ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕನಸ ಬೇಯಿಸಲು..

-ಸುಶ್ರುತ ದೊಡ್ಡೇರಿ

ಮೌನ ಗಾಳ

ತಳ್ಳುಗಾಡಿಯ ಮೇಲೊಂದು ಸಿಲಾವರದ ಪಾತ್ರೆ- ಬೇಯಿಸುತ್ತಿದ್ದಾನೆ ಲುಂಗಿಯುಟ್ಟವ ಬಿಸಿನೀರಲ್ಲಿ ರಾಶಿ ರಾಶಿ ಕಡಲೇಕಾಯಿ ಹಬೆ ಹಬೆ ಉದ್ದ ಹಿಡಿದರೆ ಎಂಟು; ಜೋತಾಡಿಸಿದರೆ ಗಂಟು ಒಡೆದರೆ ಎರಡು ಪುಟ್ಟ ಶಿಶುಗಳು ಗರ್ಭದಲ್ಲಿ ಕೆಲವೊಮ್ಮೆ, ಅದೃಷ್ಟ ಜೋರಿದ್ದರೆ, ಮೂರು.ಒಂದು ದಿನ, ಯಾರೋ ಹತ್ತಿರ ಬಂದು ಕೂತುಬಿಡುತ್ತಾರೆ. ಕೈ ಹಿಡಿದು ಕತೆ ಹೇಳುತ್ತಾರೆ. ಅಪ್ಪ-ಅಮ್ಮ ತುಂಬಾ ಒಳ್ಳೆಯವರು. ದೊಡ್ಡಪ್ಪ ಚಿಕ್ಕವನಿದ್ದಾಗಲೇ ಮನೆಯಿಂದ ಓಡಿಹೋಗಿದ್ದಂತೆ. ಅತ್ತೆ ಇದ್ದಾಳಲ್ಲ -ಅದೇ, ಅಪ್ಪನ ತಂಗಿ- ಅವಳಿಗೆ ಕಿವಿ ಸ್ವಲ್ಪ ಮಂದ ಆದರೆ ಸನ್ನೆಯಲ್ಲೇ ಎಲ್ಲಾ ಅರ್ಥ ಮಾಡಿಕೊಳ್ಳುತಾಳೆ ಮಾವನಿಗೆ ಅವಳ ಮೇಲೆ ಯಾವಾಗಲೂ ಸಿಡುಕು ಗೊತ್ತಾ? ನನ್ನ ತಂಗಿಗೆ ಗಾಜಿನ ಹೂಜಿಯಲ್ಲಿ ಮೀನು ಸಾಕಬೇಕು ಅಂತ ಆಸೆಯಿತ್ತು ಇಳಿದು ನೋಡಿದರೆ ಕಣ್ಣಾಳ, ಅದೆಷ್ಟೊಂದು ಕತೆಗಳು ನಿನ್ನಲ್ಲಿ.. ಇಡಲಾಗದೇ ಈ ಪುರಾಣ, ಇತಿಹಾಸ, ಭೂತ- ವನ್ನೆಲ್ಲ ಕಟ್ಟಿ ಆಚೆ? ಅಳಿಸಿ ಉಳಿದೆಲ್ಲ ಚಿತ್ರ, ಬಿಡಲಾಗದೆ ಬರೀ ನಾವಿಬ್ಬರ ಮೌನಭಿತ್ತಿಯಲ್ಲಿ? ಕಾಯುತ್ತಿದ್ದಾನೆ ತಳ್ಳುಗಾಡಿಯಲ್ಲಿ ಕಡಲೆಕಾಯಿಯವ.. ಒಂದಷ್ಟು ಬೇಯಿಸದ ಕಾಯಿಗಳೂ ಇವೆಯಂತೆ ಅವನ ಬಳಿ ಕೇಳಿದರೆ, ಪುಟ್ಟ ಪೊಟ್ಟಣದಲ್ಲಿ ಕಟ್ಟಿಕೊಟ್ಟಾನು ಬಿಡಾರದಲ್ಲಿ ಒಲೆಯಿದೆ; ಸೂರಂಚಿಂದ ಸುರಿವ ಮಳೆಯಿದೆ ಹೊಸನೀರಿನಲ್ಲಿ ಬೇಯಿಸೋಣ ಕನಸುಗಳನ್ನು. ಹಾರೈಸೋಣ ಸಾಕು- ಒಡಲ ಹೂರಣ ಕಹಿಯಿರದಿರಲೆಂದು.
]]>

‍ಲೇಖಕರು G

10 December, 2010

1 Comment

  1. savitri

    Nice poem Sir.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading