ಕೆ ಎಚ್ ಕಲಾಸೌಧದಲ್ಲಿ ’ಚೆರ್ರಿ ತೋಟ’

ಬೆಂಗಳೂರು ಥಿಯೇಟರ್ ಕಂಪನಿ ತನ್ನ ಚೊಚ್ಚಲ ಪ್ರಯೋಗ , ಚೆರ್ರಿ ತೋಟ ನಾಟಕದ ಎರಡನೇ ಪ್ರದರ್ಶನಕ್ಕೆ ಸಜ್ಜಾಗಿದೆ . ನಾಟಕದ ಬಗ್ಗೆ: ರಷ್ಯಾದ ಮಹಾನ್ ಲೇಖಕ, ನಾಟಕಕಾರ ಆಂಟನ್ ಚೆಕಾಫ್ 1904 ರಲ್ಲಿ ಬರೆದ ತನ್ನ ಕೊನೆಯ ನಾಟಕ ‘ದಿ ಚೆರ್ರಿ ಆರ್ಚರ್ಡ್’ ವಿಶ್ವದ ಶ್ರೇಷ್ಟ ನಾಟಕ ಕೃತಿಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ. ಬದಲಾದ ಸಾಮಾಜಿಕ, ರಾಜಕೀಯ ವ್ಯವಸ್ಥೆಗಳು ತೋರಬಹುದಾದ ಪಲ್ಲಟಗಳು, ಸ್ಥಿತ್ಯಂತರಗಳನ್ನು ಒಂದು ಚೆರ್ರಿ ತೋಟದ ಪ್ರತಿಮೆಯ ಮೂಲಕ ಹೆಣೆದಿರುವ ಚೆಕಾಫ್‌ನ ಈ ನಾಟಕ ತನ್ನ ದೇಶ, ಕಾಲಗಳನ್ನು ಮೀರಿ ಪ್ರಸ್ತುತವಾಗಿದೆ. ನಾಟಕದ ಕೇಂದ್ರವಾದ ಚೆರ್ರಿ ತೋಟ, ಹಲವು ಪ್ರತಿಮೆಗಳ ಸಂಕೇತವಾಗಿ ಕಾಣುತ್ತದೆ. ಬಾಲ್ಯದ ಸುಂದರ ನೆನಪುಗಳ ಪ್ರತೀಕವಾಗಿ ಒಮ್ಮೆ ಚೆರ್ರಿ ತೋಟ ಕಂಡರೆ, ಪರಿಸರ-ಪೃಕೃತಿಯ ಸುಂದರ ದೃಶ್ಯವಾಗಿ ಕೂಡ ಕಾಣುತ್ತದೆ. ಅಷ್ಟೇ ಅಲ್ಲದೆ, ಶತಮಾನಗಳ ಕಾಲ ಜನಸಮುದಾಯದಲ್ಲಿ ಬೇರು ಬಿಟ್ಟಿರುವ ನಂಬಿಕೆಯಾಗಿ ಕೂಡ ಚೆರ್ರಿ ತೋಟ ಗೋಚರಿಸುತ್ತದೆ. ಹೀಗೆ ಹಲವು ಧ್ವನಿಗಳನ್ನು, ಹಲವು ಅರ್ಥಗಳನ್ನು ಹೊಮ್ಮಿಸುತ್ತಾ ಸಾಗುವ ನಾಟಕ, ಭಾರತದಂತ ಭಿನ್ನ ವ್ಯವಸ್ಥೆಯಲ್ಲೂ ಪ್ರಸ್ತುತವಾಗಿ ಕಾಣುವ ಮೂಲಕ ಸಾರ್ವಕಾಲಿಕ ಶ್ರೇಷ್ಟ ನಾಟಕವೆಂದೆನಿಸಿಕೊಳ್ಳುತ್ತದೆ. ಒಂದು ಕಡೆ ಜಮೀನ್ದಾರಿ ಪದ್ದತಿಯ ಪಾಳೇಗಾರೀ ಮೌಲ್ಯಗಳನ್ನು ಉಳಿಸಿಕೊಳ್ಳುತ್ತ, ಪೋಷಿಸುತ್ತಾ, ಮತ್ತೊಂದು ಕಡೆ ಉದಾರೀಕರಣ, ಮುಕ್ತ ಮಾರುಕಟ್ಟೆಯ ಬಂಡವಾಳಷಾಹಿ ವ್ಯವಸ್ಥೆಗೆ ತನ್ನನ್ನು ತೆರೆದುಕೊಳ್ಳುತ್ತ, ಸಮಾಜವಾದದ ಕನಸನ್ನೂ ಕಾಣುತ್ತ ಸಾಗುತ್ತಿರುವ ಭಾರತದ ಪರಿಸ್ಥಿತಿಯಲ್ಲಿ, ಚೆರ್ರಿ ತೋಟವನ್ನು ಗಟ್ಟಿ ಬೇರು ಬಿಟ್ಟ ಸಾಮಾಜಿಕ ವ್ಯವಸ್ಥೆಯೊಂದರ ಪ್ರತೀಕವಾಗಿ ನೋಡಲು ನಾವು ಪ್ರಯತ್ನಿಸಿದ್ದೇವೆ.

ಚೆರ್ರಿ ತೋಟ

ಮೂಲ : ಆಂಟನ್ ಚೆಕಾಫ್ ಕನ್ನಡಕ್ಕೆ : ವೆಂಕಟೇಶ್ ಪ್ರಸಾದ್ ಪ್ರಸ್ತುತಿ : ಬೆಂಗಳೂರು ಥಿಯೇಟರ್ ಕಂಪನಿ ವಿನ್ಯಾಸ ಮತ್ತು ನಿರ್ದೇಶನ : ವೆಂಕಟೇಶ್ ಪ್ರಸಾದ್ ಸ್ಥಳ : ಕೆ. ಹೆಚ್ ಕಲಾಸೌಧ , ಹನುಮಂತ ನಗರ ದಿನಾಂಕ ಮತ್ತು ಸಮಯ : 13/06/2015 , ಸಂಜೆ 7:30 ಟಿಕೆಟ್‌ದರ : ರೂ. 100/- ಸಂಪರ್ಕಿಸಬೇಕಾದದೂರವಾಣಿ ಸಂಖ್ಯೆ : 9900182400 ; ವೆಬ್ ಸೈಟ್ : www.bookmyshow.com ; www.filmysphere.com

‍ಲೇಖಕರು G

June 13, 2015

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: