ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕಲ್ಲೆ ಶಿವೋತ್ತಮ ರಾವ್ ಅವರಿಗೆ ಕೆಯುಡಬ್ಲ್ಯೂಜೆ ಸನ್ಮಾನ ಫೋಟೋ ಆಲ್ಬಂ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ಅಮೃತ ಸ್ವಾತಂತ್ರ್ಯದ ಅಂಗವಾಗಿ ಪತ್ರಿಕೋದ್ಯಮದ ಹಿರಿಯರಿಗೆ ‘ಮನೆಯಂಗಳದಲ್ಲಿ ಮನದುಂಬಿ ನಮನ’ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಸುದ್ದಿಮನೆಯಲ್ಲಿ ಕೆಲಸ ಮಾಡಿದ ಅತ್ಯಂತ ಹಿರಿಯ ಪತ್ರಕರ್ತರಾದ ಕಲ್ಲೆ ಶಿವೋತ್ತಮ ರಾವ್ ಅವರಿಗೆ ಅವರ ಮನೆ ಅಂಗಳದಲ್ಲಿ ಗೌರವಿಸಲಾಯಿತು.

ಈ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಬೆಂಗಳೂರಿನಲ್ಲಿ 14ರಂದು ಭಾನುವಾರ ಚಾಲನೆ ನೀಡಲಾಯಿತು.

ವಿಶಾಲ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಜನಪ್ರಗತಿ ಪತ್ರಿಕೆಯ ಸಂಪಾದಕರಾಗಿದ್ದ ಹಿರಿಯ ಚೇತನ ಕಲ್ಲೆ ಶಿವೋತ್ತಮ ರಾವ್ ಅವರಿಗೆ ತೊಂಬತ್ತರಡು (92) ವಸಂತಗಳು ತುಂಬಿದ ಸಂಭ್ರಮ. ಈ ಹೊತ್ತಿನಲ್ಲಿ
ಅವರಿಗೆ ಕೆಯುಡಬ್ಲ್ಯೂಜೆ ವತಿಯಿಂದ ಗೌರವ ಸಮರ್ಪಣೆ ಮಾಡಲಾಯಿತು.

ಅಭಿಯಾನ:
ಆಯಾ ಜಿಲ್ಲೆ ಮತ್ತು ತಾಲ್ಲೂಕು ಪತ್ರಕರ್ತರ ಸಂಘಗಳು ಇದೇ ಮಾದರಿಯಲ್ಲಿ ಹಿರಿಯ ಪತ್ರಕರ್ತರನ್ನು ಭೇಟಿ ಮಾಡಿ ಗೌರವ ಸಲ್ಲಿಸುವ ಅಭಿಯಾನ ಮಾಸಾಂತ್ಯದ ತನಕ ನಡೆಯಲಿದೆ ಎಂದು ತಗಡೂರು ತಿಳಿಸಿದ್ದಾರೆ.

‍ಲೇಖಕರು Admin

14 August, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading