ಕೃಷ್ಣಮೂರ್ತಿ ಹನೂರು, ಜನಾರ್ಧನ ಭಟ್ ಅವರಿಗೆ ವ್ಯಾಸರಾಯ ಬಲ್ಲಾಳ ಪ್ರಶಸ್ತಿ


ಕನ್ನಡದ ಹೆಸರಾಂತ ಸಾಹಿತಿ ವ್ಯಾಸರಾಯ ಬಲ್ಲಾಳ ಅವರ ಹೆಸರಿನಲ್ಲಿ ಪ್ರತಿವರ್ಷ ಕೊಡುವಂತೆ ಪ್ರಶಸ್ತಿಯನ್ನು ಸ್ಥಾಪಿಸಲಾಗಿದ್ದು ಈ ಚೊಚ್ಚಲ ಪ್ರಶಸ್ತಿಗೆ ಖ್ಯಾತ ಕತೆಗಾರ, ಸಾಹಿತಿ ಪ್ರೊ.ಕೃಷ್ಣಮೂರ್ತಿ ಹನೂರು ಹಾಗೂ ಕಾದಂಬರಿ ಪ್ರಶಸ್ತಿಗೆ ಹಿರಿಯ ವಿಮರ್ಶಕ, ಸಾಹಿತಿ, ಕಾದಂಬರಿಕಾರರಾಗಿರುವ ಡಾ.ಜನಾರ್ದನ ಭಟ್ ಅವರು ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬಲ್ಲಾಳರ ಜನ್ಮದಿನವಾದ ಡಿಸೆಂಬರ್ ೧ರಂದು ಮುಂಬಯಿ ವಿಶ್ವವಿದ್ಯಾಲಯದಲ್ಲಿ ಪ್ರದಾನ ಮಾಡಲಾಗುವುದು ಎಂದು ವ್ಯಾಸರಾಯ ಬಲ್ಲಾಳ ಪ್ರತಿಷ್ಠಾನದ ಕಾರ್ಯದರ್ಶಿ ಅರವಿಂದ ಬಲ್ಲಾಳ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಜಿ.ಎನ್.ಉಪಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೊ. ಕೃಷ್ಣಮೂರ್ತಿ ಹನೂರು:- ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾಗಿ, ಸಂಶೋಧಕರಾಗಿ, ಜಾನಪದ ತಜ್ಞರಾಗಿ ಹೆಸರು ಮಾಡಿದವರು. ವಿಮರ್ಶೆ, ಕತೆ, ಕಾದಂಬರಿ ಅವರ ಆಸಕ್ತಿಯ ಕ್ಷೇತ್ರಗಳು. ‘ಅಜ್ಞಾತನೊಬ್ಬನ ಆತ್ಮಚರಿತೆ’್ರ ಮತ್ತು ಕಾಲಯಾತ್ರೆ ಅವರ ಬಹುಪ್ರಸಿದ್ಧ ಕಾದಂಬರಿಗಳು. ಕತ್ತಲಲ್ಲಿ ಕಂಡ ಮುಖ, ದೇವ ಮೂಲೆಯ ಮಳೆ, ಕಳೆದ ಮಂಗಳವಾರ ಮುಸ್ಸಂಜೆ ಮೊದಲಾದ ಕತಾಸಂಕಲನಗಳು ಪ್ರಕಟಗೊಂಡಿವೆ. ಮ್ಯಾಸ ಬೇಡರು ಬುಡಕಟ್ಟು ಅಧ್ಯಯನ ಅವರ ಮಹತ್ವದ ಶೋಧ ಕೃತಿ. ಸಾಹಿತ್ಯ ಅಕಾಡೆಮಿ, ಸಾಹಿತ್ಯ ಪರಿಷತ್ತು ಹೀಗೆ ಅನೇಕ ಪ್ರಶಸ್ತಿ ಪುರಸ್ಕಾರಗಳಿಗೂ ಅವರು ಪಾತ್ರರಾಗಿದ್ದಾರೆ. ಇದೀಗ ಕನ್ನಡ ಕಥಾ ಕ್ಷೇತ್ರಕ್ಕೆ ಪ್ರೊ.ಹನೂರು ಅವರು ನೀಡಿದ ಕೊಡುಗೆಯನ್ನು ಗಮನಿಸಿ ವ್ಯಾಸರಾಯ ಬಲ್ಲಾಳ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಾ. ಬಿ. ಜನಾರ್ದನ ಭಟ್ :- ಡಾ. ಬಿ. ಜನಾರ್ದನ ಭಟ್ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ. ಎ. ಪದವಿ ಪಡೆದು ಸರಕಾರಿ ಪ.ಪೂ. ಕಾಲೇಜು, ಬೆಳ್ಮಣ್ಣು ಇಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಹೈದ್ರಾಬಾದಿನ ಸಿ.ಐ.ಇ.ಎಫ್.ಎಲ್.ನಲ್ಲಿ ಪಿ.ಜಿ.ಡಿ.ಟಿ.ಇ. ಪದವಿ, ಮೈಸೂರು ಮುಕ್ತ ವಿಶ್ವವಿದ್ಯಾಲಯದ ಕನ್ನಡ ಎಂ.ಎ. ಪದವಿ, ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್. ಡಿ. ಪಡೆದಿದ್ದಾರೆ. ‘ಉತ್ತರಾಧಿಕಾರ’ (ವರ್ಧಮಾನ ಪ್ರಶಸ್ತಿ), ‘ಹಸ್ತಾಂತರ’ (ಕನ್ನಡ ಸಾಹಿತ್ಯ ಪರಿಷತ್ತಿನ ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ), ಮತ್ತು ‘ಅನಿಕೇತನ’ ಕಾದಂಬರಿ ತ್ರಿವಳಿ, ‘ಮೂರು ಹೆಜ್ಜೆ ಭೂಮಿ’ (ಕನ್ನಡಸಾಹಿತ್ಯ ಪರಿಷತ್ತಿನ ಭಾರತೀಸುತ ದತ್ತಿ ಪ್ರಶಸ್ತಿ), ‘ಕಲ್ಲು ಕಂಬವೇರಿದ ಹುಂಬ’ (ತರಂಗ ಮಿನಿ ಕಾದಂಬರಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ), ‘ಬೂಬರಾಜ ಸಾಮ್ರಾಜ್ಯ’ (ಕನ್ನಡಸಾಹಿತ್ಯ ಪರಿಷತ್ತಿನ ಗುಬ್ಬಿ ಸೋಲೂರು ಮುರುಗಾರಾಧ್ಯ ದತ್ತಿ ಪ್ರಶಸ್ತಿ), ಮತ್ತು ‘ಗಮ್ಯ’ ಅವರ ಕಾದಂಬರಿಗಳು. ಅವರ ಕತೆಗಳಿಗೆ ಹಲವು ಬಾರಿ ರಾಜ್ಯಮಟ್ಟದ ಪ್ರಶಸ್ತಿ ಬಂದಿದೆ. ಕತೆ, ಕಾದಂಬರಿ, ಅನುವಾದ, ವಿಮರ್ಶೆ, ಮಕ್ಕಳ ಸಾಹಿತ್ಯ, ಸಂಪಾದಿತ ಗ್ರಂಥಗಳು ಹೀಗೆ ವಿವಿಧ ಪ್ರಕಾರಗಳಲ್ಲಿ ಕೃತಿ ರಚಿಸಿರುವ ಡಾ. ಬಿ. ಜನಾರ್ದನ ಭಟ್ ಅವರ ಪ್ರಕಟಿತ ಕನ್ನಡ ಕೃತಿಗಳ ಸಂಖ್ಯೆ ೮೬. ಅವರು ಸಾಹಿತ್ಯ ವಿಮರ್ಶೆಗಾಗಿ ವಿ.ಎಂ. ಇನಾಂದಾರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಇದೀಗ ಕಾದಂಬರಿ ಕ್ಷೇತ್ರಕ್ಕೆ ಅವರು ಕೊಟ್ಟ ಕೊಡುಗೆಯನ್ನು ಗಮನಿಸಿ ವ್ಯಾಸರಾಯ ಬಲ್ಲಾಳ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

‍ಲೇಖಕರು avadhi

August 23, 2023

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: