
‘ಒಂದ್ನಿಮಿಷ ಬರ್ತೀನಿ ಇರಿ’ ಎಂದು ಟೆಡ್ ಟರ್ನರ್ ತಮ್ಮ ಖಾಸಗಿ ಕೋಣೆ ಹೊಕ್ಕರು. ಜಗತ್ತಿಗೆ ಜಗತ್ತೇ ನಿಬ್ಬೆರಗಾಗುವಂತೆ ಟೆಡ್ ಟರ್ನರ್ ಬೆಳೆದು ನಿಂತು ಬಿಟ್ಟಿದ್ದರು. ಮನೆಯ ಮೂಲೆಯಲ್ಲಿ ಕಣ್ಣೀರು ಉಕ್ಕಿಸುವ , ಹ ಹ ಹಾ ಎಂದು ಲಾಫರ್ ಕ್ಲಬ್ ಗಳಂತೆ ನಗಿಸುವ ವಸ್ತುವಾಗಿದ್ದ ದೂರದರ್ಶನ ಈಗ ಅಫೀಮಿನಂತೆ ಆಗಿ ಹೋಗಿತ್ತು. ಟೆಡ್ ಟರ್ನರ್ ಕೊಲ್ಲಿ ಯುದ್ಧಕ್ಕೆ ಆಂಟೆನಾ ಜೋಡಿಸಿದ್ದೇ ತಡ ಜಗತ್ತು ಟೆಲಿವಿಷನ್ ಎಂಬ ಮಾಯಾ ಜಿಂಕೆಯ ಬೆನ್ನ ಹಿಂದೆ ಬಿತ್ತು. ಮತ್ತೆ ಬಾಗಿಲು ತೆರೆದು ಟೆಡ್ ಟರ್ನರ್ ನಮ್ಮ ಮುಂದೆ ನಿಂತಾಗ ಅವರ ಕೈಯಲ್ಲಿ ಒಂದು ಪುಟ್ಟ ಪ್ರತಿಮೆ. ಟೆಡ್ ಜೊತೆ ಲೋಕಾಭಿರಾಮವಾಗಿ ಹರಟೆ ಕೊಚ್ಚುತ್ತಾ ‘ನಿಮಗೆ ತೀರಾ ಇಷ್ಟವಾದವರು ಯಾರು? ಜೇನ್ ಫಾಂಡಾಳನ್ನು ಬಿಟ್ಟರೆ..’ ಅಂತ ಕೇಳಿದ್ದೆ. ಅದಕ್ಕೆ ಉತ್ತರವಾಗಿ ಟೆಡ್ ಈ ಪ್ರತಿಮೆ ಹಿಡಿದು ನಿಂತಿದ್ದರು. ‘ವಾಹ್, ಗಾಂಧಿ!’ ಅಂತ ಆಶ್ಚರ್ಯದ ಉದ್ಘಾರ ಹೊರಟಿದ್ದು ನನ್ನಿಂದ ಮಾತ್ರವಲ್ಲ ಪಕ್ಕದಲ್ಲಿಯೇ ಚಿಲಿ, ದಕ್ಷಿಣ ಆಫ್ರಿಕಾ, ಸ್ಲೊವೇನಿಯಾ. ಜೆಕ್, ಜರ್ಮನಿ, ಕೀನ್ಯಾ, ಕೊರಿಯಾ, ಜಪಾನ್, ಆಸ್ಟ್ರೇಲಿಯಾ ದೇಶದ ಎಲ್ಲರ ಬಾಯಿಂದಲೂ ಈ ಉದ್ಘಾರ ಹೊರಬಿತ್ತು.






ನಿಮ್ಮ ಮಿರ್ಚಿ soooooooooooper…!
ಗಾಂಧೀ ತಾತನ ಬಗೆಗೆ ಸೊಗಸಾಗಿ ಬರೆದಿದ್ದೀರಿ…
ಕೆಂಪ್ ಮೆಣಸಿನ ಕಾಯ್
ಪಂಚು ಸೂಪರ್…!
ರಾಧಿಕಾ ಗಾಂಧೀ ಬಿಟ್ಟು ಹೋದಳಲ್ಲ ಸಾರ್…
ಬಹುಶಃ ಯಾವ ಗಾಂಧಿಯೂ ಮಿಸ್ ಆಗಲಿಲ್ಲ…!
ಪ್ರಿಯಾಂಕ ಗಾಂಧೀ ಮಕ್ಕಳ ಹೆಸರು ಇನ್ನೂ ಪಬ್ಲಿಕ್ ಆಗಿಲ್ಲ ಅಲ್ಲವಾ…?
Thanks……..
aadre, Priyanka Gandhi makkalige Gandhi hesru
baralla, Alva? : )