2026ರ ಸಾಲಿನ ಈ ಹೊತ್ತಿಗೆ ಪ್ರಶಸ್ತಿಗಳಿಗಾಗಿ ಹಸ್ತಪ್ರತಿ ಆಹ್ವಾನ
‘ಈ ಹೊತ್ತಿಗೆ’ಯು ಕನ್ನಡದ ಅಪ್ರಕಟಿತ ಕಥಾ ಸಂಕಲನಗಳನ್ನು ಮತ್ತು ಅಪ್ರಕಟಿತ ಕವನ ಸಂಕಲನಗಳನ್ನು ‘ಈ ಹೊತ್ತಿಗೆ ಪ್ರಶಸ್ತಿ’ಗಾಗಿ ಆಹ್ವಾನಿಸುತ್ತಿದೆ.
ವಿಜೇತ ಕಥಾಸಂಕಲನ ಮತ್ತು ಕವನ ಸಂಕಲನಕ್ಕೆ ತಲಾ 10,000/- (ಹತ್ತು ಸಾವಿರ) ರೂಪಾಯಿ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕ ನೀಡಲಾಗುತ್ತದೆ.
ನಿಯಮಗಳು
- ಅಪ್ರಕಟಿತ ಸಂಕಲನದಲ್ಲಿರುವ ಕಥೆಗಳು/ಕವನಗಳು ಸ್ವತಂತ್ರವಾಗಿರಬೇಕು. ಸಂಕಲನದಲ್ಲಿ ಅನುವಾದಿತ ಕಥೆ/ಕವನಗಳು ಕಡ್ಡಾಯವಾಗಿ ಇರಕೂಡದು.
- ಕಥಾಸಂಕಲನವು 8ರಿಂದ 10 ಕಥೆಗಳನ್ನು ಒಳಗೊಂಡಿರಬೇಕು. ಚುಟುಕು ಕಥೆಗಳಿಗೆ ಅವಕಾಶವಿಲ್ಲ.
- ಕವನ ಸಂಕಲನವಾದರೆ 35-40 ಕವನಗಳನ್ನು ಒಳಗೊಂಡಿರಬೇಕು. ಚುಟುಕುಗಳನ್ನು ಕಳಿಸುವಂತಿಲ್ಲ.
- ಸಂಕಲನದಲ್ಲಿ ಕಡ್ಡಾಯವಾಗಿ ಸಂಕಲನದ ಶೀರ್ಷಿಕೆ ಮತ್ತು ಪರಿವಿಡಿ ಇರಬೇಕು. ಸಂಕಲನದ ಯಾವುದೇ ಪುಟಗಳಲ್ಲಿ ಲೇಖಕರ ಹೆಸರು ಇರಕೂಡದು.
- ಡಿಟಿಪಿ ಮಾಡಿಸಿ, ಬೈಂಡ್ ಮಾಡಿಸಿದ ಅಪ್ರಕಟಿತ ಸಂಕಲನದ ಮೂರು ಪ್ರತಿಗಳನ್ನು ಈ ಹೊತ್ತಿಗೆಯ ಅಂಚೆ ವಿಳಾಸಕ್ಕೆ ಕಳುಹಿಸಿಕೊಡಬೇಕು.
- ಲೇಖಕರು ಪ್ರತ್ಯೇಕ ಹಾಳೆಯಲ್ಲಿ ತಮ್ಮ ಹೆಸರು, ಸಂಕಲನದ ಹೆಸರು, ಸಂಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಬರೆದಿರಬೇಕು.
- ಪ್ರಶಸ್ತಿ ಘೋಷಣೆಯಾದ 30 ದಿನಗಳಲ್ಲಿ ಪ್ರಶಸ್ತಿ ಪಡೆದ ಸಂಕಲನವು ಮುದ್ರಣಗೊಳ್ಳಬೇಕು. ಕೃತಿ ಮುದ್ರಣಗೊಂಡರೆ ಮಾತ್ರ ಘೋಷಿತ ಬಹುಮಾನದ ಮೊತ್ತ ಹಾಗು ಪ್ರಶಸ್ತಿ ಫಲಕವು ಈ ಹೊತ್ತಿಗೆಯ ಹೊನಲು ಸಮಾರಂಭದಲ್ಲಿ ಸಲ್ಲುತ್ತದೆ.
- ಪ್ರಶಸ್ತಿ ಪಡೆದ ಕೃತಿಯನ್ನು ಮುದ್ರಿಸುವಾಗ ಮುಖಪುಟ ಹಾಗು ಪುಸ್ತಕದ ಒಳ ಪುಟದಲ್ಲಿ ‘ಈ ಹೊತ್ತಿಗೆ (ಕಥಾ/ಕಾವ್ಯ) ಪ್ರಶಸ್ತಿ ವಿಜೇತ ಕೃತಿ’ ಎಂದು ಮುದ್ರಿಸಿರಬೇಕು.
- ಹಸ್ತಪ್ರತಿಗಳನ್ನು ಮರಳಿಸಲಾಗುವುದಿಲ್ಲ.
ಅಪ್ರಕಟಿತ ಕಥಾಸಂಕಲನ, ಕವನ ಸಂಕಲನ ನಮಗೆ ತಲುಪಲು ಕೊನೆಯ ದಿನಾಂಕ: 20 ನವೆಂಬರ್ 2025.
ಈ ಹೊತ್ತಿಗೆಯ ತೀರ್ಮಾನವೇ ಅಂತಿಮ.
2026ರ ಮಾರ್ಚಲ್ಲಿ ನಡೆಯುವ ಈ ಹೊತ್ತಿಗೆಯ ಹೊನಲು ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿಯನ್ನು ನೀಡಲಾಗುವುದು.
ಹಸ್ತಪ್ರತಿ ಕಳುಹಿಸಲು ವಿಳಾಸ :
ಈ ಹೊತ್ತಿಗೆ,
#65, ಮುಗುಳ್ನಗೆ, 3ನೇ ಅಡ್ಡರಸ್ತೆ,
ಪಿ.ಎನ್.ಬಿ. ನಗರ, ಕೋಣನಕುಂಟೆ,
ಬೆಂಗಳೂರು – 560062
ಸಂಪರ್ಕ ಸಂಖ್ಯೆ: 9611782621






0 Comments