ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಸಜ್ಜನ ಕೃಷ್ಣೇಗೌಡರು ಇನ್ನಿಲ್ಲ…

ಗುಂಡಣ್ಣ ಚಿಕ್ಕಮಗಳೂರು

ಕನ್ನಡ ರಂಗಭೂಮಿ, ಕಿರುತೆರೆ ಹಾಗೂ ಚಿತ್ರರಂಗದ ಹಿರಿಯ ನಟರು ಇಂದು ಮುಂಜಾನೆ ನಿಧನರಾಗಿದ್ದಾರೆ. ಇದೇ ಮಾರ್ಚ್ ತಿಂಗಳಲ್ಲಿ ಅವರಿಗೆ 80 ವರುಷ ತುಂಬಿತ್ತು. ಕರ್ನಾಟಕ ರಾಜ್ಯದ ಅಕೌಂಟೆಂಟ್ ಜನರಲ್ ಕಚೇರಿಯಲ್ಲಿ ಉದ್ಯೋಗದಲ್ಲಿದ್ದುಕೊಂಡು ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು.

ಅಬ್ಬೂರು ಜಯತೀರ್ಥ, ಆರ್.ನಾಗೇಶ್, ಶ್ರೀನಿವಾಸ ಪ್ರಭು, ಡಾ.ಬಿ.ವಿ.ರಾಜಾರಾಂ ಮುಂತಾದ ನಿರ್ದೇಶಕರುಗಳ ನಿರ್ದೇಶನದಲ್ಲಿ ಅಭಿನಯಿಸಿದ್ದರು.

‘ಮುಖ್ಯಮಂತ್ರಿ’ ನಾಟಕದಲ್ಲಿನ ಪಾತ್ರ ಇವರಿಗೆ ಖ್ಯಾತಿ ತಂದಿತ್ತು. ಚಿತ್ರರಂಗದಲ್ಲಿ ಪೋಷಕ ನಟನೆಗೆ
ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದಿದ್ದರು.

ಕೃಷ್ಣೇ‌ಗೌಡರು ಕ್ರೀಡಾ ಕ್ಷೇತ್ರದಲ್ಲೂ ಹೆಸರು ಮಾಡಿದ್ದವರು; ಅವರು ರಾಜ್ಯ ಮಟ್ಟದ ಉತ್ತಮ ವಾಲಿಬಾಲ್ ಪಟು ಆಗಿದ್ದವರು… ಹಿರಿಯ ಗೆಳೆಯರಾಗಿದ್ದ ಕೃಷ್ಣೇಗೌಡರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ….

‍ಲೇಖಕರು Avadhi

25 May, 2021

1 Comment

  1. Vasundhara k m

    ಸಹಜ ನಟ. ಸಂತಾಪಗಳು

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading