ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಛಂದ’ ಪುಸ್ತಕ ಹಸ್ತಪ್ರತಿ ಆಹ್ವಾನ

ಕಳೆದ ಹದಿನಾರು ವರುಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ, ಈ ಸಾಲಿನ ‘ಛಂದ ಪುಸ್ತಕ ಬಹುಮಾನ’ಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.

ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು ಎಂಟರಿಂದ ಹತ್ತು ಸ್ವಂತ ಕತೆಗಳನ್ನು ಕಂಪ್ಯೂಟರ್‌ನಲ್ಲಿ ಟೈಪ್ ಮಾಡಿ, ಮುದ್ರಿತ ಪುಟಗಳನ್ನು ಕೊರಿಯರ್ ಮೂಲಕ ಕಳುಹಿಸಬೇಕು. ಇ-ಮೇಲ್ ಮುಖಾಂತರ ಕತೆಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಯತಕಾಲಿಕಗಳಲ್ಲಿ ಪ್ರಕಟಿತ ಅಥವಾ ಅಪ್ರಕಟಿತ ಕತೆಗಳೆರಡನ್ನೂ ಪರಿಗಣಿಸುತ್ತೇವೆ.

ಆಯ್ಕೆಯಾದ ಕತೆಗಾರರಿಗೆ ಮೂವತ್ತು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಕೊರೊನಾ ಪರಿಸ್ಥಿತಿ ಸುಧಾರಿಸಿದರೆ ಸುಂದರವಾದ ಪುಸ್ತಕ ಬಿಡುಗಡೆ ಸಮಾರಂಭವನ್ನೂ ಮಾಡಲಾಗುವುದು. ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ. ಆದ್ದರಿಂದ ಮೂಲಪ್ರತಿಯನ್ನು ಕಳುಹಿಸಕೂಡದೆಂದು ಕೋರುತ್ತೇವೆ. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ. 

ಕತೆಗಳನ್ನು ಕಳಿಸಬೇಕಾದ ವಿಳಾಸ: ಛಂದ ಪುಸ್ತಕ, C/O ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು–560 076 (ವಾಟ್ಸಾಪ್. 98444 22782)

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ: ಜುಲೈ 10, 2021

ಹೆಚ್ಚಿನ ವಿವರಗಳಿಗೆ: vas123u@rocketmail.com 

‍ಲೇಖಕರು Avadhi

19 June, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading