ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಛಂದ ಪುಸ್ತಕ ಹಸ್ತಪ್ರತಿ ಆಹ್ವಾನ

ಕಳೆದ ಹದಿನಾಲ್ಕು ವರುಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ ಈ ಸಾಲಿನ ‘ಛಂದ ಪುಸ್ತಕ’ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.
ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 8 ಕತೆಗಳನ್ನು ಡಿಟಿಪಿ ಮಾಡಿಸಿ, ಕೊರಿಯರ್ ಮೂಲಕ ಕಳುಹಿಸಬೇಕು. ಇ-ಮೇಲ್ ಮುಖಾಂತರ ಕತೆಗಳನ್ನು ಸ್ವೀಕರಿಸಲಾಗುವುದಿಲ್ಲ.
ಆಯ್ಕೆಯಾದ ಕತೆಗಾರರಿಗೆ ಮೂವತ್ತು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಈ ಪುಸ್ತಕವನ್ನು 2019ರ ಅಕ್ಟೋಬರ್‌ನಲ್ಲಿ, ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು. ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ.
ಕತೆಗಳನ್ನು ಕಳಿಸಬೇಕಾದ ವಿಳಾಸ:
ಛಂದ ಪುಸ್ತಕ, C/O ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು–560 076 (ದೂ. 98444 22782)
ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ:
ಜುಲೈ 22, 2019
ಹೆಚ್ಚಿನ ವಿವರಗಳಿಗೆ:
vas123u@rocketmail.com

‍ಲೇಖಕರು avadhi

2 July, 2019

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading