'ಕನ್ನಡಿ ಬೇಕೆಂದರೆ, ಕಂದ ನೀನೇ ಕನ್ನಡಿಯಾಗಬೇಕು’ – ರೂಪಾ ಹಾಸನ

ಆ ಕನ್ನಡಿ ಬೇಕೆಂದರೆ….

ರೂಪ ಹಾಸನ

1

ನನಗಾಗಿ ನನ್ನದೇ ಒಂದು
ಕನ್ನಡಿ ಬೇಕೆಂಬ
ಗುಪ್ತ ಬಯಕೆಗೆ ಬಿದ್ದಿರುವೆ ಗುರುವೆ
 
ಕನ್ನಡಿಯೇ ಇಲ್ಲವೆಂದಲ್ಲ
ಊರ ತುಂಬಾ ಕನ್ನಡಿ ನೆಟ್ಟಿದ್ದಾರೆ
ಅವರಿಗಿಷ್ಟದ ಪಾದರಸ
ಇವರಿಗಿಷ್ಟದ ಮಾಪಕ
ಅವರಿಗೆ ಬೇಕೆನಿಸಿದಷ್ಟು ಹೊತ್ತು
ಕಾಯಿಸಿ ಎರಕ ಹೊಯ್ದು
ಕನ್ನಡಿ ಮಾಡಿ
ಕುಳ್ಳಿರಿಸಿದ್ದಾರೆ ಕಟ್ಟು ಹಾಕಿ.
ಬಣ್ಣಬಣ್ಣದ ಕನ್ನಡಿ
ಪ್ರತಿಫಲಿಸುವುದೇ ಇಲ್ಲ
ಕಟ್ಟು ಕನ್ನಡಿ!
 
ಆ ಬಣ್ಣದ ಕನ್ನಡಿಯಲ್ಲೇ
ನಾವೂ ನೋಡಿಕೊಳಬೇಕೆಂದು
ಅದರಲ್ಲಿ ನೋಡಿಕೊಂಡರೆ
ಇದೇನು ಕನ್ನಡಿಯೋ
ಅವರದೇ ಭಾವಚಿತ್ರವೋ?
ಕಣ್ಕಟ್ಟೋ-ಬೆರಗು.
 
ನನ್ನದೇ ಕನ್ನಡಿಯಿದ್ದರೆ
ಇಡಿಯಾಗಿ ಬಿಡಿಯಾಗಿ
ನಾನು, ನನ್ನ ರೆಕ್ಕೆ ಪುಕ್ಕ
ಒಳಗಿನ ಸೊಕ್ಕು
ಆಳದ ಉಕ್ಕು
ಮುರುಕು ಮುಳ್ಳು
ಅರಳು ಮುದುಡು
ಇಂಚಿಂಚೂ ನೋಡಿಕೊಳುವ
ಹಂಬಲದಲಿ ಕಾದಿದ್ದೇನೆ
ದಾರಿ ತೋರು ಗುರುವೇ.

2

ನಿನ್ನ ತೋರುವ
ಸಿದ್ಧ ಕನ್ನಡಿ
ಎಲ್ಲಿಯೂ ಎಂದಿಗೂ
ಬಿಕರಿಗೆ ಸಿಕ್ಕುವುದಿಲ್ಲ ಕಂದ
ಕನ್ನಡಿ ಬೇಕೇಬೇಕೆಂದರೆ
ಇರುವುದೊಂದೇ ದಾರಿ
ತಕ್ಕಡಿಯಲಿ ಪ್ರತಿಕ್ಷಣ ನಿನ್ನನಿಟ್ಟು
ತೂಗಿ ತೂಗಿ ಅಳತೆ ಮಾಡಿ
ಹಿಂಜಿ ಹಿಂಜಿ ಕಣ ಕಣಗಳಿಗೂ
ಪಾರದರ್ಶಕವಾಗಿಸುವ ಲೇಪ ಬಳಿದು
ತಿಕ್ಕಿ ತೀಡಿ ಉಜ್ಜಿ ಉಜ್ಜಿ
ಆ ನೋವಿಗೆ ಕಾವಿಗೆ
ನಿನ್ನೊಳಗಿನದೆಲ್ಲ ಘನವನೂ
ಪ್ರತಿಫಲನ ಮೂಡುವವರೆಗೆ
ಕರಗಿಸಿ ಕರಗಿಸಿ ತಿಳಿಯಾಗಿಸಬೇಕು.
ಕಂದ, ನೀನೇ ಕನ್ನಡಿಯಾಗಬೇಕು!
 

‍ಲೇಖಕರು G

December 3, 2014

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

10 ಪ್ರತಿಕ್ರಿಯೆಗಳು

  1. Anonymous

    NAVU KANNADIGAAGI HIGE HAMBALISBEKU…… VERY MEANINGFULL POEM MADAM!THANQ
    ANU

    ಪ್ರತಿಕ್ರಿಯೆ
  2. AHANI

    kannadi bekendare….. nine kannadiyagabeku! wonderful! but it is very difficult to become a KANNADI as you said madam!
    Ahani

    ಪ್ರತಿಕ್ರಿಯೆ
  3. ಅಕ್ಕಿಮಂಗಲ ಮಂಜುನಾಥ

    ಪದ್ಯ ಓದುತ್ತಾ ಓದುತ್ತ ನನ್ನನ್ನು ನಾನೇ ನೋಡಿಕೊಂಡೆ.ಪದ್ಯ ತುಂಬಾ ಚೆನ್ನಾಗಿದೆ.

    ಪ್ರತಿಕ್ರಿಯೆ
  4. ವಿಠ್ಠಲ ದಳವಾಯಿ

    ಻ ಅಕ್ಕ, ಕಂದ ನೀನೇ ಕನ್ನಡಿಯಾಗಬೇಕು, ಸಾಲಿನಲ್ಲಿ ಹೊಸಬೆಳಗು ಮೂಡಿತು. ಧನ್ಯವಾದಗಳು.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: