ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಶರೀಫಾ, ಮಂಜುನಾಥ ಲತಾಗೆ ಸಿದ್ಧಲಿಂಗ ಪಟ್ಟಣಶೆಟ್ಟಿ ಪುರಸ್ಕಾರ

-ಸಿದ್ದು ಕಾಲ

ಗದುಗಿನ ಸಾಹಿತ್ಯ ಪ್ರಕಾಶನ ಸಂಸ್ಥೆ ಸಾಂಗತ್ಯ ಪ್ರಕಾಶನ ಡಾ ಸಿದ್ಧಲಿಂಗ ಪಟ್ಟಣಶೆಟ್ಟಿ ಸಾಹಿತ್ಯ ಪುರಸ್ಕಾರವನ್ನು ೨೦೧೦ ರಿಂದ ನೀಡುವುದಾಗಿ ತಿರ್ಮಾನಿಸಿತ್ತು. ಅದಕ್ಕಾಗಿ ೨೦೦೫ ರಿಂದ ೨೦೦೯ ರವರೆಗೆ ಪ್ರಕಟಗೊಂಡ ಕವನ ಸಂಕಲನಗಳನ್ನು ಆಹ್ವಾನಿಸಿತ್ತು.

ಪ್ರಶಸ್ತಿಗೆ ಉತ್ತಮ ಪ್ರತಿಕ್ರಿಯೆ ದೊರಕಿ ನೂರಾ ಇಪ್ಪತ್ತೈದು ಕವಿಗಳು ಹಾಗೂ ಪ್ರಕಾಶಕರು ಸಂಕಲನಗಳನ್ನು ಸಾದರ ಪಡಿಸಿದ್ದರು. ಖ್ಯಾತ ಕವಿಗಳಾದ ಮೈಸೂರಿನ ಜಿ.ಕೆ.ರವೀಂದ್ರಕುಮಾರ, ಹಾವೇರಿಯ ಸತೀಶ ಕುಲಕರ್ಣಿ ಹಾಗೂ ಬೆಂಗಳೂರಿನ ಎಚ್. ಎಲ್. ಪುಷ್ಪಾ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿ ಅಂತಿಮವಾಗಿ ಹರಿಹರದ ಕೆ.ಶರೀಫಾ ಅವರ ‘ಬುರ್ಖಾ ಪ್ಯಾರಡೈಸ್’ ಮೈಸೂರಿನ ಮಂಜುನಾಥ ಲತಾ ಅವರ ‘ಆಹಾ ಅನಿಮಿಷ ಕಾಲ’ ಕಾವ್ಯ ಸಂಕಲನಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಿತು.

ಹತ್ತು ಸಾವಿರ ನಗದು ಪುರಸ್ಕಾರ ಹಾಗೂ ಸ್ಮರಣಿಕೆಗಳನ್ನು ನೀಡಲಾಗುವುದು. ಪ್ರಥಮ ವರ್ಷದ ಪುರಸ್ಕಾರವನ್ನು ಇಬ್ಬರೂ ಹಂಚಿಕೊಂಡಿದ್ದು ಪುರಸ್ಕೃತರಿಗೆ ತಲಾ ಐದು ಸಾವಿರ ನಗದು ಹಾಗೂ ಸ್ಮರಣೆಗಳನ್ನು ನೀಡಿ ಗೌರವಿಸಲಾಗುವುದೆಂದು ಸಾಂಗತ್ಯ ಪ್ರಕಾಶನದ ಸಂಚಾಲಕರಾದ ಡಾ ಜಿ. ಬಿ. ಪಾಟೀಲ ಹಾಗೂ ಸಿದ್ಧು ಯಾಪಲಪರವಿ ತಿಳಿಸಿದ್ದಾರೆ.

‍ಲೇಖಕರು avadhi

4 November, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

1 Comment

  1. r t sharan

    Shareefa akka

    Comgrats. Neevu kalaburgi bittu dashakagale kaledive. Naanu 8-10 varshadavaniddaga shahabazaarnalli nimmannu nodida nenapu. Patrikeyalli baruva nimma arthapoorna kavanagalu nimma nenapannu nannalli innoo ulisive. All the best & wish u get many more such laurels.

    R.T.Sharan (Grandson of Dr.Kurtakoti)

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading