ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕುಂದಾಪುರದಲ್ಲಿ ಕಾರ್ಟೂನ್ ಹಬ್ಬ ಉದ್ಘಾಟನೆಯ ಫೋಟೋ ಆಲ್ಬಂ…

ಅಂತಾರಾಷ್ಟ್ರೀಯ ಮಟ್ಟದ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ನೇತೃತ್ವದ ಕಾರ್ಟೂನ್ ಬಳಗದ ವತಿಯಿಂದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಕಾರ್ಟೂನ್ ಹಬ್ಬ-2022 ವನ್ನು ಕ್ಯಾರಿಕೇಚರ್ ಬಿಡಿಸುವ ಮೂಲಕ ಹೊಂಬಾಳೆ ಫಿಲ್ಮ್‌ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಉದ್ಘಾಟಿಸಿದರು.

ವ್ಯಂಗ್ಯಚಿತ್ರಗಾರ ಜೇಮ್ಸ್ ವಾಜ್ ಸತೀಶ್ ಆಚಾರ್ಯ ಅವರ ‘ಗೋ ಕೊರೋನಾ ಗೋ’ ಪುಸ್ತಕದ 2ನೇ ಆವೃತ್ತಿ ಬಿಡುಗಡೆಗೊಳಿಸಿದರು.

ಬರಹಗಾರ ಶಂಕರ ಕೆಂಚನೂರು, ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎಂ.ದಿನೇಶ್ ಹೆಗ್ಡೆ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ವಿನಯ್ ಎ.ಪಾಯಸ್, ಚಲನಚಿತ್ರ ನಿರ್ದೇಶಕ ಯಾಕೂಬ್ ಖಾದರ್ ಗುಲ್ವಾಡಿ, ವ್ಯಂಗ್ಯ ಚಿತ್ರಕಾರರಾದ ರಾಮಕೃಷ್ಣ ಹೇರ್ಳೆ, ಚಂದ್ರಶೇಖರ ಶೆಟ್ಟಿ, ಕೇಶವ್ ಸಸಿಹಿತ್ಲು ಉಪಸ್ಥಿತರಿದ್ದರು.

ಕಾರ್ಟೂನ್ ಬಳಗದ ಸತೀಶ್ ಆಚಾರ್ಯ ಸ್ವಾಗತಿಸಿದರು. ಉಪನ್ಯಾಸಕಿ ಪ್ರೀಯಾಂಕ್ ಜೋಸೆಫ್ ನಿರೂಪಿಸಿದರು.

‍ಲೇಖಕರು Admin

24 November, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading