ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಆರ್ ಪೂರ್ಣಿಮಾಗೆ ಲೇಖಕಿಯರ ಸಂಘದ ಪ್ರಶಸ್ತಿ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ಟಿ. ಎಸ್. ಆರ್. ಪ್ರಶಸ್ತಿ ಪುರಸ್ಕೃತರಾದ ನಾಗಮಣಿ ಎಸ್.ರಾವ್ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತೆ ಡಾ. ಆರ್. ಪೂರ್ಣಿಮಾ ಅವರನ್ನು ಆಯ್ಕೆಮಾಡಲಾಗಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ.ಎಚ್.ಎಲ್.ಪುಷ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಕಾಶವಾಣಿಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ್ದ ನಾಗಮಣಿ ಎಸ್.ರಾವ್.ಅವರು ತಮ್ಮ ಹೆಸರಿನ ದತ್ತಿನಿಧಿಯನ್ನು ಕರ್ನಾಟಕ ಲೇಖಕಿಯರ ಸಂಘದಲ್ಲಿ ಸ್ಥಾಪಿಸಿದ್ದು, ಇದು ಈ ವರ್ಷದಿಂದ ಪ್ರಾರಂಭವಾಗಿದ್ದು ಮೊದಲನೇ ಪ್ರಶಸ್ತಿಗೆ ಆರ್.ಪೂರ್ಣಿಮಾ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಸಮಾರಂಭವು ಜುಲೈ 8 ರಂದು ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಜರುಗಲಿದ್ದು, ಹಿರಿಯ ಸಾಹಿತಿ ನಾಡೋಜ. ಪ್ರೊ.ಕಮಲಾ ಹಂಪನಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕನ್ನಡ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯವಾಗಿ ಕೆಲಸ ಮಾಡಿರುವ ಪತ್ರಕರ್ತೆಯೊಬ್ಬರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಬೇಕು ಮತ್ತು ಅವರು ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರಬೇಕು ಎಂಬುದು ಅವರ ಆಶಯವಾಗಿತ್ತು. ಈ ಆಶಯದಂತೆ ಕನ್ನಡ ಪತ್ರಿಕೋದ್ಯಮದಲ್ಲಿ ಸುಮಾರು 40 ವರ್ಷಗಳಿಗೂ ಅಧಿಕ ಕಾಲ ಕಾರ್ಯನಿರ್ವಹಿಸಿದ್ದ ಹಿರಿಯ ಪತ್ರಕರ್ತೆ ಡಾ. ಆರ್. ಪೂರ್ಣಿಮಾ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ.ಎಚ್.ಎಲ್.ಪುಷ್ಪಾ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ನಾಗಮಣಿ ಎಸ್.ರಾವ್, ಸಂಘದ ಕಾರ್ಯದರ್ಶಿಗಳಾದ ಭಾರತಿ ಹೆಗಡೆ, ಖಜಾಂಚಿ ಮಂಜುಳಾ ಶಿವಾನಂದ ಉಪಸ್ಥಿತರಿದ್ದರು.

‍ಲೇಖಕರು avadhi

4 July, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading