ಗೇಲ್ ಓಂವೆಡ್ತ್ ನೆನಪು ಮಾಸುವಂತದ್ದಲ್ಲ…

ಡಾ ವಡ್ಡಗೆರೆ ನಾಗರಾಜಯ್ಯ

ನಮ್ಮ ಕಾಲದ ಶ್ರೇಷ್ಠ ಸಮಾಜಶಾಸ್ತ್ರಜ್ಞೆ, ಸ್ತ್ರೀವಾದಿ ಚಿಂತಕಿ, ಮಾನವ ಹಕ್ಕುಗಳ ಹೋರಾಟಗಾರ್ತಿ, ಜಾತಿ ವಿನಾಶ ಚಳವಳಿಯ ಬಹು ಮುಖ್ಯ ಧ್ವನಿ, ಬಹುಜನ ಚಳವಳಿಯ ಮೇರು ಚಿಂತಕರಲ್ಲಿ ಒಬ್ಬರಾಗಿದ್ದ ಗೇಲ್ ಓಂವೆಡ್ತ್ ನಮ್ಮನ್ನು ಅಗಲಿದ್ದಾರೆ. ಅಮೆರಿಕಾದಲ್ಲಿ ಜನಿಸಿದ ಗೇಲ್ ತಮ್ಮ ಪಿಎಚ್ಡಿ ಅಧ್ಯಯನಕ್ಕೆಂದು ಭಾರತಕ್ಕೆ ಬಂದವರು.

‘ಅಂಬೇಡ್ಕರ್ ಚಿಂತನೆ ಮತ್ತು ಹೋರಾಟ’ದ ಬಗ್ಗೆ ಅಧ್ಯಯನ ಮಾಡಿ ಡಾಕ್ಟರೇಟ್ ಪಡೆದು ಭಾರತದಲ್ಲಿಯೇ ನೆಲೆಸಿ ತಮ್ಮ ಇಡೀ ಬದುಕನ್ನು ದಮನಿತ ಸಮುದಾಯಗಳ ಅಧ್ಯಯನಕ್ಕೆ ತೆತ್ತುಕೊಂಡವರು. ತಮ್ಮ ಪ್ರಖರ ಬೌದ್ಧಿಕತೆಯ ಮೂಲಕ ಅಂಬೇಡ್ಕರ್ ಚಿಂತನೆ ಮತ್ತು ದಲಿತ ಅಧ್ಯಯನವನ್ನು ವಿಶ್ವಮಟ್ಟಕ್ಕೆ ಬೆಳೆಸಿದ ಈ ಮೇರು ಚಿಂತಕಿಗೆ ಈ ದೇಶದ ದಮನಿತ ಸಮುದಾಯಗಳು ಯಾವತ್ತೂ ಋಣಿಯಾಗಿರುತ್ತವೆ.

ಅಂದ್ಹಾಗೆ, ಗೇಲ್ ಓಂವೆಡ್ತ್ ಅವರು ಬುದ್ಧಪೂರ್ವ ಯುಗದಲ್ಲಿ ಜೀವಿಸಿದ್ದು ಬೌದ್ಧಧಮ್ಮವನ್ನು ಮೊದಲಿಗೆ ಪ್ರತಿಪಾದಿಸುವ ಮೂಲಕ ಆದಿಬುದ್ಧ ಎನ್ನಿಸಿದ ಕಸ್ಸಪ ಮಾತಂಗನನ್ನು ಕುರಿತು, The Dalit ಎಂಬ ಇಂಗ್ಲಿಷ್ ಮ್ಯಾಗಜೀನ್ ನಲ್ಲಿ ಪ್ರಕಟಿಸಿದ್ದ Reclaiming Matanga ಎಂಬ ಸಂಶೋಧನಾ ಲೇಖನವನ್ನು ನಾನು ಕನ್ನಡಕ್ಕೆ ಅನುವಾದಿಸಿ ಪತ್ರಿಕೆಗಳಲ್ಲಿ ಪ್ರಕಟಿಸಿರುತ್ತೇನೆ.

ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ಡಾ.ರಹಮತ್ ತರೀಕೆರೆ ರಹಮತ್‌ ತರೀಕೆರೆ ಅವರ ಮಾರ್ಗದರ್ಶನದಲ್ಲಿ ನಾನು ರೂಪಿಸಿದ ‘ಕರ್ನಾಟಕದ ಆದಿಜಾಂಬವ ಮಾತಂಗ ಪರಂಪರೆ’ ಎಂಬ ನನ್ನ ಪಿಎಚ್.ಡಿ ಮಹಾಪ್ರಬಂಧದಲ್ಲಿಯೂ ಓಂವೆಡ್ತ್ ಅವರ ಚಿಂತನೆಗಳನ್ನು ದಾಖಲಿಸಿರುತ್ತೇನೆ.

ಹೋಗಿ ಬನ್ನಿ ಮೇಡಂ…. ನಿಮ್ಮ ಕೊಡುಗೆಗೆ ನಮ್ಮ ಜೈ ಭೀಮ್ ನಮನಗಳು.

‍ಲೇಖಕರು Admin

August 25, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: