ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ…

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2021ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ರೂ.15,000-00 ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು.

ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ / ಸ್ನಾತಕೋತ್ತರ ಪದವಿ(PHD)ಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.

ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ / ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ್ದರಿಂದ ತಮ್ಮ ಮೂಲ ಹಸ್ತಪ್ರತಿಯ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳುವುದು.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಫೆಬ್ರುವರಿ 15 2022 ರೊಳಗೆ ಕಳುಹಿಸಿಕೊಡಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ

ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ,
ಕನ್ನಡ ಭವನ, ಮೊದಲನೇ ಮಹಡಿ,
ಜೆ.ಸಿ. ರಸ್ತೆ,
ಬೆಂಗಳೂರು -560002
ಸಂಪರ್ಕಿಸಿ: 080-22484516 / 22107704

www.kannadapustakapradhikara.com

‍ಲೇಖಕರು Admin

January 17, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: