ಇಳಿದು ಬಾ ತಾಯೆ, ಇಳಿದು ಬಾ…..

ಇಳಿದು ಬಾ ತಾಯೆ, ಇಳಿದು ಬಾ ಬೇ೦ದ್ರೆಯವರ ಅಪರೂಪದ ದೃಶ್ಯ ಕಾವ್ಯಗಳಲ್ಲಿ ಒ೦ದು.. ಕಣ್ಮುಚ್ಚಿ ಹಾಡು ಕೇಳಿಸಿಕೊ೦ಡರೂ, ದನಿ ಬಿಚ್ಚಿ ಹಾಡಿದರೂ ಗ೦ಗೆಯ ಧರತಿ, ಹರಿವ ಲಯ, ಬ೦ಡೆ-ಬಯಲನು ನುಗ್ಗಿ ನಡೆವ ರಭಸ ಕಣ್ಣಿಗೆ ಕಟ್ಟುತ್ತದೆ…. ಅದನ್ನೂ ಅಷ್ಟೇ ಸೊಗಸಾಗಿ ಕಟ್ಟಿಕೊಟ್ಟಿದ್ದು ಕಾಳಿ೦ಗರಾಯರ ದನಿ.. ಈ ಹಾಡು ನಿಮಗಾಗಿ.. ಹಾಡಿಗಾಗಿ ಇಲ್ಲಿ ಕ್ಲಿಕ್ಕಿಸಿ :

kBvcPzlnP3Q

ಇಳಿದು ಬಾ ತಾಯಿ ಇಳಿದು ಬಾ ಹರನ ಜಡೆಯಿಂದ ಹರಿಯ ಅಡಿಯಿಂದ ಋಷಿಯ ತೊಡೆಯಿಂದ ನುಸುಳಿ ಬಾ ದೇವದೇವರನು ತಣಿಸಿ ಬಾ ದಿಗ್ದಿಗಂತದಲಿ ಹಣಿಸಿ ಬಾ ಚರಾಚರಗಳಿಗೆ ಉಣಿಸಿ ಬಾ ಇಳಿದು ಬಾ ತಾಯಿ ಇಳಿದು ಬಾ. ನಿನಗೆ ಪೊಡಮಡುವೆ ನಿನ್ನನುಡುತೊಡುವೆ ಏಕೆ ಎಡೆತಡೆವೆ ಸುರಿದು ಬಾ ಸ್ವರ್ಗ ತೊರೆದು ಬಾ ಬಯಲ ಜರೆದು ಬಾ ನೆಲದಿ ಹರಿದು ಬಾ ಬಾರೆ ಬಾ ತಾಯಿ ಇಳಿದು ಬಾ ಇಳಿದು ಬಾ ತಾಯಿ ಇಳಿದು ಬಾ. ನನ್ನ ತಲೆಯೊಳಗೆ ನನ್ನ ಬೆಂಬಳಿಗೆ ನನ್ನ ಒಳಕೆಳಗೆ ನುಗ್ಗಿ ಬಾ ಕಣ್ಣ ಕಣ ತೊಳಿಸಿ ಉಸಿರ ಎಳೆ ಎಳಸಿ ನುಡಿಯ ಸಸಿ ಮೊಳೆಸಿ ಹಿಗ್ಗಿ ಬಾ ಎದೆಯ ನೆಲೆಯಲ್ಲಿ ನೆಲಿಸಿ ಬಾ ಜೀವ ಜಲದಲ್ಲಿ ಚಲಿಸಿ ಬಾ ಮೂಲ ಹೊಲದಲ್ಲಿ ನೆಲಿಸಿ ಬಾ ಇಳಿದು ಬಾ ತಾಯಿ ಇಳಿದು ಬಾ. ಕಂಚು ಮಿಂಚಾಗಿ ತೆರಳಿ ಬಾ ನೀರು ನೀರಾಗಿ ಉರುಳಿ ಬಾ ಮತ್ತೆ ಹೊಡೆಮರಳಿ ಹೊರಳಿ ಬಾ ದಯೆಯಿರದ ದೀನ ಹರೆಯಳಿದ ಹೀನ ನೀರಿರದ ಮೀನ ಕರೆಕರೆವ ಬಾ ಇಳಿದು ಬಾ ತಾಯಿ ಇಳಿದು ಬಾ. ಕರು ಕಂಡ ಕರುಳೆ ಮನ ಉಂಡ ಮರುಳೆ ಉದ್ದಂಡ ಅರುಳೆ ಸುಳಿಸುಳಿದು ಬಾ ಶಿವಶುಭ್ರ ಕರುಣೆ ಅತಿಕಿಂಚಿದರುಣೆ ವಾತ್ಸಲ್ಯವರಣೆ ಇಳಿ ಇಳಿದು ಬಾ ಇಳಿದು ಬಾ ತಾಯಿ ಇಳಿದು ಬಾ. ಕೊಳೆಯ ತೊಳೆವವರು ಇಲ್ಲ ಬಾ ಬೇರೆ ಶಕ್ತಿಗಳು ಹೊಲ್ಲ ಬಾ ಹೀಗೆ ಮಾಡದಿರು , ಅಲ್ಲ ಬಾ ನಾಡಿ ನಾಡಿಯನು ತುತ್ತ ಬಾ ನಮ್ಮ ನಾಡನ್ನೆ ಸುತ್ತ ಬಾ ಸತ್ತ ಜನರನ್ನು ಎತ್ತ ಬಾ ಸುರಸ್ವಪ್ನವಿದ್ದ ಪ್ರತಿಬಿಂಬ ಬಿದ್ದ ಉದ್ಬುದ್ಧ ಶುದ್ಧ ನೀರೇ ಎಚ್ಚತ್ತು ಎದ್ದ ಆಕಾಶದುದ್ದ ಧರೆಗಿಳಿಯಲಿದ್ದ ಧೀರೇ ಸಿರಿವಾರಿಜಾತ ವರಪಾರಿಜಾತ ತಾರಾ-ಕುಸುಮದಿಂದೆ. ವೃಂದಾರವಂದ್ಯೆ ಮಂದಾರಗಂಧೆ ನೀನೆ ತಾಯಿ ತಂದೆ ರಸಪೂರಜನ್ಯೆ ನೀನಲ್ಲ ಅನ್ಯೆ ಸಚ್ಚಿದಾನಂದ ಕನ್ಯೆ ಬಂದಾರ ಬಾರೆ, ಒಂದಾರೆ ಸಾರೆ ಕಣ್ಧಾರೆ ತಡೆವರೇನೇ? ಅವತಾರವೆಂದೆ ಎಂದಾರೆ ತಾಯಿ, ಈ ಅಧ:ಪಾತವನ್ನೇ ಹರಕೆ ಸಂದಂತೆ ಮಮತೆ ಮಿಂದಂತೆ ತುಂಬಿ ಬಂದಂತೆ ದುಮ್‌ದುಮ್ ಎಂದಂತೆ ದುಡುಕಿ ಬಾ ನಿನ್ನ ಕಂದನ್ನ ಹುಡುಕಿ ಬಾ ಹುಡುಕಿ ಬಾ ತಾಯಿ ದುಡುಕಿ ಬಾ. ಹರಣ ಹೊಸದಾಗೆ ಹೊಳೆದು ಬಾ ಬಾಳು ಬೆಳಕಾಗೆ ಬೆಳೆದು ಬಾ ಮೈ ತಳೆದು ಬಾ ಕೈ ತೊಳೆದು ಬಾ ಇಳೆಗಿಳಿದು ಬಾ ತಾಯೀ ಇಳಿದು ಬಾ ತಾಯಿ ಇಳಿದು ಬಾ. ಶಂಭು-ಶಿವ-ಹರನ ಚಿತ್ತೆ ಬಾ ದತ್ತ ನರಹರಿಯ ಮುತ್ತೆ ಬಾ ಅಂಬಿಕಾತನಯದತ್ತನತ್ತೆ ಬಾ ಇಳಿದು ಬಾ ತಾಯಿ ಇಳಿದು ಬಾ.]]>

‍ಲೇಖಕರು G

February 20, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: