗಲೆ ಎದೆಸೆಟೆಸಿ ಬಳ್ಳಿಯಲ್ಲಿ ಪಾರಿಜಾತ ಹೂಗಟ್ಟಿದೆ ನಿನ್ನದು ಕಠೋರ ಮೌನ.

ಹುಚ್ಚಲೌಡಿ ‘ಮಿತ್ರಾ’ ಅವಳನ್ನೇಕೆ ನಿಂದಿಸುವೆ ಸುಖಾಸುಮ್ಮನೆ
ಕಣ್ಣುತೆರೆದು ನೋಡು ನಿನ್ನ ಮನಸು ನೀತಿಗೆಟ್ಟಿದೆ ನಿನ್ನದು ಕಠೋರ ಮೌನ.

‍ಲೇಖಕರು admin

24 July, 2016

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading